Movie News: “ಗುಲ್ಟು” ಚಿತ್ರದ ಮೂಲಕ ಜನಪ್ರಿಯರಾಗಿ, “ಹೊಂದಿಸಿ ಬರೆಯಿರಿ”, “ಹೊಯ್ಸಳ” ಚಿತ್ರಗಳ ಮೂಲಕ ಅಪಾರ ಜನಮನ್ನಣೆ ಪಡೆದಿರುವ ನಟ ನವೀನ್ ಶಂಕರ್.
ಪ್ರಸ್ತುತ ನವೀನ್ ಶಂಕರ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕರಾಗಿ ನಟಿಸಿದ್ದು, ಈ ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಈ ಚಿತ್ರದ ನವೀನ್ ಶಂಕರ್ ಅವರ ಲುಕ್ ಗೆ ಹಾಗೂ ಟೀಸರ್ ಗೆ ಅಭಿಮಾನಿಗಳು ಫಿದಾ ಆಗಿದ್ದಾರೆ.
ಆಶ್ರಗ ಕ್ರಿಯೇಷನ್ಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. “ಕ್ಷೇತ್ರಪತಿ” ಪೊಲಿಟಿಕಲ್ ಡ್ರಾಮ ಕಥಾಹಂದರ ಹೊಂದಿದೆ. ಶ್ರೀಕಾಂತ್ ಕಟಗಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇದು ಉತ್ತರ ಕರ್ನಾಟಕ ಭಾಗದಲ್ಲಿ ನಡೆಯುವ ಕಥೆ. ಹಾಗಾಗಿ ಹೆಚ್ಚಿನ ಭಾಗದ ಚಿತ್ರೀಕರಣ ಉತ್ತರ ಕರ್ನಾಟಕದಲ್ಲೇ ನಡೆದಿದೆ.
ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ವೈ ವಿ ಬಿ ಶಿವಸಾಗರ್ ಛಾಯಾಗ್ರಹಣ, ಮನು ಶೇಡ್ಗಾರ್ ಸಂಕಲನ, ನರಸಿಂಹ ಸಾಹಸ ನಿರ್ದೇಶನ ಹಾಗೂ ಜೀವನ್ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಈ ಹಿಂದೆ “ಹೊಂದಿಸಿ ಬರೆಯಿರಿ” ಚಿತ್ರದಲ್ಲಿ ನಾಯಕ – ನಾಯಕಿಯಾಗಿ ನಟಿಸಿ, ಜನಮನ ಗೆದ್ದಿರುವ, ನವೀನ್ ಶಂಕರ್ ಹಾಗೂ ಅರ್ಚನಾ ಜೋಯಿಸ್ “ಕ್ಷೇತ್ರಪತಿ” ಚಿತ್ರದಲ್ಲೂ ನಾಯಕ – ನಾಯಕಿಯಾಗಿ ನಟಿಸಿದ್ದಾರೆ. ಅಚ್ಯುತ್ ಕುಮಾರ್, ರಾಹುಲ್ ಐನಾಪುರ, ಕೃಷ್ಣ ಹೆಬ್ಬಾಳೆ, ಶೈಲಶ್ರೀ ಅರಸ್, ನಾಟ್ಯ ರಂಗ, ಹರ್ಷ ಅರ್ಜುನ್ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ.
ನಾಳೆ ಮಂಡ್ಯ ಜನತೆಗೆ ಬೀಗರ ಊಟದ ಔತಣಕ್ಕೆ ಆಮಂತ್ರಿಸಿದ ಸುಮಲತಾ ಅಂಬರೀಷ್..
“ಡೇರ್ ಡೆವಿಲ್ ಮುಸ್ತಫಾ” ಸಿನಿಮಾಗೆ ತೆರಿಗೆ ವಿನಾಯಿತಿ: ಸಿಎಂ ಸಿದ್ದರಾಮಯ್ಯ ಆದೇಶ
ಕನ್ನಡ ಚಿತ್ರರಂಗಕ್ಕೆ ಕಲಾವಿದನಾಗಿ ಮತ್ತೊಬ್ಬ ವೈದ್ಯ ಡಾ.ಪಿ.ವಿ.ಆರ್ ಲೀಲಾ ಮೋಹನ್ ಆಗಮನ