Hubli News: ಹುಬ್ಬಳ್ಳಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಈಗ ಸಂಸದರಾಗಿ ಆಯ್ಕೆಯಾಗಿದ್ದಾರೆ. ಈಗ ರಾಷ್ಟ್ರ ರಾಜಕಾರಣದಲ್ಲಿ ಮಂತ್ರಿಯಾಗುವ ಸಾಧ್ಯತೆ ಹೆಚ್ಚಿದ್ದು, ಶೆಟ್ಟರ್ ಹೆಸರು ಮುಂಚೂಣಿಯಲ್ಲಿದೆ ಎನ್ನಲಾಗುತ್ತದೆ. ಹಾಗಿದ್ದರೆ ಇಲ್ಲಿದೆ ನೋಡಿ ಶೆಟ್ಟರ್ ಟ್ರ್ಯಾಕ್ ರೆಕಾರ್ಡ್.
1990 ಬಿಜೆಪಿ ಹುಬ್ಬಳ್ಳಿ ಗ್ರಾಮಾಂತರ ತಾಲ್ಲೂಕು ಘಟಕದ ಅಧ್ಯಕ್ಷರಾಗಿದ್ದ ಶೆಟ್ಟರ್, 1994 ಬಿಜೆಪಿ ಧಾರವಾಡ ಜಿಲ್ಲಾ ಘಟಕದ ಅಧ್ಯಕ್ಷರಾಗಿ ಆಯ್ಕೆಯಾದರು. 1994 ಮೊದಲ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದು, ಹುಬ್ಬಳ್ಳಿ ಗ್ರಾಮಾಂತರ ಪ್ರದೇಶದ ಶಾಸಕರಾದರು. 1999 ಬಿಜೆಪಿ ರಾಜ್ಯ ಕಾರ್ಯದರ್ಶಿ ಸ್ಥಾನ ನಿರ್ವಹಣೆ ಮಾಡಿದ್ದಾರೆ.
1999 ಎರಡನೇ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದು, 1999 ರಲ್ಲಿ 11ನೇ ವಿಧಾನಸಭೆಯ ವಿರೋದ ಪಕ್ಷದ ನಾಯಕರಾಗಿದ್ದರು. 2004 ಮೂರನೇ ಬಾರಿಗೆ ವಿಧಾನಸಭೆ ಪ್ರವೇಶ, 2005 ಬಿಜೆಪಿ ರಾಜ್ಯಾಧ್ಯಕ್ಷ, 2006 ಕಂದಾಯ ಇಲಾಖೆಯ ಮಂತ್ರಿ (ಬಿಜೆಪಿ ಮತ್ತು ಜೆಡಿಎಸ್ ಸಮ್ಮಿಶ್ರ ಸರ್ಕಾರ), 2008 ನಾಲ್ಕನೇ ಬಾರಿಗೆ ವಿಧಾನಸಭೆ ಪ್ರವೇಶ, 2008 13 ನೇ ವಿಧಾನಸಭೆ ಸಭಾದ್ಯಕ್ಷರಾಗಿದ್ದರು.
2009 ಗಾಮೀಣಾಭಿವೃದ್ಧಿ ಪಂಚಾಯತ್ ರಾಜ್ ಇಲಾಖೆಯ ಸಚಿವರು, 2012 ಜುಲೈ 12 ರಂದು ಗುರುವಾರ ಕರ್ನಾಟಕದ 27 ನೇ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ, 2013 ಐದನೇ ಬಾರಿಗೆ ವಿಧಾನಸಭೆ ಪ್ರವೇಶ, 2013 ವಿಧಾನಸಭೆಯ ವಿರೋದ ಪಕ್ಷದ ನಾಯಕ, 2018 6ನೇ ಬಾರಿಗೆ ವಿಧಾನಸಭೆ ಪ್ರವೇಶ ಮಾಡಿದ್ದು, 2019 ಬೃಹತ್ ಕೈಗಾರಿಕಾ ಸಚಿವರಾಗಿ ಕೆಲಸ ಮಾಡಿದ್ದಾರೆ.
2023 ರಲ್ಲಿ ಎಪ್ರಿಲ್‌ನಲ್ಲಿ ಕಾಂಗ್ರೆಸ್ ಸೇರ್ಪಡೆ. 2023 ಕಾಂಗ್ರೆಸ್ ಅಭ್ಯರ್ಥಿಯಾಗಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಿ, ಪರಾಭವಗೊಂಡಿದ್ದರು. 2023 ಮೇ ನಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಆಯ್ಕೆ. 2024 ಜನವರಿಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ. 2024 ಜನವರಿಯಲ್ಲಿಯೇ ವಿಧಾನ ಪರಿಷತ್ ಸದಸ್ಯತ್ವಕ್ಕೂ ರಾಜೀನಾಮೆ, 2024 ಲೋಕಸಭಾ ಚುನಾವಣೆಯಲ್ಲಿ ಬೆಳಗಾವಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆಮಾಡಿ ಸಚಿವೆ ಲಕ್ಷ್ಮಿ ಹೆಬ್ಬಾಳರ ಪುತ್ರ ಮೃಣಾಲ್ ವಿರುದ್ಧ ಗೆದ್ದು ಸಂಸತ್ತಿಗೆ ಪ್ರವೇಶ ಮಾಡಿದ್ದಾರೆ.
ಹುಬ್ಬಳ್ಳಿಯ ಮೂರು ದಿಗ್ಗಜರು ದಿಲ್ಲಿಗೆ : ಮಂತ್ರಿ ಸ್ಥಾನ ಯಾರ ಹೆಗಲಿಗೆ..?

