ಬೆಂಗಳೂರು : ಜಯನಗರದ ಸೌತ್ ಎಂಡ್ ಸರ್ಕಲ್(South End Circle of Jayanagar)ಬಳಿ ಚಲಿಸುತ್ತಿದ್ದ ಬಿಎಂಟಿಸಿ ಬಸ್(BMTC Bus)ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮೆಜೆಸ್ಟಿಕ್ ನಿಂದ ಸೌತ್ ಎಂಡ್ ಸರ್ಕಲ್ ಮಾರ್ಗವಾಗಿ ಬನಶಂಕರಿ ಬಸ್ ನಿಲ್ದಾಣ(Banashankari Bus Stand)ಕ್ಕೆ ತೆರಳುತ್ತಿದ್ದ ಬಸ್ ನಂಬರ್ 258 F ನಲ್ಲಿ ನಂದ ಟಾಕೀಸ್(Nanda Talkies)ಬಳಿ ಇದ್ದಕ್ಕಿದ್ದಂತೆ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ.ಬಸ್ ಚಾಲಕ ತಕ್ಷಣ ಬಸ್ ನಿಲ್ಲಿಸಿ ಪ್ರಯಾಣಿಕರನ್ನು ಹೊರಗೆ ಕಳಿಸಿದ್ದಾರೆ. ಈ ಘಟನೆಯಲ್ಲಿ ಯಾವುದೇ ರೀತಿಯಲ್ಲೂ ಪ್ರಾಣಹಾನಿ ಸಂಭವಿಸಿಲ್ಲ. ಈ ಪ್ರಕರಣ ಜಯನಗರ ಪೊಲೀಸ್ ಠಾಣೆ ವ್ಯಾಪ್ತಿ(Jayanagar Police Station jurisdiction)ಯಲ್ಲಿ ಕಂಡುಬಂದಿದ್ದು, ಅಗ್ನಿಶಾಮಕ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.ಬಸ್ ನಲ್ಲಿ ಪ್ರಯಾಣಿಸುತ್ತಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರಿಗೆ ಮತ್ತೊಂದು ಬಸ್ ನಲ್ಲಿ ಪ್ರಯಾಣ ಮಾಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ.