Monday, December 23, 2024

Latest Posts

‘ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ’

- Advertisement -

ಮಾಜಿ ಸಿಎಂ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದ್ದಾರೆ. ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿರುವ ಕುಮಾರಸ್ವಾಮಿ, ಪ್ರವಾಸೋದ್ಯಮ ಸಚಿವ ಸಿ.ಟಿ. ರವಿಯವರು ಅಧಿಕಾರದ ಮದದ ಮತ್ತಿನಲ್ಲಿ ತೇಲುತ್ತಿದ್ದಾರೆ. ಹೀಗಾಗಿ ಅವರು ಮೊದಲು ತುರ್ತಾಗಿ ಪರೀಕ್ಷೆಗೆ ಒಳಗಾಗುವುದು ಒಳಿತು. ನಾನು ಅಧಿಕಾರದಲ್ಲಿ ಇರಲಿ, ಇಲ್ಲದಿರಲಿ ಸಮಚಿತ್ತದಲ್ಲಿ ಇರುತ್ತೇನೆ. ಅಧಿಕಾರದ ಅಮಲು ಕೆಲವರಿಗೆ ಮಾತ್ರ ತೆವಲು ಎಂದು ವ್ಯಂಗ್ಯವಾಡಿದ್ದಾರೆ.

Karnataka TV Contact

ನಾನು ಮುಖ್ಯಮಂತ್ರಿ ಆಗಿದ್ದಾಗ ಕ್ರಿಕೆಟ್ ಬೆಟ್ಟಿಂಗ್, ಮಾದಕ ದ್ರವ್ಯ, ಮೀಟರ್ ಬಡ್ಡಿ ಹತ್ತಿಕ್ಕಲು ವಿಶೇಷ ತಂಡ ರಚಿಸಿದ್ದೆ. ಇದರಿಂದ ಕನಲಿ ಹೋಗಿದ್ದ ದಂಧೆಕೋರರು ಶ್ರೀಲಂಕಾ ಹಾಗೂ ಮುಂಬೈಗೆ ಹಾರಿ ಹೋಗಿದ್ದರು. ಆಮೇಲೆ ಶಾಸಕರನ್ನು ಮುಂಬೈಗೆ ಕರೆದೊಯ್ಯುವಾಗ ಶಾಸಕರ ಜೊತೆ ಕಂಪನಿ ಕೊಟ್ಟಿದ್ದರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

ಸಿ.ಟಿ. ರವಿ ಬೇರೆಯವರ ಬಗ್ಗೆ ಮಾತನಾಡಿದಂತೆ ನನ್ನ ಬಗ್ಗೆ ಮಾತನಾಡಿದರೆ ನಾನು ಸುಮ್ಮನಿರಲ್ಲ. ಅಧಿಕಾರದಲ್ಲಿ ಇರುವ ಸಚಿವರು ಮಾತಿನಲ್ಲಿ ನಿಗಾ ಇಡುವುದು ಒಳಿತು.

ಕ್ರಿಕೆಟ್ ಬೆಟ್ಟಿಂಗ್, ಮಾಫಿಯಾ ಬಳಸಿಕೊಂಡೇ ನಮ್ಮ ಸರಕಾರದಲ್ಲಿದ್ದ ಶಾಸಕರನ್ನು ಬಿಜೆಪಿಯವರು ಬುಕ್ ಮಾಡಿಕೊಂಡಿದ್ದರು ಎಂಬುದು ಗುಟ್ಟಾಗಿ ಉಳಿದಿಲ್ಲ. ಕೆಲ ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರನ್ನು ಎರಡು ಗಂಟೆಗೊಂದು ವಿಶೇಷ ವಿಮಾನದ ಮೂಲಕ ಕರೆದುಕೊಂಡು ಹೋದಾಗ ಯಾರು ಜೊತೆಯಲ್ಲಿ ಇದ್ದರು ಎಂಬುದು ಇಡೀ ನಾಡಿಗೆ ಗೊತ್ತಿದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಶಾಸಕರನ್ನು ಖರೀದಿ ಮಾಡಿ, ಕ್ರಿಕೆಟ್ ಬೆಟ್ಟಿಂಗ್, ಡ್ರಗ್ ಮಾಫಿಯಾದ ಪಾಪದ ಹಣವನ್ನು ಚೆಲ್ಲಿ ಸರ್ಕಾರ ಉಳಿಸಿಕೊಳ್ಳುವ ವ್ಯಕ್ತಿ ನಾನಲ್ಲ. ಅಂತಹ ಕುಕೃತ್ಯಕ್ಕೆ ಇಳಿಯುವ ಜಾಯಮಾನ ನನ್ನದಾಗಿದ್ದರೆ ನನ್ನ ಸರ್ಕಾರವನ್ನು ಅಲುಗಾಡಿಸಲು ಸಾಧ್ಯವಿರಲಿಲ್ಲ ಎಂದು ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಖಜಾನೆಗೆ 25 ಸಾವಿರ ಕೋಟಿ ಹಣವನ್ನು ಸಂಗ್ರಹಿಸಿ ರೈತರ ಸಾಲ ಮನ್ನಾ ಮಾಡಿದ ಮುಖ್ಯಮಂತ್ರಿ ನಾನು. ಹೀಗಾಗಿ ಲೂಟಿ ಮಾಡಿದವರು ಅಧಿಕಾರದ ಅಮಲಿನಲ್ಲಿ ತೇಲಾಡುವಾಗ ಬಾಯಿಗೆ ಬಂದಂತೆ ಮಾತನಾಡುತ್ತಿರುವುದನ್ನು ಕೇಳಿಸಿಕೊಳ್ಳಬೇಕಾಗಿಲ್ಲ.

ವಾಮಮಾರ್ಗದ ಮೂಲಕ ಅಧಿಕಾರಕ್ಕೆ ಬಂದ ಈ ಸರ್ಕಾರಕ್ಕೆ ಪ್ರಕೃತಿಯು ಸಹಕರಿಸುತ್ತಿಲ್ಲ. ಜನರ ದುಃಖ ದುಮ್ಮಾನಗಳಿಗೆ ಸ್ಪಂದಿಸಲು ಪ್ರಾಮಾಣಿಕ ಪ್ರಯತ್ನ ಮಾಡಿ. ಅದು ಬಿಟ್ಟು ಬಾಯಿ ಚಪಲಕ್ಕೆ ಮಾತನಾಡುವ ಅಧಿಕಾರದ ಅಮಲು ಬಹಳ ಕಾಲ ಉಳಿಯುವುದಿಲ್ಲ ಎಂದು ಕುಮಾರಸ್ವಾಮಿ ಸಿ.ಟಿ. ರವಿ ವಿರುದ್ಧ ಕಿಡಿಕಾರಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

- Advertisement -

Latest Posts

Don't Miss