- Advertisement -
ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ್ದಾರೆ. ಕರ್ನಾಟಕದಾದ್ಯಂತ ಎಡಬಿಡದೆ ಮಳೆ ಸುರಿಯುತ್ತಿದ್ದು, ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಜಲ ದಿಗ್ಬಂಧನಕ್ಕೆ ರಾಜ್ಯಕ್ಕೆ ರಾಜ್ಯವೆ ಮುಳುಗಿದ್ದು, ಲೆಕ್ಕವಿಲ್ಲದಷ್ಟು ಆಸ್ತಿಪಾಸ್ತಿ ನೀರಿನಲ್ಲಿ ಕೊಚ್ಚಿಹೊಗಿದ್ದು, ಜನ ಜಾನುವಾರುಗಳಿಗೆ ಸಂಕಷ್ಟ ಎದುರಾಗಿದೆ.
ಅದರಲ್ಲೂ ಉತ್ತರ ಕರ್ನಾಟಕದ ಜಿಲ್ಲೆಗಳು ಬೀಕರ ಪ್ರವಾಹ ಎದುರಿಸುತ್ತಿವೆ. ಈ ನಿಟ್ಟಿನಲ್ಲಿ ಪ್ರವಾಹ ಪ್ರದೇಶಗಳಿಗೆ ಭೇಟಿ ನೀಡಿರುವ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಪ್ರವಾಹ ಸಂತ್ರಸ್ತರೊಡನೆ ಮಾತನಾಡಿ ಸಾಂತ್ವನ ಹೇಳಿದ್ದಾರೆ. ಮೊದಲು ಬೆಳಗಾವಿ ನಗರದ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿದ ಕೇಂದ್ರ ಸಚಿವೆ, ರಾಜ್ಯಕ್ಕೆ ಸೂಕ್ತ ನೆರವು ನೀಡುವ ಬಗ್ಗೆ ಭರವಸೆ ನೀಡಿದ್ದಾರೆ.
- Advertisement -