Thursday, July 25, 2024

Latest Posts

‘ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ ಮಾಡಿಲ್ಲ’

- Advertisement -

Hubballi News: ಹುಬ್ಬಳ್ಳಿ: ಹುಬ್ಬಳ್ಳಿಗೆ ಭೇಟಿ ಕೊಟ್ಟಿದ್ದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ, ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಕಾಂಗ್ರೆಸ್ ವಿರುದ್ಧ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಅಧಿಕಾರಕ್ಕೆ ಬಂದು ಒಂದು ತಿಂಗಳು ಹತ್ತಿರ ಬಂದಿದೆ. ರಾಜ್ಯಕ್ಕೆ ನೈಸರ್ಗಿಕ ಆಪತ್ತು ಬರುತ್ತಿವೆ. ಮಾನ್ಸೂನ್ ತಡವಾಗಿ, ಬಿತ್ತನೆ ತಡವಾಗಿ ಆಗುತ್ತಿದೆ. ಮಾನ್ಸೂನ್ ಸಕಾಲಕ್ಕೆ ಬಾರದಿದ್ದರೆ ರೈತರಿಗೆ ಬಹಳಷ್ಟು ಕಷ್ಟವಾಗುತ್ತದೆ. ಮತ್ತೊಂದು ಕಡೆ ಭೀಕರ ಚಂಡಮಾರುತದ ಸೂಚನೆ ಸಹ ಬರುತ್ತಿವೆ. ಹೀಗಿದ್ದರೂ ಸಿಎಂ ಇವುಗಳನ್ನು ನಿಭಾಯಿಸಲು ಯಾವುದೇ ರೀತಿ  ಸನ್ನದ್ಧವಾಗಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ. ರಾಜ್ಯದಲ್ಲಿರುವ ಡ್ಯಾಂಗಳ ನೀರು ಅತ್ಯಂತ ಕೆಳಮಟ್ಟದಲ್ಲಿದೆ. ಇಷ್ಟು ಬೇಗ ಬರಗಾಲ ಅಂತಾ ಶಬ್ದ ಹೇಳಲ್ಲ. ಆದರೆ ರಾಜ್ಯ ಸರ್ಕಾರ ಸಮರ್ಪಕವಾಗಿ ಪ್ಲ್ಯಾನ್ ಮಾಡಬೇಕು. ತಾಲೂಕು ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚನೆ ಮಾಡಬೇಕು. ಅಧಿಕಾರಿಗಳು, ಸ್ಥಳೀಯ ಜನಪ್ರತಿನಿಧಿಗಳು ಆ ಟಾಸ್ಕ್ ಫೋರ್ಸ್ ನಲ್ಲಿರಬೇಕು, ಅವರಿಂದ ಸಹಕಾರ ಪಡೆಯಬೇಕು. ಈ ಕೂಡಲೇ ನೂರು ಕೋಟಿ ಅನುದಾನವನ್ನು ಬಿಡುಗಡೆ ಮಾಡಬೇಕು. ಎನ್‌ಡಿ‌ಆರ್‌ಎಫ್ ತಂಡಗಳನ್ನು ಚುರುಕುಗೊಳಸಬೇಕು. ಸ್ಥಳೀಯ ಮಟ್ಟದಲ್ಲಿ ಬಿಗಿ ಮಾಡಬೇಕು ಎಂದು ಬೊಮ್ಮಾಯಿ ರಾಜ್ಯಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಇದು ಜವಾಬ್ದಾರಿ ಇಲ್ಲದ ಸರ್ಕಾರ, ಸಹಾಯಕವಲ್ಲದ ಸರ್ಕಾರ. ನಗರ ಪ್ರದೇಶಗಳಲ್ಲಿಯೂ ಸಹ ಕುಡಿಯುವ ನೀರಿನ ಸಮಸ್ಯೆಯಿದೆ. ಗ್ಯಾರಂಟಿ ಬಗ್ಗೆ ಕಾದುನೋಡುವ ತಂತ್ರ ನಮ್ಮದು. ಉಚಿತ ಬಸ್ ಪಾಸ್ ಆರಂಭದ ಶೂರತ್ವವನ್ನು ಸರ್ಕಾರ ತೋರಿಸುತ್ತಿದೆ. ಗ್ಯಾರಂಟಿ ರೂಪದಲ್ಲಿ ತಾಯಿಯಂದ್ರಿಗೆ ಉಚಿತ ನೀಡುವ ಸಲುವಾಗಿ ಅವರಿಗೆ ಸಮರ್ಪಕ ಪ್ರಯಾಣ ಇಲ್ಲದಂತೆ ಆಗುತ್ತಿದೆ. ರಾಜ್ಯದಲ್ಲಿ ಬಸ್ ಗಳ ಸಮಸ್ಯೆ ಆಗುತ್ತಿದೆ.

ಈಗಾಗಲೇ ನಾವು ಡೀಸೆಲ್‌ ಅನುದಾನ ಬಿಡುಗಡೆ ಮಾಡಿದೀವಿ ಅದನ್ನು ಮುಂದುವರಿಕೆ ಮಾಡಬೇಕು.  ಗ್ಯಾರಂಟಿಗಳಿಗೆ ಹಣಕಾಸಿನ ಹೊಂದಾಣಿಕೆ ಬಗ್ಗೆ ಸರ್ಕಾರ‌ ಸ್ಪಷ್ಟವಾಗಿ ಹೇಳುತ್ತಿಲ್ಲ. ಹಣಕಾಸಿನ ವಿಚಾರದಲ್ಲಿ ಜನರನ್ನು ಕತ್ತಲಲ್ಲಿ ಇಡಲು ಸರ್ಕಾರ ಮುಂದಾಗಿದೆ. ಗ್ಯಾರಂಟಿ ವಿಚಾರದಲ್ಲಿ ಹಣಕಾಸಿನ ಬಗ್ಗೆ ಮಾಹಿತಿ ಪಡೆಯುವುದು ಪ್ರತಿಯೊಂದು ಕನ್ನಡಿಗನ ಹಕ್ಕು. ಇದು ಒಂದು ಕೈಯಲ್ಲಿ ತೆಗೆದುಕೊಂಡು ಮತ್ತೊಂದು ಕೈಯಲ್ಲಿ ಕೊಡುವಂತಾಗಿದೆ ಎಂದು ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ.

ಅಲ್ಲದೇ, ನಾವು ವಿದ್ಯುತ್ ಬಿಲ್ ಏರಿಕೆ ಅನುಷ್ಠಾನ ತಂದಿಲ್ಲ. ವಿದ್ಯುತ್ ಬಿಲ್ ದರ ಏರಿಕೆ ನಮ್ಮ ಸರ್ಕಾರ‌ ಮಾಡಿಲ್ಲ ಅಂತ ಮಾಜಿ ಸಿಎಂ ಬೊಮ್ಮಾಯಿ ಸ್ಪಷ್ಟಪಡಿಸಿದ್ಧಾರೆ. ದರ ಏರಿಕೆ ವರದಿಯನ್ನು ನಾವು ಒಪ್ಪಿರಲಿಲ್ಲ. ಕಾಂಗ್ರೆಸ್ ಅಧಿಕಾರಕ್ಕೆ ಬಂದ ಮೇಲೆ ವಿದ್ಯುತ್ ಬಿಲ್ ದರ ಏರಿಕೆಯ ಪ್ರಸ್ತಾವನೆಗೆ ಒಪ್ಪಿಗೆ ನೀಡಿದೆ. ಇದರಿಂದಾಗಿ ಬಿಲ್ ಜಾಸ್ತಿ ಆಗಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಅಸಮಾಧಾನ ಹೊರಹಾಕಿದ್ದಾರೆ.

ಅಲ್ಲದೇ, ಸರ್ಕಾರ ಸಬ್ಸಿಡಿ ಕೊಡುವಾಗ ಮುಂಚಿತವಾಗಿಯೇ ಹಣ ಕೊಡಬೇಕು. ಹೀಗಾದ್ರೆ ಮಾತ್ರ ಸಂಸ್ಥೆಗಳು ಉಳಿಯುತ್ತವೆ. ನಾನು ವಿಪಕ್ಷ ಸ್ಥಾನದ ಆಕಾಂಕ್ಷಿಯ ಪ್ರಶ್ನೆಯೇ ಇಲ್ಲ. ಈ ಸ್ಥಿತಿಯಲ್ಲಿ ವಿಳಂಬವಾಗ್ತಿಲ್ಲ. ಅಧಿವೇಷನ ಕರೆದ ಕೂಡ್ಲೇ ವಿರೋಧ ಪಕ್ಷದ ನಾಯಕರ ಆಯ್ಕೆ ನಡೆಯುತ್ತೆ. ಪ್ರತಿ ಬಾರಿ ನಡೆಯೋ ಸಂಪ್ರದಾಯ ಇದಾಗಿದೆ ಎಂದಿದ್ದಾರೆ.

ಸೋಲಿನ ಬಗ್ಗೆ ರಾಷ್ಟ್ರೀಯ ನಾಯಕರು ಬೇಸರ ಮಾಡಿಕೊಳ್ಳೋ ಪ್ರಶ್ನೆಯಿಲ್ಲ. ಜನ ಕೊಟ್ಟ ತೀರ್ಪು ನಾವು ಒಪ್ಪಿಕೊಂಡಿದ್ದೇವೆ. ನಾನೇ ಸೋಲಿನ ನೈತಿಕ ಹೊಣೆ ಹೊತ್ತಿದ್ದೇನೆ. ಲೋಕಸಭೆಯಲ್ಲಿ ಜೆಡಿಎಸ್ ಜೊತೆ ಕುರಿತು ಚರ್ಚೆಗಳು ನಡೆದಿಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ.

ಇನ್ನು ಕೆಲ ಶಾಸಕರ ಸೋಲಿಗೆ ಬೊಮ್ಮಾಯಿ ಕಾರಣ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಬೊಮ್ಮಾಯಿ,  ಎಲ್ಲರ ಸೋಲಿಗೆ ನಾನೆ ಹೊಣೆ ಅಂದ ಮೇಲೆ ಅವರ ಆರೋಪದ ಬಗ್ಗೆ ಉತ್ತರಿಸೋ ಪ್ರಶ್ನೆಯಿಲ್ಲ ಎಂದಿದ್ದಾರೆ.

ಶೆಟ್ಟರ್ ಮರಳಿ ಬಿಜೆಪಿ ಸೇರ್ಪಡೆ ವಿಚಾರದ ಬಗ್ಗೆ ಮಾತನಾಡಿದ ಬೊಮ್ಮಾಯಿ, ಅವರೇ ಕಾಂಗ್ರೆಸ್ ಗೆ ಹೋಗಿದ್ದರಿಂದ ಸಂತೃಪ್ತಿ ಇದೆ ಅಂದಿದ್ದಾರೆ. ಹಾಗಿದ್ದಾಗ ಮತ್ತೆ ಬಿಜೆಪಿಗೆ ಬರೋ ಪ್ರಶ್ನೆ ಬರಲ್ಲ ಎಂದಿದ್ದಾರೆ.

ಪ್ರಹ್ಲಾದ್ ಜೋಶಿ ಗೆ ಟಿಕೇಟ್ ಕೊಡಬಾರದೆಂಬ ಅಭಿಯಾನದ ಬಗ್ಗೆ ಬೊಮ್ಮಾಯಿ ಮಾತನಾಡಿ,  ಪ್ರತಿಬಾರಿ ಚುನಾವಣಾ ಪೂರ್ವದಲ್ಲಿ ಇಂತಹ ಅಭಿಯಾನಗಳು ನಡೆಯುತ್ತೆ. ಪರಿಷತ್ ಚುನಾವಣೆ ಮೂರೂ ಸ್ಥಾನಕ್ಕೆ ನಾವು ಸ್ಪರ್ಧಿಸ್ತೇವೆ. ಮೂರು ಸ್ಥಾನಗಳಲ್ಲಿ ಕಾಂಗ್ರೆಸ್ ಗೆಲ್ಲೋದು ಖಚಿತ. ಆದ್ರೂ ಪ್ರತಿಪಕ್ಷವಾಗಿ ಸ್ಪರ್ಧಿಸ್ತೇವೆ‌ ಎಂದು ಬೊಮ್ಮಾಯಿ ಹೇಳಿದ್ದಾರೆ.

ಎಂಪಿ ಚುನಾವಣೆಯಲ್ಲಿ ಜೆಡಿಎಸ್ ಜೊತೆ ಮೈತ್ರಿ ವಿಚಾರದ ಬಗ್ಗೆ ವಿಜಯೇಂದ್ರ ಏನಂದ್ರು..?

ಕಾಂಗ್ರೆಸ್ ಪಕ್ಷದ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಭಗವಂತ ಖೂಬಾ

ಶೆಟ್ಟರ್ಗೆ ಮೇಯರ್ ಟಾಸ್ಕ್ ನೀಡಿದ ಡಿ.ಕೆ.ಶಿವಕಮಾರ್…?

- Advertisement -

Latest Posts

Don't Miss