Thursday, April 24, 2025

Latest Posts

ಸಕಲೇಶಪುರದಲ್ಲಿ ಕಾಡಾನೆ ದಾಳಿ ಪ್ರಕರಣ: ಆಸ್ಪತ್ರೆಗೆ ಭೇಟಿ ಕೊಟ್ಟ ಸಂಸದ ಶ್ರೇಯಸ್ ಪಟೇಲ್

- Advertisement -

Hassan News: ಹಾಸನ: ಸಕಲೇಶಪುರ ತಾಲೂಕಿನ, ವಾಟೆಹಳ್ಳ ಗ್ರಾಮದಲ್ಲಿ ಕಾಡಾನೆ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ, ಗಂಭೀರವಾಗಿ ಗಾಯಗೊಂಡಿರುವ ದಿವಾಕರ್ ಶೆಟ್ಟಿ, ಜಿಲ್ಲಾಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇಂದು ಜಿಲ್ಲಾಸ್ಪತ್ರೆಗೆ ನೂತನ ಸಂಸದ ಶ್ರೇಯಸ್ ಪಟೇಲ್ ಭೇಟಿ ನೀಡಿ, ದಿವಾಕರ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಶ್ರೇಯಸ್ ಪಟೇಲ್‌ಗೆ ಕಾಂಗ್ರೆಸ್ ಮುಖಂಡರು, ಅಧಿಕಾರಿಗಳು ಸಾಥ್ ನೀಡಿದ್ದಾರೆ.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಶ್ರೇಯಸ್ ಪಟೇಲ್‌,  ಕಾಡಾನೆ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಹಿಡಿಯಬೇಕಿದೆ. ಕಾಡಾನೆ ಹಾವಳಿ ನಿಯಂತ್ರಣದ ಬಗ್ಗೆ ಕೂಲಂಕಷವಾಗಿ ಪರಿಶೀಲಿಸಬೇಕಾಗುತ್ತದೆ. ಮುಂದಿನ ದಿನಗಳಲ್ಲಿ ಸಂಸತ್‌ನಲ್ಲಿ ಈ ಬಗ್ಗೆ ಧ್ವನಿ ಎತ್ತುತ್ತೇನೆ. ಕಾಡಾನೆ ಸಮಸ್ಯಗೆ ಶಾಶ್ವತ ಪರಿಹಾರ ಒದಗಿಸಬೇಕಿದೆ. ಪದೇ ಪದೇ ಕಾಡಾನೆಗಳು ಮನುಷ್ಯರ ಮೇಲೆ ದಾಳಿ ಮಾಡುತ್ತಲೇ ಇವೆ.

ನಾವು ಬಂದು ಗಾಯಾಳು ಆರೋಗ್ಯ ವಿಚಾರಿಸಿ ಮಾಧ್ಯಮದ ಮುಂದೆ ಹೇಳಿಕೆ ನೀಡಿದರೆ ಸಾಲದು. ಹಲವು ವರ್ಷಗಳಿಂದ ಕಾಡಾನೆ ಸಮಸ್ಯೆ ಇದೆ. ಯಾವ ಸರ್ಕಾರ ಬಂದರೂ ಕಾಡಾನೆ ಸಮಸ್ಯೆ ಪರಿಹಾರ ಮಾಡಲು ಆಗಿಲ್ಲ. ಶೀಘ್ರದಲ್ಲಿಯೇ ಸಿಎಂ, ಅರಣ್ಯ ಸಚಿವರ ಬಳಿಗೆ ನಿಯೋಗ ಕೊಂಡೊಯ್ಯೊಲಾಗುವುದು. ನಂತರ ಕೇಂದ್ರ ಅರಣ್ಯ ಸಚಿವರನ್ನು ಭೇಟಿ ಮಾಡಿ ಸಮಸ್ಯೆ ಪರಿಹಾರಕ್ಕೆ ಪ್ರಯತ್ನಿಸಲಾಗುವುದು ಎಂದು ಶ್ರೇಯಸ್ ಪಟೇಲ್ ಹೇಳಿದ್ದಾರೆ.

- Advertisement -

Latest Posts

Don't Miss