ಸಚಿವ ಸುಧಾಕರ್ ವಿರುದ್ಧ ಮಾಜಿ ಸಿಎಂ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ. ವೈದ್ಯಕೀಯ ಶಿಕ್ಷಣ ಸಚಿವ ಡಾ.ಸುಧಾಕರ್ ಅವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದ್ದಾರೆ. ಬಹುಶಃ ಸುಧಾಕರ್ ಅವರಿಗೆ ಸ್ಮರಣಶಕ್ತಿ ಕಡಿಮೆ ಇದ್ದಂತಿದೆ. ರಾಜಕೀಯವಾಗಿ ಈಗಾಗಲೇ ಎಷ್ಟು ನೆಲೆಗಳನ್ನು ಬದಲಾಯಿಸಿ ರಾತ್ರೋರಾತ್ರಿ ವಿಮಾನ ಬದಲಿಸಿ ಓಡಾಡಿ ಬಂದವರು ನನ್ನ ಹಿನ್ನೆಲೆ ಬಗೆಗೆ ಮಾತನಾಡಿದರೆ ರಾಜ್ಯದ ಜನತೆ ನಗುತ್ತಾರೆ ಎಂದು ವ್ಯಂಗ್ಯವಾಡಿದ್ದಾರೆ.
ಬಿಜೆಪಿ ಸಿದ್ಧಾಂತದ ಬಗ್ಗೆ ಮಾತನಾಡುವಷ್ಟು ಅರ್ಹತೆ ಸುಧಾಕರ್ ಅವರಿಗೆ ಬಂದಿದೆಯೇ ಎಂಬುದನ್ನು ಅವರ ಪಕ್ಷದ ಕಾರ್ಯಕರ್ತರು ಕೂಡ ಒಪ್ಪುವುದಿಲ್ಲ.
ಡ್ರಗ್ಸ್ ಮಾಫಿಯಾ, ಬೆಟ್ಟಿಂಗ್ ದಂಧೆ ಮಾಡುವವರಿಂದ ವಸೂಲಿ ಮಾಡಿದ ಹಣದಿಂದಲೇ ನನ್ನ ಸರ್ಕಾರವನ್ನು ಬುಡಮೇಲು ಮಾಡಲಾಯಿತು ಎಂಬುದು ಸೂರ್ಯ-ಚಂದ್ರರಷ್ಟೇ ಸ್ಪಷ್ಟ. ಇದನ್ನು ಮುಂಬೈವೀರರು ಚೆನ್ನಾಗಿಯೇ ಬಲ್ಲರು. ಅದಕ್ಕೆ ಸಚಿವ ಸುಧಾಕರ್ ಹೊರತಲ್ಲ ಎಂಬ ವಿಚಾರವನ್ನ ಕುಮಾರಸ್ವಾಮಿ ಸ್ಪೋಟಿಸಿದ್ದಾರೆ.
ಸಚಿವ ಸ್ಥಾನ ಸಿಕ್ಕಿದೆ ಎಂಬ ಉತ್ಸಾಹದಲ್ಲಿ ನನ್ನ ಹಿನ್ನೆಲೆ-ಮುನ್ನೆಲೆ ಬಗೆಗೆ ಮಾತನಾಡುವುದು ಸುಧಾಕರ್ ಅವರ ನೈಜ ವ್ಯಕ್ತಿತ್ವವನ್ನು ಬಿಂಬಿಸುತ್ತದೆ. ಅಧಿಕಾರ ಶಾಶ್ವತ ಮತ್ತು ತಮ್ಮ ಸ್ವಂತ ಶಕ್ತಿ ಎಂಬ ಭ್ರಮೆಯಲ್ಲಿ ಇರುವವರು ಮಾತ್ರ ಹೀಗೆ ಮಾತನಾಡುತ್ತಾರೆ ಎಂಬುದು ನನ್ನ ಗ್ರಹಿಕೆ.
ಕಳೆದ ಎರಡು ದಶಕಗಳಿಂದ ಸುಧಾಕರ್ ಅವರು ಯಾವ್ಯಾವ ನಾಯಕರಿಗೆ ಎಂತೆಂಥ ಸೇವೆಗಳನ್ನು ಮಾಡಿದ್ದಾರೆ ಎಂಬ ಹಿನ್ನೆಲೆ ಬಗೆಗೆ ನಾನು ಮಾತನಾಡಲಾರೆ.
ಜನಸೇವೆಯಲ್ಲಿ ವಿಶ್ವಾಸವಿಟ್ಟು ರಚನೆಗೊಂಡ ಸರಕಾರವೊಂದು ಮಾಫಿಯಾದ ಹಣದಿಂದ ಹೇಗೆ ಬುಡಮೇಲಾಯಿತು ಎಂಬುದಷ್ಟನ್ನೇ ಜನತೆಯ ಮುಂದೆ ಹೇಳಿದ್ದೇನೆ. ಆದರೆ ಸಚಿವ ಸುಧಾಕರ್ ಹೆಗಲು ಮುಟ್ಟಿಕೊಳ್ಳುವ ಪ್ರಮೇಯ ಉದ್ಭವಿಸಿದ್ದು ಏಕೆಂದು ಅರ್ಥವಾಗಲಿಲ್ಲ ಎಂದು ಹೆಚ್ಡಿಕೆ ಹೇಳಿದ್ದಾರೆ.
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.