Laxmi hebbakar: ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ:

ಉಡುಪಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್.ಅವರು ಉಡುಪಿಯ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಇಂದು ಪ್ರವಾಸೋದ್ಯಮ ಹಾಗೂ ಮೀನುಗಾರಿಕಾ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿಗೆ ಬೇಕಾದ ಯೋಜನೆಗಳ ಕುರಿತು ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ನಂತರ ಉಡುಪಿ: ಉಡುಪಿ ಜಿಲ್ಲಾ ಪಂಚಾಯತ್ ಆವರಣದಲ್ಲಿ ನಡೆದ ಉಡುಪಿ ಜಿಲ್ಲಾ ಸರಕಾರಿ ಪದವಿಪೂರ್ವ ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳಿಗಾಗಿ CET/NEET/JEE ಆನ್ ಲೈನ್ ತರಬೇತಿಗೆ ಚಾಲನೆ ನೀಡಿದ ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೇರಣಾ ನುಡಿಗಳನ್ನಾಡಿದ ಸಚಿವರು, ನನಗೆ ವೈದ್ಯಳಾಗಬೇಕು ಎಂಬ ಕನಸಿತ್ತು.

ನನ್ನ ಮಗ ಇಂಜಿನಿಯರ್ ಆದ. ಸೊಸೆ ಡಾಕ್ಟರ್ ಆಗಿದ್ದಾಳೆ. ಸೊಸೆ ಮೂಲಕ ಕುಟುಂಬದಲ್ಲಿ ವೈದ್ಯರ ಕೊರತೆ ನೀಗಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು

About The Author