Monday, December 23, 2024

Latest Posts

ಮಾಜಿ ಸಿಎಂ ಬಸವರಾಜ ಬೊಮ್ಮಾಯಿಗೆ ಲಘು ಶಸ್ತ್ರ ಚಿಕಿತ್ಸೆ..

- Advertisement -

Bengaluru Political News: ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿರುವ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮೊಣಕಾಲು ನೋವಿನಿಂದ ಬಳಲುತ್ತಿರುವ ಅವರು ನಗರ ಬನ್ನೇರುಘಟ್ಟ ರಸ್ತೆಯಲ್ಲಿರುವ ಫೋರ್ಟಿಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಸಿಎಂ ಆಗಿದ್ದ ಸಂದರ್ಭದಲ್ಲಿ ಕೂಡ ಬಸವರಾಜ ಬೊಮ್ಮಾಯಿ ಮೊಣಕಾಲು ನೋವಿನಿಂದ ಬಳಲುತ್ತಿದ್ದರು. ಆಯುರ್ವೇದ, ನಾಟಿ ಔಷಧಿಗಳನ್ನು ಪಡೆಯುತ್ತಿದ್ದರೂ ಮೊಣಕಾಲು ನೋವು ಕಡಿಮೆಯಾಗದ ಕಾರಣ, ವೈದ್ಯರ ಸಲಹೆ ಮೇರೆಗೆ ಮೊಣಕಾಲಿನ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ನಲ್ಲಿ ಬರೆದುಕೊಂಡಿರುವ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ, ಶಸ್ತ್ರಚಿಕಿತ್ಸೆಗೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿರುವ ನಿಕಟಪೂರ್ವ ಮುಖ್ಯಮಂತ್ರಿಗಳು, ಆತ್ಮೀಯರೂ ಆದ ಶ್ರೀ ಬಸವರಾಜ ಬೊಮ್ಮಾಯಿ ಅವರು ಆದಷ್ಟು ಶೀಘ್ರದಲ್ಲಿ ಸಂಪೂರ್ಣ ಗುಣಮುಖರಾಗಿ ಚೇತರಿಸಿಕೊಳ್ಳಲಿ ಎಂದು ಹಾರೈಸಿದ್ದಾರೆ.

ಕೆಲ ವರ್ಷಗಳಿಂದ ಮಾಜಿ ಸಿಎಂ ಬಸವರಾಜ ಬೊಮ್ಮಾಯಿಯವರು ತೀವ್ರ ಮಂಡಿನೋವಿನಿಂದ ಬಳಲುತ್ತಿದ್ದರು. ನಡೆದಾಡುವಾಗ ಸಮಸ್ಯೆ ಎದುರಿಸುತ್ತಿದ್ದರು. ಆದರೂ ಸಹ ಅವರು ಕುಂಟುತ್ತಾ ರಾಜಕೀಯ ಕಾರ್ಯಚಟುವಟಿಕೆಗಳಲ್ಲಿ ಪಾಲ್ಗೊಳ್ಳುತ್ತಿದ್ದರು. ಕೊನೆಗೆ ನೋವು ಹೆಚ್ಚಾಗಿದ್ದರಿಂದ ಅವರು ಸಿಎಂ ಸ್ಥಾನದಲ್ಲಿರು ಇರುವಾಗಲೇ ವಿದೇಶಕ್ಕೆ ಹೋಗಿ ಶಸ್ತ್ರ ಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ ಎನ್ನುವ ಸುದ್ದಿ ಹರಿದಾಡಿತ್ತು.

ಇನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಈ ರೀತಿಯಾಗಿ ಬರೆದಿದ್ದಾರೆ.

ಆತ್ಮೀಯರೇ,

ನನಗೆ ಲಘು ಶಸ್ತ್ರ ಚಿಕಿತ್ಸೆಯಾಗಿದ್ದು, ವೈದ್ಯರ ಸಲಹೆ ಮೇರೆಗೆ ಈಗ ಸಂಪೂರ್ಣ ವಿಶ್ರಾಂತಿ ಪಡೆಯುತ್ತಿದ್ದೇನೆ. ಆದಷ್ಟು ಬೇಗ ಸಂಪೂರ್ಣ ಗುಣಮುಖನಾಗಿ ನಿಮ್ಮ ಮುಂದೆ ಬರಲು ಕಾತುರದಿಂದ ಕಾಯುತ್ತಿದ್ದೇನೆ. ಸದ್ಯ ಆಸ್ಪತ್ರೆಯಲ್ಲಿರುವ ಕಾರಣ, ನೀವೆಲ್ಲರೂ ಆಸ್ಪತ್ರೆಗೆ ನನ್ನನ್ನು ನೋಡಲು ಬಂದರೇ, ಆಸ್ಪತ್ರೆಯಲ್ಲಿರುವ ಇತರ ರೋಗಿಗಳಿಗೆ ತೊಂದರೆಯಾಗುತ್ತದೆ.

ಹೀಗಾಗಿ ನೀವ್ಯಾರು ಆಸ್ಪತ್ರೆಗೆ ಬರಬಾರದೆಂದು ಕಳಕಳಿಯಾಗಿ ಮನವಿ ಮಾಡುತ್ತೇನೆ. ನಿಮ್ಮ ಶುಭ ಹಾರೈಕೆಗಳು ನನ್ನನ್ನು ಮಾನಸಿಕವಾಗಿ ಮತ್ತಷ್ಟು ಗಟ್ಟಿ ಮಾಡಿದ್ದು, ಶೀಘ್ರದಲ್ಲಿಯೇ ಜನಸೇವೆಗೆ ಮರಳುತ್ತೇನೆ.

ಶುಭ ಹಾರೈಸಿದ ಪ್ರತಿಯೊಬ್ಬರಿಗೂ ನನ್ನ ಹೃದಯಾಂತರಾಳದಿಂದ ಅನಂತ ಅನಂತ ಧನ್ಯವಾದಗಳು. ಇಂತಿ ನಿಮ್ಮ, ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿಗಳು…

ಈ ರೀತಿಯಾಗಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಟ್ವೀಟ್ ಮಾಡುವ ಮೂಲಕ, ಜನರಲ್ಲಿ ಮನವಿ ಮಾಡಿದ್ದಾರೆ.

ಸಚಿವರ ಎದುರೇ ಶಾಸಕರ ಕಿತ್ತಾಟ : ಏಕವಚನದಲ್ಲಿ ವಾಗ್ದಾಳಿ..

‘ಜನ ತಿರಸ್ಕಾರ ಮಾಡಿ ಮನೆಗೆ ಕಳಸಿದ್ರು, ಭ್ರಷ್ಟಾಚಾರದ ಬಗ್ಗೆ ಮಾತಾಡೋಕೆ ಏನು ನೈತಿಕತೆ ಇದೆ..?’

‘ಕಾಂಗ್ರೆಸ್ ಗೆದ್ದರೆ ಕರ್ನಾಟಕವನ್ನು ಎಟಿಎಂ ಮಾಡುತ್ತೆ ಅಂತಾ ಹೇಳಿದ್ವಿ. ಅದು ಈಗ ನಿಜವಾಗಿದೆ’

- Advertisement -

Latest Posts

Don't Miss