ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಬು ತರ್ಲಘಟ್ಟ ಗ್ರಾಮದಲ್ಲಿ ಭಾರೀ ಮಳೆಯಿಂದ ಬೆಳೆ ನಾಶವಾ ಗಿದೆ. ಈ ಹಿನ್ನೆಲೆಯಲ್ಲಿ 45 ವರ್ಷದ ರೈತ ರುದ್ರಗೌಡ ಹುತ್ತನಗೌಡ ರಾಮನಗೌಡ್ರ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಮಾಹಿತಿಯ ಪ್ರಕಾರ, ಮೃತರು ಒಟ್ಟು 3 ಎಕರೆ ಜಮೀನು ಹೊಂದಿದ್ದ ರೈತರಾಗಿದ್ದರು. ಗೋವಿನ ಜೋಳ ಬೆಳೆದಿದ್ದರು. ಆದರೆ ಕಳೆದ ಕೆಲವು ದಿನಗಳಿಂದ ಸುರಿದ ಭಾರೀ ಮಳೆಗೆ ಬೆಳೆ ಸಂಪೂರ್ಣ ನಾಶಗೊಂಡಿರುವುದರಿಂದ ತೀವ್ರ ಆರ್ಥಿಕ ಸಂಕಷ್ಟಕ್ಕೆ ಒಳಗಾಗಿದ್ದರು.
ರೈತನಿಗೆ ಕೆವಿಜಿ ಬ್ಯಾಂಕ್ ಹಾಗೂ ಸಹಕಾರಿ ಬ್ಯಾಂಕುಗಳಿಂದ ಸುಮಾರು 8 ಲಕ್ಷ ರೂ. ಸಾಲ ಮಾಡಿಕೊಂಡಿದ್ದರು. ಅದನ್ನು ತೀರಿಸಲು ಸಾಧ್ಯವಾಗದ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಅನುಮಾನ ವ್ಯಕ್ತವಾಗಿದೆ.
ಈ ಘಟನೆ ಬು ತರ್ಲಘಟ್ಟ ಗ್ರಾಮದ ಬಸ್ ನಿಲ್ದಾಣದ ಹತ್ತಿರವಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ನಡೆದಿದೆ. ವಿಷಯ ತಿಳಿದ ತಕ್ಷಣ ಸ್ಥಳೀಯ ಗ್ರಾಮ ಪಂಚಾಯತಿ ಅಧಿಕಾರಿಗಳು ಹಾಗೂ ತಾಲ್ಲೂಕು ಪಂಚಾಯತಿ ಇಒ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪಿಡಿಓ ತಕ್ಷಣವಾಗಿ ಮುನ್ನೆಚ್ಚರಿಕೆಯ ಕ್ರಮವಾಗಿ ಕೆರೆಯ ಸುತ್ತಲೂ ಸೂಚನಾ ಫಲಕಗಳನ್ನು ಅಳವಡಿಸಿದ್ದಾರೆ. ಗ್ರಾಮ ಪಂಚಾಯತಿ ಅಧ್ಯಕ್ಷರು ತಂತಿಬೇಲಿ ಹಾಕುವ ಭರವಸೆ ಗ್ರಾಮಸ್ಥರಿಗೆ ನೀಡಿದ್ದಾರೆ.
ವರದಿ : ಲಾವಣ್ಯ ಅನಿಗೋಳ