Movie News: ಈಗಾಗಲೇ ತನ್ನ ಹಾಡುಗಳ ಮೂಲಕ ಬಾರಿ ಸದ್ದನ್ನ ಮಾಡಿರುವ “ಭೀಮ” ಚಿತ್ರವು ಸೆನ್ಸಾರ್ ನಿಂದ ಎ ಸರ್ಟಿಫಿಕೇಟ್ ಪಡೆದುಕೊಂಡು , ಆಗಸ್ಟ್ 9 ಕ್ಕೆ ಚಿತ್ರವನ್ನ ಬಿಡುಗಡೆ ಮಾಡಲು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
ಚಿತ್ರದ ಹಾಡುಗಳನ್ನು ಪ್ರದರ್ಶಿಸಿದ ಚಿತ್ರತಂಡ, ಚಿತ್ರದಲ್ಲಿ ಬುಡಕಟ್ಟು ಜನಾಂಗದವರ ಹಾಡಿರುವ ಒಂದು ಹಾಡನ್ನು ಬಳಸಿಕೊಳ್ಳಲಾಗಿದ್ದು , ಆ ಹಾಡನ್ನು ಸೇರಿದಂತೆ ಮತ್ತಷ್ಟು ಜಾನಪದ ಶೈಲಿಯ ಬೇರೆ ಬೇರೆ ಹಾಡುಗಳನ್ನು ಆ ಜನಾಂಗದ ಪ್ರತಿಭೆಗಳನ್ನ ಕರೆಸಿ ವೇದಿಕೆಯ ಮೇಲೆ ಹಾಡಿಸಿದ್ದು ವಿಶೇಷವಾಗಿತ್ತು. ಪ್ರಸ್ತುತ ಚಿತ್ರೋದ್ಯಮದ ಪರಿಸ್ಥಿತಿ, ಸಕ್ಸಸ್ ಕಾಣದ ಚಿತ್ರಗಳ ನಡುವೆ ಹೊಸ ಚೈತನ್ಯ ನೀಡಲು ಬಲ ಭೀಮನಾಗಿ ಬರಲು ಸಿದ್ಧವಾಗಿರುವ ಚಿತ್ರ ಇದಾಗಿದೆ.
ಈ ಚಿತ್ರದ ನಿರ್ದೇಶಕ , ನಟ , ವಿಜಯ್ ಕುಮಾರ್ (ದುನಿಯಾ ವಿಜಯ್) ಮಾತನಾಡಿ, ಈ ಚಿತ್ರದ ಮೂಲಕ ಒಂದು ಸೂಕ್ಷ್ಮ ವಿಚಾರವನ್ನು ಜನರಿಗೆ ತಲುಪಿಸುವ ಪ್ರಯತ್ನ ಮಾಡುತ್ತಿದ್ದೇನೆ. ಸಂದೇಶವಿರುವ ಈ ಚಿತ್ರ ಎಲ್ಲರಲ್ಲೂ ಜಾಗೃತಿ ಮೂಡಿಸುವಂತೆ ಆಗಬೇಕು. ನಾನು ಹಾಗೂ ಸಂಭಾಷಣೆ ಕಾರ ಮಾಸ್ತಿ ಸೇರಿ ಕಥೆ ಹಂತದಿಂದ ಹಿಡಿದು ಚಿತ್ರಕಥೆ , ಸಂಭಾಷಣೆಯಿಂದ ಪ್ರತಿ ಹಂತದಲ್ಲೂ ಬಹಳ ಶ್ರಮ ಪಟ್ಟು ಕೆಲಸ ಮಾಡಿದ್ದೇವೆ. ಈಗ ಚಿತ್ರ ಸೆನ್ಸರ್ನಿಂದ ಹೊರ ಬಂದಿದೆ, ನಾನು ಶಾಲಾ ದಿನಗಳಿಂದಲೂ ಬಿ ಪ್ಲಸ್ , ಸಿ ಪ್ಲಸ್ , ಪಡೆಯುತ್ತಿದೆ. ಈಗ ನನ್ನ ಸಿನಿಮಾ ಮೂಲಕ ಸೆನ್ಸರ್ನಿಂದ ಎ ಪ್ಲಸ್ ಸಿಕ್ಕಂತಾಗಿದೆ ಎನ್ನುತ್ತಾ ಎ ಸರ್ಟಿಫಿಕೇಟ್ ಸಿಕ್ಕಿದ್ದನ್ನು ಸಮರ್ಥಿಸಿಕೊಂಡರು.
ಹಾಗೆ ಚಿತ್ರದ ಸಂಭಾಷಣೆ ವಿಚಾರವಾಗಿ ಒಂದಷ್ಟು ಕಟ್ಸ್ , ಮ್ಯೂಟ್ಸ್ ಮಾಡಲು ಹೇಳಿದ್ದಾರೆ, ಅದರಂತೆ ಎಲ್ಲವನ್ನ ಮಾಡುತ್ತೇವೆ. ವಿದ್ಯಾರ್ಥಿಗಳು , ಹರಿಹರಿಯದವರ ಬದುಕಿನ ದು ಸ್ಥಿತಿಯ ವಿಚಾರವು ಸೇರಿದಂತೆ ಒಂದಷ್ಟು ನಾ ಕಂಡು ಕೇಳಿದಂತ ಸತ್ಯಗಳನ್ನು ಹೊರಹಾಕುವ ಪ್ರಯತ್ನ ಭೀಮ ಚಿತ್ರದಲ್ಲಿ ಮಾಡಿದ್ದೇನೆ. ಹಾಗೂ ನನ್ನ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಹಾಗೂ ಜಗದೀಶ್ ಗೌಡ ತುಂಬಾ ಸಾತ್ ನೀಡಿದ್ದಾರೆ. ನನ್ನ ಎಲ್ಲಾ ವಿಚಾರಕ್ಕೂ ಸೈ ಎಂದಿದ್ದಾರೆ. ಮ್ಯೂಸಿಕ್ ಡೈರೆಕ್ಟರ್ ಚರಣ್ ರಾಜ್ ಈಗಾಗಲೇ ಹಾಡುಗಳ ಮೂಲಕ ಸಕ್ಸಸ್ ತಂದು ಕೊಟ್ಟಿದ್ದಾರೆ. ರೀ-ರೆಕಾರ್ಡಿಂಗ್ ಕೂಡ ಅದ್ಭುತವಾಗಿ ಮಾಡಿದ್ದಾರೆ.
ಇನ್ನು ಛಾಯಾಗ್ರಹಕ ಶಿವಸೇನಾ, ಸಂಕಲನ ದೀಪು. ಎಸ್. ಕುಮಾರ್ , ಸಂಭಾಷಣೆ ಮಾಸ್ತಿ , ಫೈಟ್ಸ್ಗಳನ್ನ ವಿನೋದ್ , ಚೇತನ್ ಡಿಸೋಜಾ, ಟೈಗರ್ ಶಿವ, ಗೌತಮ್ ಹಾಗೂ ಡ್ಯಾನ್ಸ್ ಕೋರಿಯೋಗ್ರಾಫಿ ಬಿ. ಧನಂಜಯ , ರಾಜು ಸೇರಿದಂತೆ ಇಡೀ ನಮ್ಮ ಚಿತ್ರಕ್ಕೆ ತಾರಾಬಳಗ ಹಾಗೂ ತಾಂತ್ರಿಕ ವರ್ಗ ಬಹಳಷ್ಟು ಶ್ರಮವಿಸಿ ಕೆಲಸ ಮಾಡಿದ್ದೇವೆ. ಬುಡಕಟ್ಟು ಜನಾಂಗದವರು ಸೇರಿದಂತೆ ಒಂದಷ್ಟು ಯುವ ಪ್ರತಿಭೆಗಳಿಗೆ ಅವಕಾಶ ಮಾಡಿಕೊಟ್ಟಿದ್ದೇನೆ. ನೀವೆಲ್ಲರೂ ಆಗಸ್ಟ್ 9ಕ್ಕೆ ನಮ್ಮ ಚಿತ್ರವನ್ನು ನೋಡಿ ಎಂದು ಕೇಳಿಕೊಂಡರು.
ಇನ್ನು ಈ ಚಿತ್ರದ ನಿರ್ಮಾಪಕರಾದ ಕೃಷ್ಣ ಸಾರ್ಥಕ್ ಮಾತನಾಡಿ, ನಮ್ಮ ಚಿತ್ರ ಉತ್ತಮವಾಗಿ ಮೂಡಿ ಬಂದಿದೆ, ಸೆನ್ಸರ್ ಹಂತದಲ್ಲಿ ಹೋದಾಗ ಕೊಂಚ ಭಯ ಇತ್ತು, ಆದರೆ ನಿರ್ದೇಶಕ ವಿಜಯ್ ಸರ್ ಸೆನ್ಸರ್ ಅಧಿಕಾರಿಗಳಿಗೆ ನಮ್ಮ ಸಿನಿಮಾದ ಕಂಟೆಂಟ್ ಬಗ್ಗೆ ಕನ್ವಿನ್ಸ್ ಮಾಡಿದ ರೀತಿ ಅದ್ಭುತ.
ಈಗಾಗಲೇ ಸಿನಿಮಾದ ಹಾಡುಗಳಿಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿದೆ. ಎಲ್ಲರೂ ಬಂದು ಚಿತ್ರ ನೋಡಿ ಪ್ರೋತ್ಸಾಹಿಸಿ ಎಂದರು. ಅದೇ ರೀತಿ ಮತ್ತೊಬ್ಬ ನಿರ್ಮಾಪಕ ಜಗದೀಶ್ ಗೌಡ ಮಾತನಾಡುತ್ತಾ ನಾನು ಒಬ್ಬ ವಿತರಕ , ಈ ಚಿತ್ರವನ್ನು ನಿರ್ಮಿಸಿದಾಗ ಒಂದಷ್ಟು ವಿಚಾರ ನನಗೂ ತಿಳಿಯಿತು. ಬಹಳ ಶ್ರಮವಹಿಸಿ ಒಂದು ಉತ್ತಮ ಸಂದೇಶವಿರುವ ಚಿತ್ರವನ್ನು ಬಿಡುಗಡೆ ಹಂತಕ್ಕೆ ತಂದಿದ್ದೇವೆ. ಸದ್ಯ ಚಿತ್ರಮಂದಿರಗಳ ಪರಿಸ್ಥಿತಿ ನಮಗೂ ತಿಳಿದಿದೆ.
ಮುಚ್ಚು ಹೋಗುತ್ತಿರುವ 18 ಚಿತ್ರಮಂದಿರಗಳು ನಮ್ಮ ಭೀಮ ಚಿತ್ರದ ಮೂಲಕ ಮತ್ತೆ ಓಪನ್ ಆಗಲಿದೆ. ಸುಮಾರು 400ಕ್ಕೂ ಹೆಚ್ಚು ಚಿತ್ರಮಂದಿರಲ್ಲಿ ನಮ್ಮ ಚಿತ್ರವನ್ನು ರಾಜ್ಯಾದ್ಯಂತ ಬಿಡುಗಡೆ ಮಾಡುತ್ತಿದ್ದೇವೆ. ಅದೇ ರೀತಿ ದೇಶದ ಬೇರೆ ಬೇರೆ ರಾಜ್ಯಗಳಲ್ಲೂ ಕೂಡ ನಮ್ಮ ಚಿತ್ರ ನೇರವಾಗಿ ರಿಲೀಸ್ ಆಗುತ್ತಿದ್ದು, ವಿದೇಶದಲ್ಲಿ ಕೂಡ ಬಿಡುಗಡೆಗೆ ಮಾತುಕತೆ ನಡೆಯುತ್ತಿದೆ. ಈಗಾಗಲೇ ಚಿತ್ರದ ಎಲ್ಲಾ ಏರಿಯ ಸೋಲ್ಡ್ ಔಟ್ ಆಗಿದ್ದು , ಬಿಕೆಟಿಯನ್ನು ನಾನೇ ಉಳಿಸಿಕೊಂಡಿದ್ದೇನೆ. ಸದ್ಯ ಸಂಕಷ್ಟದಲ್ಲಿರುವ ಚಿತ್ರೋದ್ಯಮಕ್ಕೆ ನಮ್ಮ ಚಿತ್ರದ ಮೂಲಕ ಒಂದಷ್ಟು ಚೈತನ್ಯ ಸಿಗುವಂತಾಗಲಿ, ನಮ್ಮ ಚಿತ್ರವನ್ನು ಚಿತ್ರಮಂದಿರದಲ್ಲಿ ಬಂದು ನೋಡಿ ಎಂದು ಕೇಳಿಕೊಂಡರು.
ಇನ್ನು ಈ ಚಿತ್ರದಲ್ಲಿ ಅಭಿನಯಿಸಿದಂತ ಕಲಾವಿದರು ಹಾಗೂ ತಾಂತ್ರಿಕ ವರ್ಗದವರು ತಮ್ಮ ತಮ್ಮ ಅಭಿಪ್ರಾಯಗಳನ್ನ ಹಂಚಿಕೊಂಡರು. ಈ ಭೀಮ ಚಿತ್ರದಲ್ಲಿ ಸಮಾಜಿ ಕಳಕಳಿ ಸಂದೇಶ ಒಳಗೊಂಡಿದೆಯಂತೆ.
ಈ ಚಿತ್ರ ಬಿಡುಗಡೆ ನಂತರ ಒಂದಷ್ಟು ಚರ್ಚೆಗೆ ದಾರಿ ಮಾಡಿಕೊಳ್ಳುತ್ತದೆ ಎಂಬ ಅಭಿಪ್ರಾಯ ಚಿತ್ರ ತಂಡದ್ದು,
ಬಹಳ ನೈಜಕ್ಕೆ ಒತ್ತುಕೊಟ್ಟು ಸೂಕ್ಷ್ಮ ಸ್ಥಳಗಳಲ್ಲಿ ಚಿತ್ರೀಕರಣ ಮಾಡಿರುವುದು ವಿಶೇಷ. ಇನ್ನು ನಟ , ನಿರ್ದೇಶಕ ವಿಜಯ್ ಕುಮಾರ್ ಅಲಿಯಾಸ್ (ದುನಿಯಾ ವಿಜಯ್) ತಮ್ಮ ಪಾತ್ರದ ಕುರಿತು ಹೆಚ್ಚು ಮಾತನಾಡದೆ , ನನ್ನ ಈ ನಿರ್ದೇಶನದ ಚಿತ್ರ ಖಂಡಿತ ಇಷ್ಟವಾಗುತ್ತೆ ಎಂಬ ಅಭಿಪ್ರಾಯವಿದೆ. ದಯವಿಟ್ಟು ಎಲ್ಲರೂ ಆಗಸ್ಟ್ 9ಕ್ಕೆ ಬಂದು ಚಿತ್ರವನ್ನು ನೋಡಿ ಎಂದು ವಿನಂತಿಸಿದರು.