Thursday, October 30, 2025

Latest Posts

ತಂಗಡಗಿ ಹೇಳಿಕೆಗೆ ತಿರುಗೇಟು ನೀಡಿದ ಮಾಜಿ ಸಿಎಂ ಬೊಮ್ಮಾಯಿ

- Advertisement -

Hubli News: ಹುಬ್ಬಳ್ಳಿ: ಮೋದಿ ಮೋದಿ ಎಂದು ಹೇಳುವ ವಿದ್ಯಾರ್ಥಿಗಳ ಕಪ್ಪಾಳಕ್ಕೆ ಹೊಡೆಯಿರಿ ಎಂಬ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ಮತದಾರರು ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಪರವಾಗಿ ಮತದಾನ ಮಾಡುವ ಮೂಲಕ ಕಪ್ಪಾಳ ಮೋಕ್ಷ ಮಾಡುತ್ತಾರೆ ಎನ್ನುವ ಮೂಲಕ ತಿರುಗೇಟು ನೀಡಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನು ಕೆಲವೇ ಸ್ವಲ್ಪ ದಿನ ತಾಳಿ, ಮತಗಳ ಮೂಲಕ ಜನ ಕಪಾಳಕ್ಕೆ ಹೊಡಿತ್ತಾರೆ. ಈ ಮೂಲಕ ಪರೋಕ್ಷವಾಗಿ ಮತದಾರರು ಕಾಂಗ್ರೆಸ್ ಗೆ ಕಪಾಳಕ್ಕೆ ಹೊಡಿತ್ತಾರೆ ಎಂದರು.

ನಮ್ಮ ಕ್ಷೇತ್ರಕ್ಕೆ ಮಾಜಿ ಸಿಎಂ ಬಿ.ಎಸ್,ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಪ್ರಚಾರಕ್ಕೆ ಬರುತ್ತಾರೆ. ರಾಷ್ಟ್ರೀಯ ನಾಯಕರು ಸೆಲೆಬ್ರೆಟಿಗಳು ಕೂಡಾ ಪ್ರಚಾರಕ್ಕೆ ಬರುತ್ತಾರೆ‌ ಎರಡು ಮೂರು ದಿನಗಳಲ್ಲಿ ರಾಷ್ಟ್ರೀಯ ನಾಯಕರ ಟೂರ್ ಫಿಕ್ಸ್ ಆಗತ್ತೆ ಎಂದು ಹೇಳಿದರು.

ರಾಜ್ಯದಲ್ಲಿ ಬಿಜೆಪಿ ಪರವಾದ ವಾತಾವರಣಯಿದೆ. ಎಲ್ಲ ಕಡೆ ಮೋದಿ ಪರ ಅಲೆ ಇದೆ. ಹೀಗಾಗಿ ರಾಜ್ಯದಲ್ಲಿ ಭಿನ್ನಮತ ಶಮನ ಆಗುತ್ತದೆ. ಈಗಾಗಲೇ ಸಂಗಣ್ಣ ಕರಡಿ ಅವರು ಸಮಾಧಾನ ಆಗಿದ್ದಾರೆ. ಅವರು ಧಾರವಾಡ ನಮ್ಮ ಕ್ಷೇತ್ರಕ್ಕೂ ಪ್ರಚಾರಕ್ಕೆ ಬರುತ್ತಾರೆ ಎಂದರು. ಜನಾರ್ದನ ರೆಡ್ಡಿ ಪಕ್ಷಕ್ಕೆ ಬಂದಿರೋದು ಬಲ ಬಂದಿದೆ. ಮೂರ್ನಾಲ್ಕು ಜಿಲ್ಲೆಗಳಲ್ಲಿ ಅವರ ಪ್ರಭಾವ ಇದೆ ಎಂದರು.

ಬಿಜೆಪಿಗೆ ಬಂದ್ರೆ ಎಲ್ಲರೂ ಶುದ್ಧವಾಗ್ತಾರೆ ಎಂಬ ಸಂತೋಷ್ ಲಾಡ್ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, ಅದು ಅವರ ಅನುಭವದ ಮಾತು ಎಂದು ಹೇಳುವ ಮೂಲಕ ಲಾಡ್ ಹೇಳಿಕೆಗೆ ಬಸವರಾಜ್ ಬೊಮ್ಮಾಯಿ ತಿರುಗೇಟು ನೀಡಿದರು.

ಬಳಿಕ ರಾಜ್ಯ ಸರ್ಕಾರ ಅಧೋಗತಿಗೆ ಗೋಗಿದೆ. ಅದೇ ಕಾರಣಕ್ಕೆ ಸುಪ್ರೀಂ ಕೋರ್ಟ್ ಗೆ ಹೋಗಿದ್ದಾರೆ. ಸುಪ್ರೀಂ ಕೋರ್ಟ್ ಗೆ ಹೋಗಿರೋದು ರಾಜಕೀಯ ತಂತ್ರಗಾರಿಕೆ. ಈ ಹಿಂದೆ ಯುಪಿಐ ಕಾಲದಲ್ಲಿ ಎಷ್ಟು ಹಣ ಬಂದಿದೆ. ಎನ್ ‘ಡಿಎ ಕಾಲದಲ್ಲಿ ಎಷ್ಟು ಎನ್ ಡಿಆರ್’ಎಫ್ ಹಣ ಬಂದಿದೆ ಅನ್ನೋದು ಬಹಿರಂಗ ಪಡಿಸಲಿ ಎಂದು ಬಸವರಾಜ್ ಬೊಮ್ಮಾಯಿ ಸವಾಲ್ ಹಾಕಿದರು.

ಕಸದ ಟ್ರಕ್ ಡಿಕ್ಕಿ ಲಂಡನ್‌ನಲ್ಲಿ ಭಾರತೀಯ ಪಿಎಚ್‌ಡಿ ವಿದ್ಯಾರ್ಥಿನಿ ಸಾವು

ಪರಪ್ಪನ ಅಗ್ರಹಾರದ ಪಾಲಾದ ಸೋನುಗೌಡ: ರೀಲ್ಸ್ ರಾಣಿಗೆ 14 ದಿನ ನ್ಯಾಯಾಂಗ ಬಂಧನ

ರೋಹಿತ್‌ ಶರ್ಮಾಗೇ ಆಡೋದನ್ನ ಹೇಳಿಕೊಟ್ಟ ಪಾಂಡ್ಯಾ: ಆಕ್ರೋಶ ಹೊರಹಾಕಿದ ನೆಟ್ಟಿಗರು

- Advertisement -

Latest Posts

Don't Miss