Wednesday, June 12, 2024

Latest Posts

ಕೊ*ಲೆಯಾದ ರೇಣುಕಾಸ್ವಾಮಿ ದರ್ಶನ್ ಫ್ಯಾನ್!

- Advertisement -

Sandalwood News: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಕೊಲೆ ಕೇಸ್​ನಲ್ಲಿ ನಟ ದರ್ಶನ್ ಬಂಧನವಾಗಿದ್ದು, ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕುತೂಹಲದ ಸಂಗತಿ ಎಂದರೆ, ಹತ್ಯೆಯಾಗಿರುವುದು ದರ್ಶನ್ ಅವರ ಅಭಿಮಾನಿ ರೇಣುಕಾಸ್ವಾಮಿಯೇ..

ರೇಣುಕಾಸ್ವಾಮಿ ಮೊದಲಿನಿಂದಲೇ ದರ್ಶನ್ ಅವರ ಪಕ್ಕಾ ಅಭಿಮಾನಿಯಾಗಿದ್ದ. ದರ್ಶನ್, ವಿಜಯಲಕ್ಷ್ಮೀ ಸಂಸಾರ ಬಗ್ಗೆ ಯೋಚನೆ ಮಾಡ್ತಿದ್ದ ಸ್ವಾಮಿ, ದಂಪತಿ ಸಂಸಾರದಲ್ಲಿ ಪವಿತ್ರಾಗೌಡ ಬರುತ್ತಿದ್ದಾಳೆಂದು ತಿಳಿದು ಮೆಸೇಜ್ ಮಾಡಿದ್ದ. ಪವಿತ್ರಾಗೌಡಗೆ ಮೆಸೇಜ್ ಮಾಡುತ್ತಿರುವುದನ್ನು ತಿಳಿದ ಬಳಿಕ ರೇಣುಕಾಸ್ವಾಮಿಯ ಕೊಲೆ ಮಾಡಲಾಗಿದೆ ಎನ್ನಲಾಗುತ್ತಿದೆ.

ಚಿತ್ರದುರ್ಗ ಮೂಲದ ಬೆಂಗಳೂರಿನ ಅಪೊಲೋ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದ ರೇಣುಕಾಸ್ವಾಮಿ ಎಂಬುವನು ನಟ ದರ್ಶನ ಗೆಳತಿ ಪವಿತ್ರಾಗೌಡ ಅವರಿಗೆ ಅಶ್ಲೀಲ ಮೇಸೆಜ್, ಫೋಟೋ ಕಳಸಿದ್ದನು. ಈ ಹಿನ್ನೆಲೆಯಲ್ಲಿ ಜೂನ್​ 9 ರಂದು ರೇಣುಕಾಸ್ವಮಿ ಅವರನ್ನು ಕಾಮಾಕ್ಷಿಪಾಳ್ಯದಲ್ಲಿ ಕೊಲೆ ಮಾಡಲಾಗಿತ್ತು.

ಕೊಲೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಪ್ರಕರಣ ತನಿಖೆ ನಡೆಸಿದ್ದು, ಮೊದಲು ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದರು. ಇವರನ್ನು ವಿಚಾರಣೆ ನಡೆಸಿದಾಗ ನಟ ದರ್ಶನ್ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾರೆ.

Sandalwood News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್

ಪವಿತ್ರ ಗೌಡಗೆ ಅಶ್ಲೀಲ ಮೆಸೇಜ್ ಮಾಡುತ್ತಿದ್ದ ಕಾರಣ, ರೇಣುಕಾಸ್ವಾಮಿಯ ಕೊ*ಲೆ..?

ಮೋದಿ ಕ್ಯಾಬಿನೆಟ್ 3.0: ಯಾರಿಗೆ ಯಾವ ಖಾತೆ?

- Advertisement -

Latest Posts

Don't Miss