Wednesday, August 20, 2025

Latest Posts

ಧಾರವಾಡದಲ್ಲಿ ಬೀದಿಗೆ ಇಳಿದ ಅನ್ನದಾತರು..ಮಧ್ಯಂತರ ಬೆಳೆವಿಮೆ ಹಾಗೂ ಪರಿಹಾರಕ್ಕಾಗಿ ಅನ್ನದಾತರ ಆಗ್ರಹ.

- Advertisement -

Dharwad News: ಧಾರವಾಡ ಜಿಲ್ಲೆಯಲ್ಲಿ ಅತಿಯಾದ ಮಳೆಯಿಂದಾಗಿ ರೈತ ಬೆಳೆದ ಬೆಳೆ ಸಂಪೂರ್ಣ ನಾಶವಾಗಿ ರೈತರು ಸಂಜಷ್ಟಕ್ಕೆ ಸಿಲುಕಿದ್ದು, ಸರ್ಕಾರ ಮಧ್ಯಂತರ ಬೆಳೆವಿಮೆ ಹಾಗೂ ಬೆಳೆ ಪರಿಹಾರ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ, ಧಾರವಾಡದಲ್ಲಿ ಅನ್ನದಾತರು ಬೀದಿಗೆ ಇಳಿದು ಪ್ರತಿಭಟನೆ ನಡೆಸಿದರು.

ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದ ಅನ್ನದಾತರು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕುದರು. ಧಾರವಾಡ ಜಿಲ್ಲೆಯ ಕಲಘಟಗಿ, ಕುಂದಗೋಳ, ಅಳ್ನಾವರ ಮತ್ತು ಧಾರವಾಡ ಗ್ರಾಮೀಣ ಭಾಗಗಳಲ್ಲಿ ಅತಿಯಾದ ಮಳೆಯಿಂದಾಗಿ ಬೆಳೆ ನಾಶವಾಗಿದೆ. ಈಗಾಗಲೇ ರೈತರು ಪ್ರಧಾನಮಂತ್ರಿ ಫಸಲ್ ಭಿಮಾ ಯೋಜನೆಯಡಿ ಬೆಳೆ ವಿಮೆ ತುಂಬಿದ್ದಾರೆ. ಆ ವಿಮೆ ಹಣವನ್ನು ಮಧ್ಯಂತರ ರೂಪದಲ್ಲಿ ಬಿಡುಗಡೆ ಮಾಡಬೇಕು. ಸೋಯಾಬಿನ್, ಉದ್ದು, ಹತ್ತಿ, ಹೆಸರು ಸೇರಿ ಹಲವು ಬೆಳೆ ನಾಶವಾಗಿದ್ದು, ಎನ್‌ಡಿಆರ್‌ಎಫ್ ಹಾಗೂ ಎಸ್‌ಡಿಆರ್‌ಎಫ್ ಅಡಿ ಪರಿಹಾರ ನೀಡಬೇಕು. ವಿಮೆ ಹಣವನ್ನು ಸರ್ಕಾರ ಸಕಾಲದಲ್ಲಿ ಬಿಡುಗಡೆ ಮಾಡಬೇಕು ಎಂದು ರೈತರು ಆಗ್ರಹಿಸಿದರು.

- Advertisement -

Latest Posts

Don't Miss