Thursday, March 13, 2025

Latest Posts

BJP ಮುಖಂಡನ ವಿರುದ್ಧ FIR ದಾಖಲು.!

- Advertisement -

ಬೆಂಗಳೂರು: ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಮುಖಂಡ ಎನ್.ಆರ್.ರಮೇಶ್ ವಿರುದ್ಧ ಬೆಂಗಳೂರಿನ ಬನಶಂಕರಿ ಪೊಲೀಸ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಕೋವಿಡ್ ನಿಯಮ ಉಲ್ಲಂಘಿಸಿ ಹುಟ್ಟುಹಬ್ಬ ಆಚರಿಸಿದ್ದ ಎನ್.ಆರ್.ರಮೇಶ್, ಮನೆಯ ಬಳಿಯೇ ವೇದಿಕೆ ನಿರ್ಮಿಸಿ, ಭರ್ಜರಿ ಕಾರ್ಯಕ್ರಮ ಆಯೋಜನೆ ಮಾಡಿದ್ದರು.

ಮಾಸ್ಕ್, ದೈಹಿಕ ಅಂತರ ಮರೆತು ನೂರಾರು ಜನರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಕೋವಿಡ್ ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಇದೀಗ ಎನ್.ಆರ್.ರಮೇಶ್ ವಿರುದ್ಧ ಎನ್ ಡಿಎಂಎ ಆಕ್ಟ್ ( NDMA Act) ಅಡಿ ಎಫ್ ಐ ಆರ್ (FIR) ದಾಖಲಾಗಿದೆ.

ಜನಪ್ರತಿನಿಧಿಗಳು, ಜನನಾಯಕರೇ ಕೊರೊನಾ ನಿಯಮ ಉಲ್ಲಂಘನೆ ಮಾಡಿ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಜನರ ಕೆಂಗಣ್ಣಿಗೆ ಕಾರಣವಾಗಿತ್ತು.

ಜನಪ್ರತಿನಿಧಿಗಳಿಗೊಂದು, ಜನಸಾಮಾನ್ಯರಿಗೊಂದು ಕಾನೂನೇ? ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಜನಾಕ್ರೋಶ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಎಚ್ಚೆತ್ತ ಪೊಲೀಸ್ ಅಧಿಕಾರಿಗಳು ಇದೀಗ ಕೋವಿಡ್ ನಿಯಮ ಉಲ್ಲಂಘಿಸುತ್ತಿರುವ ರಾಜಕೀಯ ಮುಖಂಡರ ವಿರುದ್ಧವೂ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳುತ್ತಿದ್ದಾರೆ.

- Advertisement -

Latest Posts

Don't Miss