ಉತ್ತರಪ್ರದೇಶ: ಉತ್ತರಪ್ರದೇಶದ ಲಖಿಂಪುರ ಖೇರಿಯಲ್ಲಿ ನಡೆದ ಹಿಂಸಾಚಾರದಲ್ಲಿ ರೈತರು ಸೇರಿದಂತೆ 8 ಮಂದಿ ಸಾವನ್ನಪ್ಪಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರೊಂದಿಗೆ ಉತ್ತರಪ್ರದೇಶ ಸರ್ಕಾರ ನಡೆಸಿದ ಮಾತುಕತೆ ಯಶಸ್ವಿಯಾಗಿದೆ. ಈ ಹಿನ್ನೆಲೆಯಲ್ಲಿ ಹೋರಾಟವನ್ನು ಕೈಬಿಡುವುದಾಗಿ ರೈತರು ತಿಳಿಸಿದ್ದಾರೆ.
ಇನ್ನು ಹಿಂಸಾಚಾರದಲ್ಲಿ ಮೃತಪಟ್ಟ ನಾಲ್ಕು ರೈತರ ಕುಟುಂಬಗಳಿಗೆ ಉತ್ತರಪ್ರದೇಶ ಸರ್ಕಾರ ತಲಾ 45 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ. ಜೊತೆಗೆ ಮೃತರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ಉದ್ಯೋಗ ಹಾಗೂ ಹಿಂಸಾಚಾರದಲ್ಲಿ ಗಾಯಗೊಂಡವರಿಗೆ ತಲಾ 10 ಲಕ್ಷ ರೂ. ಪರಿಹಾರವನ್ನು ಘೋಷಿಸಲಾಗಿದೆ.
ಉತ್ತರಪ್ರದೇಶದ ಲಖಿಂಪುರ್ ಖೇರಿಗೆ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರ ಭೇಟಿ ವಿರೋಧಿಸಿ ರೈತರು ಭಾನುವಾರ ಪ್ರತಿಭಟನೆ ನಡೆಸುತ್ತಿದ್ರು. ಈ ವೇಳೆ ಭುಗಿಲೆದ್ದ ಹಿಂಚಾರದಿಂದಾಗಿ ರೈತರು ಮತ್ತು ಬಿಜೆಪಿ ಕಾರ್ಯಕರ್ತರು ಸೇರಿ ಒಟ್ಟು 8 ಮಂದಿ ಮೃತಪಟ್ಟಿದ್ರು.