ಅರಣ್ಯ ಇಲಾಖೆ ಅಧಿಕಾರಿಗಳು ಜನರೊಂದಿಗೆ ಸೌಹಾರ್ದಯುತವಾಗಿ ನಡೆದುಕೊಳ್ಳಬೇಕು: ಶಾಸಕ ಶಿವರಾಮ ಹೆಬ್ಬಾರ್

Sirsi News: ಜನರ ಜೊತೆ ಅರಣ್ಯ ಇಲಾಖೆಯ ಅಧಿಕಾರಿಗಳು ಮಾನವೀಯತೆ ಹಾಗೂ ಸೌಜನ್ಯದಿಂದ ನಡೆದುಕೊಳ್ಳಬೇಕು. ಅಧಿಕಾರ ಎಂದರೆ ಜನರನ್ನು ಹೆದರಿಸುವುದಲ್ಲ, ಅವರ ಸಮಸ್ಯೆಗಳಿಗೆ ಸ್ಪಂದಿಸಿ ಪರಿಹಾರ ನೀಡುವುದಾಗಿದೆ.

ಸಾರ್ವಜನಿಕರು ಮತ್ತು ಅಧಿಕಾರಿಗಳ ನಡುವೆ ಪರಸ್ಪರ ಗೌರವ ಹಾಗೂ ವಿಶ್ವಾಸದ ವಾತಾವರಣ ನಿರ್ಮಾಣವಾಗಬೇಕು. ಅರಣ್ಯ ಸಂರಕ್ಷಣೆ ಎಷ್ಟು ಮುಖ್ಯವೋ, ಜನರ ಹಕ್ಕುಗಳು ಮತ್ತು ಗೌರವವೂ ಅಷ್ಟೇ ಮುಖ್ಯ. ಜನರ ಸಂಕಷ್ಟಗಳಿಗೆ ಸ್ಪಂದಿಸಿ, ಕಾನೂನು ವ್ಯಾಪ್ತಿಯಲ್ಲಿಯೇ ಸಹಾನುಭೂತಿಯಿಂದ ಕಾರ್ಯನಿರ್ವಹಿಸುವಂತೆ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.

About The Author