Saturday, July 27, 2024

Latest Posts

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್‌ನಿಂದ ನಿಧನ

- Advertisement -

Political News: 72 ವರ್ಷದ ಸುಶೀಲ್ ಕುಮಾರ್ ಮೋದಿ ಕ್ಯಾನ್ಸರ್‌ನಿಂದ ಬಳಲುತ್ತಿದ್ದು, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. 6 ತಿಂಗಳ ಹಿಂದೆಯಷ್ಟೇ ಸುಶೀಲ್ ಮೋದಿ ಅವರಿಗೆ ಕ್ಯಾನ್ಸರ್ ಇರುವುದು ಗೊತ್ತಾಗಿದ್ದು, ಈ ಬಗ್ಗೆ ಅವರೇ ಮಾತನಾಡಿದ್ದರು. ತಮಗೆ ಕ್ಯಾನ್ಸರ್ ಇರುವ ಬಗ್ಗೆ ಹೇಳಿಕೊಂಡಿದ್ದರು.

ಬಿಹಾರದ ಹಾಲಿ ಮುಖ್ಯಮಂತ್ರಿ ಸಾಮ್ರಾಟ್ ಈ ಬಗ್ಗೆ ಎಕ್ಸ್‌ ಖಾತೆಯಲ್ಲಿ ಪೋಸ್ಟ್ ಹಾಕಿದ್ದು, ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಕುಮಾರ್ ಮೋದಿ ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ. ಇದು ಬಿಹಾರಕ್ಕೆ ತುಂಬಲಾರದ ನಷ್ಟ ಎಂದು ಹೇಳಿದ್ದಾರೆ.

ಕ್ರಿಶ್ಚಿಯನ್ ಸಮುದಾಯದವರಾಗಿರುವ ಸುಶೀಲ್ ಪತ್ನಿ ಜೆಸ್ಸಿ ಮತ್ತು ಇಬ್ಬರು ಗಂಡುಮಕ್ಕಳನ್ನು ಸುಶೀಲ್ ಮೋದಿ ಅಗಲಿದ್ದಾರೆ. ಈ ಬಗ್ಗೆ ಪ್ರಧಾನಿ ಮೋದಿಯವರು ಟ್ವೀಟ್ ಮಾಡಿದ್ದು, ಪಕ್ಷದಲ್ಲಿ ನನ್ನ ಮೌಲ್ಯಯುತ ಸಹೋದ್ಯೋಗಿ ಮತ್ತು ದಶಕಗಳಿಂದ ನನ್ನ ಸ್ನೇಹಿತರಾಗಿದ್ದ ಸುಶೀಲ್ ಮೋದಿ ಜಿಯವರ ಅಕಾಲಿಕ ನಿಧನದಿಂದ ತೀವ್ರ ದುಃಖವಾಗಿದೆ. ಬಿಹಾರದಲ್ಲಿ ಬಿಜೆಪಿಯ ಉದಯ ಮತ್ತು ಅದರ ಯಶಸ್ಸಿನ ಹಿಂದೆ ಅವರ ಅಮೂಲ್ಯ ಕೊಡುಗೆ ಇದೆ. ತುರ್ತು ಪರಿಸ್ಥಿತಿಯನ್ನು ಬಲವಾಗಿ ವಿರೋಧಿಸಿದ ಅವರು ವಿದ್ಯಾರ್ಥಿ ರಾಜಕೀಯದಲ್ಲಿ ತಮ್ಮದೇ ಆದ ಸ್ಥಾನವನ್ನು ಹೊಂದಿದ್ದರು. ಅವರು ಅತ್ಯಂತ ಶ್ರಮಜೀವಿ ಮತ್ತು ಸ್ನೇಹಪರ ಶಾಸಕರೆಂದೇ ಹೆಸರಾಗಿದ್ದರು. ರಾಜಕೀಯಕ್ಕೆ ಸಂಬಂಧಿಸಿದ ವಿಷಯಗಳ ಬಗ್ಗೆ ಅವರ ತಿಳುವಳಿಕೆ ಬಹಳ ಆಳವಾಗಿತ್ತು. ಆಡಳಿತಾಧಿಕಾರಿಯಾಗಿಯೂ ಶ್ಲಾಘನೀಯ ಕೆಲಸ ಮಾಡಿದ್ದಾರೆ. ಜಿಎಸ್‌ಟಿ ಜಾರಿಯಲ್ಲಿ ಅವರ ಸಕ್ರಿಯ ಪಾತ್ರ ಸದಾ ನೆನಪಿನಲ್ಲಿ ಉಳಿಯುತ್ತದೆ. ಈ ದುಃಖದ ಸಮಯದಲ್ಲಿ ಅವರ ಕುಟುಂಬ ಮತ್ತು ಬೆಂಬಲಿಗರೊಂದಿಗೆ ನನ್ನ ಸಂತಾಪವಿದೆ. ಓಂ ಶಾಂತಿ! ಎಂದು ಬರೆದುಕೊಂಡಿದ್ದಾರೆ.

ಕಿಡ್ನ್ಯಾಪ್‌ ಕೇಸ್ : ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಜಾಮೀನು ಮಂಜೂರು

ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ರಾಜ್ಯದ ಕಾನೂನು ಸುವ್ಯವಸ್ಥೆ ಅಧೋಗತಿಗೆ ಇಳಿದಿದೆ: ಪ್ರೀತಂಗೌಡ

ನಮ್ಮ ಶಾಸಕರು ಯಾರೂ ಮಾರಾಟವಾಗಲು ತಯಾರಿಲ್ಲ, ಆಪರೇಶನ್ ಕಮಲ ಬಿಜೆಪಿಯ ಹಗಲುಗನಸು: ಸಿಎಂ ಸಿದ್ದರಾಮಯ್ಯ

- Advertisement -

Latest Posts

Don't Miss