Dharwad News: ಧಾರವಾಡ: ಧಾರವಾಡದ ಯರಿಕೊಪ್ಪ ಗ್ರಾಪಂ ಪಿಡಿಒ ಆತ್ಮಹತ್ಯೆ ಯತ್ನ ಪ್ರಕರಣವನ್ನು ಖಂಡಿಸಿ, ಧಾರವಾಡದಲ್ಲಿ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದಿಂದ, ಸರ್ಕಾರಿ ನೌಕರರು ಪ್ರತಿಭಟನೆ ನಡೆಸಿದ್ದಾರೆ.
ಆರ್‌ಟಿಐ ಕಾರ್ಯಕರ್ತನ ಕಿರುಕುಳಕ್ಕೆ ಬೇಸತ್ತು ಪಿಡಿಒ ನಾಗರಾಜ್ ಗಿಣಿವಾಲದ್ ಆತ್ಮಹತ್ಯೆಗೆ ಯತ್ನಿಸಿದ್ದರು. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಿಲ್ಲದೇ, ನಾಗರಾಜ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಘಟನೆಗೆ ಕಾರಣವಾದವರ ಮೇಲೆ ಕಠಿಣ ಕ್ರಮಕ್ಕೆ ಆಗ್ರಹಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಗಿಣಿವಾಲದ್ ರೀತಿಯಲ್ಲಿ ಅನೇಕರಿಗೆ ಕಿರುಕುಳ ಆಗುತ್ತಿದೆ. ಸರ್ಕಾರಿ ನೌಕರರಿಗೆ ಸರಿಯಾಗಿ ಕೆಲಸ ಮಾಡಲು ಆಗುತ್ತಿಲ್ಲ. ನೌಕರರಿಗೆ ಕೆಲಸದಲ್ಲಿ ಭದ್ರತೆ ಇಲ್ಲದಂತಾಗಿದೆ. ಇನ್ನು ತಅನೇಕ ಕಡೆ ನೌಕರರು ಮಾನಸಿಕ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಕೆಲವರು ರಕ್ತದೊತ್ತಡಗಳಿಗೆ ಸಿಲುಕಿ ಸಾವನ್ನಪ್ಪಿದ್ದಾರೆ. ಹೀಗಾಗಿ ಸರ್ಕಾರಿ ಸಿಬ್ಬಂದಿಗೆ ಮಾನಸಿಕ ಕಿರುಕುಳ ಆಗದಂತೆ ಕ್ರಮ ವಹಿಸಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ರವಾನಿಸಿದ್ದಾರೆ.
ಕಾಂಗ್ರೆಸ್ ಪಕ್ಷದ ಪೊಳ್ಳು ಗ್ಯಾರಂಟಿಗಳನ್ನು ಜನ ನಂಬಲಿಲ್ಲ: ಬಿ.ವೈ.ವಿಜಯೇಂದ್ರ
ವಿಪಕ್ಷ ನಾಯಕ, ರಾಜ್ಯಾಧ್ಯಕ್ಷ ಬದಲಾಗುವವರೆಗೂ ಶಾಸಕಾಂಗ ಸಭೆಗೆ ಹಾಜರಾಗಲ್ಲ : ಯತ್ನಾಳ್