Thursday, November 13, 2025

Latest Posts

ತಿಮರೋಡಿ ಗ್ಯಾಂಗ್‌ಗೆ ಮತ್ತೆ ಭೀತಿ – ತನಿಖೆಗೆ ಹೈಕೋರ್ಟ್‌ ಅಸ್ತು!

- Advertisement -

ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ನಿಗೂಢ ಸಾವುಗಳ ಪ್ರಕರಣದ ತನಿಖೆಗೆ ಹೊಸ ತಿರುವು ಸಿಕ್ಕಿದೆ. ವಿಚಾರಣೆ ನಡೆಸಿದ ಹೈಕೋರ್ಟ್ ಇಂದು​ ಮಹತ್ವದ ತೀರ್ಪು ನೀಡಿದೆ. ಧರ್ಮಸ್ಥಳ ಠಾಣೆಯ ಎಫ್ಐಆರ್ 39/2025 ತನಿಖೆಗೆ, ಅಕ್ಟೋಬರ್‌ 30ರಂದು ತಡೆಯಾಜ್ಞೆ ನೀಡಲಾಗಿತ್ತು. ಇದೀಗ ತಡೆಯಾಜ್ಞೆ ತೆರವುಗೊಳಿಸಿ ತನಿಖೆಗೆ ಅನುಮತಿ ನೀಡಿದೆ. ಹೀಗಾಗಿ ಗಿರೀಶ್ ಮಟ್ಟಣ್ಣನವರ್​, ಮಹೇಶ್ ಶೆಟ್ಟಿ ತಿಮರೋಡಿ, ಟಿ. ಜಯಂತ್ ಹಾಗೂ ವಿಠ್ಠಲಗೌಡ ಎಸ್​ಐಟಿ ತನಿಖೆಯನ್ನ ಮತ್ತೆ ಎದುರಿಸಬೇಕಿದೆ.

ಪ್ರಕರಣ ಸಂಬಂಧ ಎಸ್‌ಐಟಿ ಪರ ವಾದಿಸಿದ್ದ ವಿಶೇಷ ಅಭಿಯೋಜಕ ಬಿ.ಎನ್.ಜಗದೀಶ್, ಮ್ಯಾಜಿಸ್ಟ್ರೇಟ್ ಅನುಮತಿ ಪಡೆದ ನಂತರವೇ ತನಿಖೆ ನಡೆಸಲಾಗುತ್ತಿದೆ. ಎಸ್‌ಐಟಿ ತನಿಖೆಯನ್ನು ಅರ್ಜಿದಾರರೇ ಹೊಗಳಿದ್ದಾರೆಂದು ನ್ಯಾಯಾಲಕ್ಕೆ ತಿಳಿಸಿದ್ದರು. ಈ ಹಿನ್ನಲೆ ತನಿಖೆಗೆ ನೀಡಿದ್ದ ತಡೆಯಾಜ್ಞೆ ತೆರವುಗೊಳಿಸಿ, ಆರೋಪಿಗಳಿಗೆ ಕಿರುಕುಳ ನೀಡದಂತೆ ಮಧ್ಯಂತರ ಆದೇಶ ವಿಸ್ತರಣೆ ಮಾಡಿ, ಹೈಕೋರ್ಟ್ ಪೀಠ ಆದೇಶಿಸಿದೆ.

ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ ರದ್ದು ಹೈಕೋರ್ಟ್‌ ಅರ್ಜಿ ಸಲ್ಲಿಸಿದ್ದರು. ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ಬಾಲನ್​, ಈಗಾಲೇ 9 ಬಾರಿ ನೋಟಿಸ್​ ನೀಡಿ ವಿಚಾರಣೆ ನಡೆಸಲಾಗಿದೆ. ಎಫ್ಐಆರ್‌ನಲ್ಲಿ ನಮ್ಮನ್ನು ಆರೋಪಿಗಳೆಂದು ಉಲ್ಲೇಖಿಸಿಲ್ಲ. ಖುದ್ದಾಗಿ ನೋಟಿಸ್ ಜಾರಿ ಮಾಡದೇ ವಾಟ್ಸ್ಯಾಪ್​, ಇಮೇಲ್‌ಗಳಲ್ಲಿ ನೀಡಿದ್ದಾರೆ.
BNSS ಸೆಕ್ಷನ್​​ 35(3) ಅಡಿಯಲ್ಲಿ ಎಸ್ಐಟಿ ಸಮನ್ಸ್ ನೀಡಿರುವುದು ಕಾನೂನು ಬಾಹಿರ. ನಾವು ಆರೋಪಿಗಳೂ ಅಲ್ಲ, ಸಾಕ್ಷಿಯೂ ಅಲ್ಲವೆಂದು ವಾದಿಸಿದ್ದರು.

ರಾಜಕೀಯ , ಧಾರ್ಮಿಕ ಮತ್ತು ಸಂಘಟನಾತ್ಮಕ ವೈರತ್ವದಿಂದ ನೋಟಿಸ್ ನೀಡಲಾಗಿದೆ. ವಿಚಾರಣೆ ಹೆಸರಲ್ಲಿ ಬೆಳಗ್ಗೆಯಿಂದ ಮಧ್ಯರಾತ್ರಿವರೆಗೆ ಕೂರಿಸಲಾಗುತ್ತೆ. ಈಗಾಗಲೇ 150 ಗಂಟೆಗೂ ಹೆಚ್ಚು ಕಾಲ ಅರ್ಜಿದಾರರ ವಿಚಾರಣೆ ನಡೆಸಲಾಗಿದೆ. ಆರಂಭದಲ್ಲಿ 211(a) ಅಡಿ ಎಫ್‌ಐಆರ್ ದಾಖಲಿಸಿ ನಂತರ ಬೇರೆ ಸೆಕ್ಷನ್ ಸೇರಿಸಿದ್ದಾರೆ ಎಂದು ವಾದಿಸಿದ್ದರು. ವಾದ – ಪ್ರತಿವಾದ ಆಲಿಸಿದ್ದ ನ್ಯಾಯೂರ್ತಿ ಮೊಹಮ್ಮದ್ ನವಾಜ್ ಅವರಿದ್ದ ಪೀಠ, ಪ್ರಕರಣದ ತನಿಖೆಗೆ ನವೆಂಬರ್‌ 12ರವರೆಗೆ ತಡೆ ನೀಡಿ ಆದೇಶಿಸಿತ್ತು.

ವರದಿ: ರಂಜಿತ ರೇವಣ್ಣ ನಾಟನಹಳ್ಳಿ

- Advertisement -

Latest Posts

Don't Miss