Film News:
ಮಠ’ ಸಿನಿಮಾ ಮೂಲಕ ಗುರು ಪ್ರಸಾದ್ ನಿರ್ದೇಶಕರಾಗಿ ಎಂಟ್ರಿ ಕೊಟ್ಟಿದು . ಮಠ ದೊಡ್ಡ ಮಟ್ಟದ ಖ್ಯಾತಿ ತಂದುಕೊಟ್ಟ ಸಿನಿಮಾವಾಗಿದೆ. ಬಳಿಕ ಎದ್ದೇಳು ಮಂಜುನಾಥ, ಡೈರೆಕ್ಟರ್ ಸ್ಪೆಷಲ್ ಸೇರಿದಂತೆ ಇನ್ನು ಕೆಲವು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ.ಚೆಕ್ ಬೌನ್ಸ್ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರು ಪ್ರಸಾದ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರ ಪೊಲೀಸರು ಗುರು ಪ್ರಸಾದ್ ಅವರನ್ನು ಬಂಧಿಸಿದ್ದಾರೆ.
ಶ್ರೀನಿವಾಸ್ ಹೆಸರಿನ ವ್ಯಕ್ತಿಯೊಬ್ಬರು ಗುರುಪ್ರಸಾದ್ ವಿರುದ್ಧ ಚೆಕ್ ಬೌನ್ಸ್ ಪ್ರಕರಣ ದಾಖಲಿಸಿದ್ದರು.ಪ್ರಕರಣದ ವಿಚಾರಣೆಗೆ ಗುರುಪ್ರಸಾದ್ ಸತತವಾಗಿ ಗೈರಾಗಿದ್ದರಿಂದ ಅವರ ವಿರುದ್ಧ ಜಾಮೀನು ರಹಿತ ವಾರೆಂಟ್ ಹೊರಡಿಸಲಾಗಿತ್ತು.ಶ್ರೀನಿವಾಸ್ ಅವರಿಗೆ ಗುರುಪ್ರಸಾದ್ 30 ಲಕ್ಷ ಹಣ ನೀಡಬೇಕಿತ್ತು ಎನ್ನಲಾಗಿದೆ. ಈ ಸಂದರ್ಭದಲ್ಲಿ ಗುರುಪ್ರಸಾದ್ ನೀಡಿದ ಚೆಕ್ ಬೌನ್ಸ್
ಆಗಿವೆ.ಎನ್. ಐ. ಆಯಕ್ಟ್ ಅಡಿ ಗುರುಪ್ರಸಾದ್ ವಿರುದ್ಧ ಚೆಕ್ ಬೌನ್ಸ್ ಕೇಸ್ ನಲ್ಲಿ ವಾರಂಟ್ ಜಾರಿಯಾಗಿದೆ.
ರೈತರಿಗಾಗಿ ಸಂಕ್ರಾಂತಿ ಹಬ್ಬದಂದು ರಿಲೀಸ್ ಆಗುತ್ತಿದೆ ‘ಪ್ರಜಾರಾಜ್ಯ’ದ ಸುಂದರ ರೈತ ಗೀತೆ
‘ಸ್ವಾತಿ ಮುತ್ತಿನ ಮಳೆ ಹನಿಯೇ’ ನಿಮ್ಮೆಲ್ಲರನ್ನು ಪ್ರೀತಿ-ಪ್ರೇಮ ದೊಂದಿಗೆ ಒಲವಾಗುವಂತೆ ಮಾಡುತ್ತೆ: ರಮ್ಯಾ