ತಮ್ಮ ವಿರುದ್ಧದ ಪೋಕ್ಸೋ ಕೇಸ್ ರದ್ದು ಮಾಡುವಂತೆ ಕೋರಿ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ರು. ಇಂದು ವಿಚಾರಣೆ ನಡೆಸಿದಂತಹ ಹೈಕೋರ್ಟ್ ಪೀಠ ಆದೇಶ ಕಾಯ್ದಿರಿಸಿದೆ. ನ್ಯಾಯಮೂರ್ತಿ ಎಂಐ ಅರುಣ್ ಪೀಠದಲ್ಲಿ ವಿಚಾರಣೆ ನಡೆದಿದ್ದು ಆದೇಶ ಕಾಯ್ದಿರಿಸಲಾಗಿದೆ.
ಸಂತ್ರಸ್ತೆಯ ಹೇಳಿಕೆ ಬಿಟ್ಟು ಉಳಿದ ಸಾಕ್ಷ್ಯಗಳನ್ನು ಕೋರ್ಟ್ ಪರಿಗಣಿಸಿಲ್ಲ. ಯಡಿಯೂರಪ್ಪ ಮನೆಯಲ್ಲಿದ್ದ ಸಾಕ್ಷಿಗಳ ಹೇಳಿಕೆ, ಆಡಿಯೋ ರೆಕಾರ್ಡಿಂಗ್ ಅನ್ನೂ ನ್ಯಾಯಾಲಯ ಪರಿಗಣಿಸಿಲ್ಲ. ಹೊಸದಾಗಿ ಕಾಗ್ನಿಜೆನ್ಸ್ ಪಡೆದಿರುವ ಆದೇಶ ಸರಿಯಿಲ್ಲವೆಂದು, ಯಡಿಯೂರಪ್ಪ ಪರ ಹಿರಿಯ ವಕೀಲ ಸಿವಿ ನಾಗೇಶ್ ವಾದ ಮಂಡಿಸಿದ್ರು.
ರಾಜ್ಯ ಸರ್ಕಾರದ ಪರ ಎಸ್‌ಪಿಪಿ ಪ್ರೊ. ರವಿವರ್ಮ ಕುಮಾರ್ ವಾದ ಮಂಡನೆ ಮಾಡಿದ್ದು, ಕೊಠಡಿಯಲ್ಲಿ ಲಾಕ್ ಮಾಡಿಕೊಂಡಿದ್ದರಿಂದ ಸಂತ್ರಸ್ತೆ ಹೇಳಿಕೆಯೇ ಮುಖ್ಯ. ಯಡಿಯೂರಪ್ಪ ಸೂಚನೆ ಮೇರೆಗೆ ಮೊಬೈಲ್‌ನಲ್ಲಿದ್ದ ವಿಡಿಯೋ ಡಿಲೀಟ್ ಮಾಡಲಾಗಿದೆ. ಮೊಬೈಲ್ ರೆಕಾರ್ಡಿಂಗ್‌ನಲ್ಲಿರುವುದು ಯಡಿಯೂರಪ್ಪ ಧ್ವನಿ ಎಂಬ ಬಗ್ಗೆ ಎಫ್ಎಸ್ಎಲ್ ವರದಿಯಿದೆ. ಫಿರ್ಯಾದಿ ಮಹಿಳೆಗೆ ಬ್ಯಾಗ್‌ನಲ್ಲಿ 2 ಲಕ್ಷ ರೂಪಾಯಿ ಹಣ ನೀಡಲಾಗಿದೆ. ನಡೆದ ಘಟನೆಯನ್ನು ಬಾಲಕಿಯೇ ವಿವರಿಸಿದ್ದಾರೆ ಎಂದು ವಾದ ಮಂಡಿಸಿದ್ರು.
ಇದು ರದ್ದುಪಡಿಸಬೇಕಾದ ಪ್ರಕರಣವೆಂದು ಮನವರಿಕೆಯಾಗಿಲ್ಲ. ಆದರೆ ಕಾಗ್ನಿಜೆನ್ಸ್ ಪಡೆದ ವಿಧಾನದ ಬಗ್ಗೆ ಪ್ರಶ್ನೆಗಳಿವೆ ಎಂದು ಹೇಳಿದ ಹೈಕೋರ್ಟ್ , ವಾದ-ಪ್ರತಿವಾದ ಆಲಿಸಿದ ಅಂತಿಮವಾಗಿ ಆದೇಶ ಕಾಯ್ದಿರಿಸಿದೆ. ಇನ್ನು, ಪೋಕ್ಸೋ ಪ್ರಕರಣದಲ್ಲಿ ಯಡಿಯೂರಪ್ಪಗೆ ನಿರೀಕ್ಷಣಾ ಜಾಮೀನು ಈಗಾಗಲೇ ಸಿಕ್ಕಿದೆ. ಪ್ರಕರಣದ ರದ್ದತಿ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಮುಕ್ತಾಯಗೊಂಡಿದ್ದು, ಆದೇಶ ಪ್ರಕಟವಾಗಬೇಕಿದೆ. ಒಟ್ನಲ್ಲಿ 82 ವರ್ಷದ ಯಡಿಯೂರಪ್ಪ ಅವರಿಗೆ ಟೆನ್ಶನ್ ತಪ್ಪಿಲ್ಲ.