Monday, November 17, 2025

Latest Posts

ಆಹಾರದ ಬಿಕ್ಕಟ್ಟು ಹೆಚ್ಚಾಗಿದ್ದು ಜನರು ಕಡಿಮೆ ಊಟ ಮಾಡಿ; ಕಿಮ್ ಮನವಿ..!

- Advertisement -

www.karnatakatv.net: ಉತ್ತರ ಕೊರಿಯಾದಲ್ಲಿ ಆಹಾರ ಬಿಕ್ಕಟ್ಟು ಹೆಚ್ಚಾಗುತ್ತಿದ್ದು, ಜನರು ಕಡಿಮೆ ಊಟವನ್ನು ಮಾಡುವುದಾಗಿ ಕೊರಿಯಾ ನಾಯಕ ಕಿಮ್ ಜಾಂಗ್ ಉನ್ ಮನವಿಯನ್ನು ಮಾಡಿಕೊಂಡಿದ್ದಾರೆ.

ದೇಶದಲ್ಲಿನ ಆಹಾರ ಬಿಕ್ಕಟ್ಟಿನ ಹಿನ್ನೆಲೆಯಲ್ಲಿ ಅಧಿಕಾರಿಗಳು ಕೃಷಿ ಉತ್ಪಾದನೆಯನ್ನು ಹೆಚ್ಚಳ ಮಾಡಲು ಮಾರ್ಗೋಪಾಯ ಕಂಡುಹಿಡಿಯಬೇಕೆoದು ಕಿಮ್ ಮನವಿ ಮಾಡಿಕೊಂಡಿದ್ದಾರೆ. ಕೊರಿಯಾದ ಜನರು 2025ರವರೆಗೂ ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು ಎಂದು ಕಿಮ್ ಜಾನ್ ಉನ್ ಮನವಿ ಮಾಡಿದ್ದಾರೆ. ಉತ್ತರಕೊರಿಯಾದ ಸರ್ವಾಧಿಕಾರಿ ಕಿಮ್ ಕಠಿಣ ಮತ್ತು ವಿಲಕ್ಷಣ ಆದೇಶಗಳನ್ನು ಹೊರಡಿಸುವ ಮೂಲಕ ಕುಖ್ಯಾತಿ ಗಳಿಸಿದ್ದು, ಇದೀಗ ಅಂತಹ ಮತ್ತೊಂದು ಹೊಸ ಆದೇಶವನ್ನು ಹೊರಡಿಸಿರುವುದಾಗಿ ವರದಿ ವಿವರಿಸಿದೆ.

2025ರಲ್ಲಿ ಚೀನಾ ಜತೆಗಿನ ಗಡಿಯನ್ನು ಪುನರಾರಂಭಿಸುವವರೆಗೆ ದೇಶದ ಜನರು ಕಡಿಮೆ ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕೆಂದು ಕಿಮ್ ಎಚ್ಚರಿಕೆಯ ಸಂದೇಶವನ್ನು ಹೊರಡಿಸಿದ್ದಾರೆ. ಉತ್ತರ ಕೊರಿಯಾದ ಜನರಿಗೆ ಈಗಾಗಲೇ ಆಹಾರ ಕೊರತೆ ಎದುರಾಗಿದೆ. ಅದೇ ರೀತಿ ಇನ್ನು ಮೂರು ವರ್ಷಗಳ ಕಾಲ ಜನರು ತಮ್ಮ ಆಹಾರ ಪದ್ಧತಿಯಲ್ಲಿ ಬದಲಾವಣೆ ಮಾಡಿಕೊಳ್ಳಬೇಕಾಗಿದೆ ಎಂದು ತಿಳಿಸಿರುವುದಾಗಿ ವರದಿ ತಿಳಿಸಿದೆ.

ಕೋವಿಡ್ 19 ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಉತ್ತರ ಕೊರಿಯಾ 2020ರ ಜನವರಿಯಲ್ಲಿ ಚೀನಾ ಜತೆಗೆ ಹೊಂದಿಕೊoಡಿದ್ದ ಗಡಿಯನ್ನು ಮುಚ್ಚಿತ್ತು. ಆದರೆ ಉತ್ತರ ಕೊರಿಯಾದ ಈ ನಿರ್ಧಾರದಿಂದಾಗಿ ದೇಶದ ಆರ್ಥಿಕತೆ ಮೇಲೆ ಭಾರೀ ಪರಿಣಾಮ ಬೀರಿತ್ತು. ಅಷ್ಟೇ ಅಲ್ಲ ಪ್ರತಿದಿನ ದಿನಬಳಕೆ ವಸ್ತುಗಳ ಬೆಲೆಯೂ ಗಗನಕ್ಕೇರಿರುವುದಾಗಿ ವರದಿ ವಿವರಿಸಿದೆ.

ಚೀನಾ ಜತೆಗಿನ ವ್ಯಾಪಾರ, ವಹಿವಾಟು ಬಂದ್ ಮಾಡಿದ್ದು ಒಂದೆಡೆಯಾದರೆ, ಮತ್ತೊಂದೆಡೆ ಉತ್ತರಕೊರಿಯಾದಲ್ಲಿ ಬಿರುಗಾಳಿ ಮತ್ತು ಪ್ರವಾಹದಿಂದಾಗಿ ಬೆಳೆಗಳು ನಾಶವಾದ ಪರಿಣಾಮ ಆಹಾರ ಬಿಕ್ಕಟ್ಟು ವಿಕೋಪಕ್ಕೆ ಹೋಗಲು ಕಾರಣವಾಗಿದೆ ಎಂದು ವರದಿ ತಿಳಿಸಿದೆ.

- Advertisement -

Latest Posts

Don't Miss