ರೈತರ ಸಮಸ್ಯೆ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ಸರ್ಕಾರಿ ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಸುವಲ್ಲಿ ಏದುಸಿರು ಬಿಡುತ್ತಿರುವ ರಾಜ್ಯ ಸರ್ಕಾರ ರಾಜ್ಯದ ರೈತರಿಗೆ ರಸಗೊಬ್ಬರ, ವಿಶೇಷವಾಗಿ ಯೂರಿಯಾ, ಸಮರ್ಪಕವಾಗಿ ಪೂರೈಸಲು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.

ಉತ್ತರ ಕರ್ನಾಟಕ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಯೂರಿಯಾ ಗೊಬ್ಬರ ಕೊರತೆ ಎದುರಾಗಿದ್ದು ರೈತರು ಕಂಗಾಲಾಗಿದ್ದಾರೆ. ಕೆಲವೆಡೆ ಕೃತಕ ಅಭಾವ ಸೃಷ್ಟಿಸಿ ದುಬಾರಿ ದರಕ್ಕೆ ಮಾರಾಟ ಮಾಡುತ್ತಿರುವ ಬಗ್ಗೆ ಕಠಿಣ ಕ್ರಮ ಕೈಗೊಳ್ಳಬೇಕು. ಗೊಬ್ಬರ ಸಿಗದ ರೈತರು ಹಿಡಿಶಾಪ ಹಾಕುವ ಮೊದಲು ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳಬೇಕು ಎಂದು ಹೆಚ್ಡಿಕೆ ಹೇಳಿದ್ದಾರೆ.
ವಾಡಿಕೆಗಿಂತ ಈ ಬಾರಿ ರಾಜ್ಯದಾದ್ಯಂತ ಶೇಕಡ 25ರಷ್ಟು ಹೆಚ್ಚು ಬಿತ್ತನೆ ಆಗಿದೆ. ಕೃಷಿ ಇಲಾಖೆ ಇದನ್ನು ಅಂದಾಜಿಸುವಲ್ಲಿ ಎಡವಿರುವುದು ಮೇಲ್ನೋಟಕ್ಕೆ ಗೋಚರವಾಗುತ್ತದೆ. ಬಾಯಿಮಾತಿನ ಅನುಕಂಪಕ್ಕಿಂತ ರಸಗೊಬ್ಬರ ಪೂರೈಕೆಗೆ ಯಾವ ಕ್ರಮ ಕೈಗೊಳ್ಳಲಾಗಿದೆ? ಎಂಬುದನ್ನು ಸರ್ಕಾರ ಸ್ಪಷ್ಟಪಡಿಸಬೇಕು ಎಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.
ಅತಿವೃಷ್ಟಿಯಿಂದ ಸಂಕಷ್ಟಕ್ಕೆ ಸಿಲುಕಿರುವ ರೈತರು ಗೊಬ್ಬರ ಕೊರತೆಯಿಂದ ಬಿತ್ತನೆ ಕಾರ್ಯ ನಿಲ್ಲಿಸದಂತೆ ತುರ್ತು ಸೂಕ್ತ ವ್ಯವಸ್ಥೆ ಮಾಡುವಂತೆ ಒತ್ತಾಯಿಸುತ್ತೇನೆ ಎಂದು ಹೆಚ್ಡಿಕೆ ಟ್ವೀಟ್ ಮಾಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.



