Friday, March 29, 2024

Latest Posts

ಟ್ವೀಟ್ ಮೂಲಕ ಜಮೀರ್‌ಗೆ ಟಾಂಗ್ ಕೊಟ್ಟ ಕುಮಾರಸ್ವಾಮಿ..!

- Advertisement -

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ಮಾಜಿ ಸಿಎಂ ಕುಮಾರಸ್ವಾಮಿ ಬಿಜೆಪಿಯಿಂದ ಹಣ ಪಡೆದಿರುವುದಾಗಿ ಜಮೀರ್ ಅಹಮದ್ ಆರೋಪಿಸಿದ್ದು, ಈ ಆರೋಪಕ್ಕೆ ಕುಮಾರಸ್ವಾಮಿ ಸಾಲು ಸಾಲು ಟ್ವೀಟ್ ಮಾಡುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

ಬಸವಕಲ್ಯಾಣದಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಹಾಕಲು ನಾನು ಬಿಜೆಪಿಯಿಂದ ಹಣ ಪಡೆದಿರುವುದಾಗಿ ಮಿತ್ರರೊಬ್ಬರು ಹೇಳಿದ್ದಾರೆ. ಆಗಲಿ, 2005ರಲ್ಲಿ SM ಕೃಷ್ಣ ಅವರಿಂದ ತೆರವಾಗಿದ್ದ ಚಾಮರಾಜಪೇಟೆ ಉಪಚುನಾವಣೆಗೆ ಜೆಡಿಎಸ್‌ ಮುಸ್ಲಿಂ ಅಭ್ಯರ್ಥಿಯನ್ನು ಆಯ್ಕೆ ಮಾಡಿತ್ತು. ಅವರ ಖರ್ಚು ವೆಚ್ಚಗಳಿಗೆ ಜೆಡಿಎಸ್‌ ಬಿಜೆಪಿಯಿಂದ ದುಡ್ಡು ತಂದಿತ್ತೇ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

2005ರ ಚಾಮರಾಜಪೇಟೆ ಉಪಚುನಾವಣೆಯ ಆ ‘ಮುಸ್ಲಿಂ ಅಭ್ಯರ್ಥಿ’ಗಾಗಿ ಮಾಜಿ ಪ್ರಧಾನಿ ದೇವೇಗೌಡರು ಗಲ್ಲಿಗಲ್ಲಿಗಳಲ್ಲಿ ಸುತ್ತಿದ್ದರು. ಬೆವರು ಹರಿಸಿದ್ದರು. ದೇವೇಗೌಡರಂಥವರು ಅಂದು ಅಷ್ಟು ಕಷ್ಟಪಟ್ಟು ಉಪಚುನಾವಣೆ ನಡೆಸಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಇದಕ್ಕೆ ಸನ್ಮಿತ್ರರು ಆತ್ಮಸಾಕ್ಷಿಯಿಂದ, ಮನದಾಳದಿಂದ, ಪ್ರಾಮಾಣಿಕ ಉತ್ತರ ಕೊಡಬಹುದೇ? ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಚಾಮರಾಜಪೇಟೆ ಉಪಚುನಾವಣೆಯ ಮತದಾನಕ್ಕೆ ಇನ್ನು 2 ದಿನಗಳು ಬಾಕಿ ಉಳಿದಿವೆ ಎನ್ನುವಾಗ ನಮ್ಮ ‘ಮುಸ್ಲಿಂ ಅಭ್ಯರ್ಥಿ’ ಏಕಾಏಕಿ ಕಾಣೆಯಾಗಿದ್ದರು. ಕಾರಣ ಹುಡುಕಿದಾಗ ಹಣದ ಕೊರತೆ ಎಂಬ ಅಂಶ ಗೊತ್ತಾಯಿತು. ಅಂದು ಶಿವಮೊಗ್ಗ ಪ್ರವಾಸದಲ್ಲಿದ್ದ ನಾನು ಓಡೋಡಿ ಬಂದು ಸಾಲ ಮಾಡಿ ಹಣ ಹೊಂದಿಸಿಕೊಟ್ಟಿದ್ದೆ. ಅಂದು ನಾನು ತಂದ ಸಾಲ ಬಿಜೆಪಿಯ ಹಣವಾಗಿತ್ತೇ? ಎಂದು ಟ್ವೀಟ್ ಮೂಲಕ ಕುಮಾರಸ್ವಾಮಿ ಜಮೀರ್ ಬಳಿ ಕೇಳಿದ್ದಾರೆ.

ಅಂದು ಚಾಮರಾಜಪೇಟೆಯಲ್ಲಿ ಬಿಜೆಪಿಯನ್ನು ಗೆಲ್ಲಿಸಲು ಜೆಡಿಎಸ್‌ ‘ಮುಸ್ಲಿಂ ಅಭ್ಯರ್ಥಿ’ಯನ್ನು ಗುರುತಿಸಿತ್ತೇ? ಅಂದು ಬಿಜೆಪಿಯನ್ನು ಗೆಲ್ಲಿಸಲೆಂದು ಅವರನ್ನು ಅಭ್ಯರ್ಥಿಯನ್ನಾಗಿ ಮಾಡಿದಿದ್ದರೆ ಇಂದು ನನ್ನ ವಿರುದ್ಧ ಆರೋಪ ಮಾಡಲು ಆ ನಾಯಕರೇ ಇರುತ್ತಿರಲಿಲ್ಲ. ಜೆಡಿಎಸ್‌ ಪಕ್ಷದ ತ್ಯಾಗಕ್ಕಾಗಿ ಕಿಂಚಿತ್ತು ಕೃತಜ್ಞತೆ ಉಳಿಯದಿದ್ದರೆ ಹೇಗೆ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ಸನ್ಮಿತ್ರರು ನಮ್ಮಲ್ಲಿದ್ದಾಗ ಅವರನ್ನು ಬೆಂಗಳೂರು ಕೇಂದ್ರ ಲೋಕಸಭೆಗೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಅವರ ಸೋದರನನ್ನು ಚಿಕ್ಕಪೇಟೆ ಅಭ್ಯರ್ಥಿಯನ್ನಾಗಿ ಮಾಡಲಾಯಿತು. ಇದೆಲ್ಲ ಮಾಡಿದ್ದೇಕೆ? ಬಿಜೆಪಿಯನ್ನು ಗೆಲ್ಲಿಸಲೇ? ಜೆಡಿಎಸ್‌ ಪಕ್ಷ ಮತ್ತು ಇದರ ಕಾರ್ಯಕರ್ತರು ಎಲ್ಲರನ್ನೂ ಬೆಳೆಸಿದೆ. ಹೊರಗೆ ಹೋದವರನ್ನು ಹರಸಿದೆ. ಕೃತಜ್ಞತೆ ಇರಲಿ ಎಂದಿದ್ದಾರೆ.

2008ರ ಆಪರೇಷನ್‌ ಕಮಲದ ನಂತರ ನಡೆದ 20ಕ್ಕೂ ಹೆಚ್ಚು ಉಪಚುನಾವಣೆಗಳಲ್ಲಿ ಕಾಂಗ್ರೆಸ್‌ ಒಂದು ಸ್ಥಾನ ಗೆಲ್ಲದೇ ಮುಖಭಂಗ ಅನುಭವಿಸಿತ್ತು. ಅದರ ಹಿಂದೆ ಯಾವ ನಾಯಕರು ಇದ್ದರು? ಎಷ್ಟು ಹಣ ಪಡೆದಿದ್ದರು? ಯಾರೊಂದಿಗೆ ಒಪ್ಪಂದ ಮಾಡಿಕೊಂಡಿದ್ದರು ಎಂಬುದನ್ನು ಸನ್ಮಿತ್ರರು ತಿಳಿಯಲಿ. ಹೇಗೂ ಅವರ ಅಕ್ಕಪಕ್ಕದಲ್ಲೆ ಇದ್ದೀರಲ್ಲ… ಕೇಳಿ ನೋಡಿ ಎಂದು ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ.

ಬೆಂಗಳೂರಿನಲ್ಲಿ ಜೀನಿ ಮಿಲ್ಲೆಟ್ ಮಿಕ್ಸ್ Home Delivery ಗಾಗಿ ಸಂಪರ್ಕಿಸಿ

9113649531

ಸಾವಯವ ಕಡಲೆಕಾಯಿ ಎಣ್ಣೆ

ಮರದ ಗಾಣದಿಂದ ತಯಾರಿಸಿದ ಗಾಣದ ಕಡೆಲೆಕಾಯಿ ಎಣ್ಣೆಗಾಗಿ ಸಂಪರ್ಕಿಸಿ

ಬೆಂಗಳೂರಿನಲ್ಲಿ Home delivery

8147130507 / 7349360507

ತಲಕಾಡಿನ ರೈತ ಮಹದೇವಪ್ಪ ತಾನೆ ನೋನಿ ಹಣ್ಣನ್ನ ಬೆಳೆದು ತಯಾರಿಸುತ್ತಿರುವ ಭಗವಾನ್

Noni ಹೋಂ ಡೆಲಿವರಿಗಾಗಿ  ಸಂಪರ್ಕಿಸಿ

8147130507 / 7349360507

- Advertisement -

Latest Posts

Don't Miss