Friday, July 11, 2025

Latest Posts

‘ದೀನ-ದಲಿತರು, ಬಡವರು ಶೋಷಿತರ ಧ್ವನಿಯಾಗಿ ಈ ಸಂಸ್ಥೆ ಕಾರ್ಯನಿರ್ವಹಿಸಲಿದೆ’

- Advertisement -

ಬೆಂಗಳೂರು: ಸಾರ್ವಜನಿಕರು ಸಮಾಜದಲ್ಲಿ ಉತ್ತಮವಾಗಿ ಜೀವನ ನಡೆಸಲು ಮಾನವ ಹಕ್ಕುಗಳು ಅವಶ್ಯಕವೆಂದು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಕೆ.ಎನ್.ಸಿ ಸುರೇಶ್ ಹೇಳಿದರು.

ಕೊರೊನಾ ಸಂದರ್ಭದಲ್ಲಿ ತಮ್ಮ ಪ್ರಾಣವನ್ನೂ ಲೆಕ್ಕಿಸದೆ ಕಾರ್ಯನಿರ್ವಹಿಸಿದ ಕೊರೊನಾ ವಾರಿಯರ್ಸ್ ಗಳಾದ ಪೊಲೀಸರು, ಬಿಬಿಎಂಪಿ ಸಿಬ್ಬಂದಿ, ವೈದ್ಯರು ಹಾಗೂ ಪತ್ರಕರ್ತರಿಗೆ ಸ್ಮರಣಿಕೆಗಳನ್ನು ನೀಡಿ ಗೌರವಿಸಲಾಯಿತು.

ಇದೇ ವೇಳೆ ಕರ್ನಾಟಕ ಟಿವಿ ಜೊತೆ ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯ ಸಂಸ್ಥಾಪಕ ರಾಜ್ಯಾಧ್ಯಕ್ಷ ಕೆ.ಎನ್.ಸಿ ಸುರೇಶ್ ಮಾತನಾಡಿ, ಇಂದು ಮಾನವ ಹಕ್ಕುಗಳ ಉಲ್ಲಂಘನೆ ವಿವಿಧ ರೀತಿಯಲ್ಲಿ ಆಗುತ್ತಿದೆ. ಸಮಯಕ್ಕೆ ಸರಿಯಾಗಿ ನ್ಯಾಯ ಸಿಗದಿದ್ದರೂ ಸಹ, ಮಾನವ ಹಕ್ಕುಗಳ ಉಲ್ಲಂಘನೆಯಾದಂತೆ. ಹೀಗಾಗಿ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಸಿಗುವ ಸಲುವಾಗಿ ನಾವು ಮಾನವ ಹಕ್ಕುಗಳ ಸಂರಕ್ಷಣಾ ಸಂಸ್ಥೆಯನ್ನು ಸ್ಥಾಪಿಸಿದ್ದೇವೆ. ದೀನ-ದಲಿತರು, ಬಡವರು ಶೋಷಿತರ ಧ್ವನಿಯಾಗಿ ಈ ಸಂಸ್ಥೆ ಕಾರ್ಯನಿರ್ವಹಿಸಲಿದೆ ಎಂದರು.

ಮಾನವ ಹಕ್ಕುಗಳು ಅನೇಕ ಉದ್ದೇಶಗಳನ್ನು ಹೊಂದಿದೆ. ಮನುಷ್ಯ ಪ್ರಪಂಚದಲ್ಲಿ ಮುಕ್ತವಾಗಿ ಜೀವಿಸುವ ಮತ್ತು ಭೇದ-ಭಾವವಿಲ್ಲದೇ ಬದುಕುವ ಹಕ್ಕು ಹೊಂದಿದ್ದಾನೆ. ಯಾರ ಗುಲಾಮಗಿರಿಯಲ್ಲೂ ಇರದೇ, ಸ್ವತಂತ್ರರಾಗಿ ಜೀವಿಸಲು ಉತ್ತಮ ಶಿಕ್ಷಣದಿಂದ ಮಾತ್ರ ಸಾಧ್ಯ. ಹೀಗಾಗಿ ಸರ್ಕಾರಿ ಶಾಲೆಗಳಿಗೆ ಹೆಚ್ಚಿನ ಒತ್ತು ನೀಡಬೇಕು. ಹಿಂಸೆ ಮತ್ತು ಅಮಾನವೀಯವಾಗಿ ಬೇರೊಬ್ಬರಿಂದ ಶಿಕ್ಷೆಗೆ ಒಳಗಾಗದಂತೆ ಜೀವಿಸುವ ಹಕ್ಕುಗಳು ಸೇರಿದಂತೆ ವಿವಿಧ ಉದ್ದೇಶಗಳನ್ನು ನಮ್ಮ ಸಂಸ್ಥೆ ಹೊಂದಿದೆ ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ರಾಜ್ಯಾದ್ಯಂತ ಆಗಮಿಸಿದ್ದ ಸಾವಿರಾರು ಕಾರ್ಯಕರ್ತರಿಗೆ ಮಾನವ ಹಕ್ಕುಗಳ ಪ್ರತಿಜ್ಞಾವಿಧಿ ಬೋಧಿಸಲಾಯಿತು.
ನಾಗೇಂದ್ರ ಆರೂಡಿ, ಕರ್ನಾಟಕ ಟಿವಿ ಬೆಂಗಳೂರು

- Advertisement -

Latest Posts

Don't Miss