Political News: ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ವೈ.ವಿಜಯೇಂದ್ರ ಅವರಿಗೆ ಹಲವು ಬಿಜೆಪಿ ನಾಯಕರು ಶುಭಕೋರಿದ್ದಾರೆ. ಜೊತೆಗೆ ಮಾಜಿ ಸಿಎಂ ಕುಮಾರಸ್ವಾಮಿ, ಸಂಸದೆ ಸುಮಲತಾ ಅಂಬರೀಶ್ ಕೂಡ ವಿಶ್ ಮಾಡಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ಈ ಬಗ್ಗೆ ಟ್ವೀಟ್ ಮಾಡಿದ್ದು, ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು. ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ ನಿಭಾಯಿಸುತ್ತಾರೆ ಎಂಬ ವಿಶ್ವಾಸ ನನಗಿದೆ. ಶ್ರೀ ವಿಜಯೇಂದ್ರ ಅವರಿಗೆ ಶುಭವಾಗಲಿ ಎಂದು ಹಾರೈಸುತ್ತೇನೆ ಎಂದಿದ್ದಾರೆ.
ಇನ್ನು ಸಂಸದೆ ಸುಮಲತಾ ಕೂಡ ವಿಜಯೇಂದ್ರಗೆ ವಿಶ್ ಮಾಡಿದ್ದು, ಬಿಜೆಪಿ ಕರ್ನಾಟಕದ ನೂತನ ರಾಜ್ಯಾಧ್ಯಕ್ಷರಾಗಿ ನಿಯುಕ್ತಿಗೊಂಡ ಶಿಕಾರಿಪುರದ ಶಾಸಕರಾದ ಶ್ರೀ ವಿಜಯೇಂದ್ರ ಯಡ್ಯೂರಪ್ಪ ಅವರಿಗೆ ಅಭಿನಂದನೆಗಳು. ಯುವಕರ ಕಣ್ಮಣಿ ಆಗಿರುವ ವಿಜಯೇಂದ್ರ ಅವರ ಕಾರ್ಯವೈಖರಿಗೆ ಸಿಕ್ಕ ಮನ್ನಣೆ ಇದು. ರಾಜ್ಯಕ್ಕೆ ನಿಮ್ಮಿಂದ ಮತ್ತಷ್ಟು ಒಳ್ಳೆಯದಾಗಲಿ ಎಂದಿದ್ದಾರೆ.
ಕರ್ನಾಟಕ ಬಿಜೆಪಿ ಪಕ್ಷದ ಅಧ್ಯಕ್ಷರಾಗಿ ನೇಮಕಗೊಂಡಿರುವ ಶಾಸಕ ಶ್ರೀ ಬಿ.ವೈ.ವಿಜಯೇಂದ್ರ ಅವರಿಗೆ ಹೃತ್ಪೂರ್ವಕ ಅಭಿನಂದನೆಗಳು ಮತ್ತು ಶುಭಾಶಯಗಳು.
ಯುವನಾಯಕರಾಗಿ ಸಂಘಟನೆಯಲ್ಲಿ ಈಗಾಗಲೇ ಕ್ರಿಯಾಶೀಲರಾಗಿರುವ ಅವರಿಗೆ ಕಿರಿಯ ವಯಸ್ಸಿನಲ್ಲಿಯೇ ಬಹುದೊಡ್ಡ ಜವಾಬ್ದಾರಿ ಅರಸಿ ಬಂದಿದೆ. ತಮಗೆ ವಹಿಸಿರುವ ಈ ಗುರುತರ ಹೊಣೆಯನ್ನು ಅವರು ಸಮರ್ಥವಾಗಿ… pic.twitter.com/hWpAsxpHle
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) November 10, 2023
ಹಾಸನಾಂಬೆ ದರ್ಶನದ ವೇಳೆ ಅವಘಡ: ಆಸ್ಪತ್ರೆಗೆ ಬಂದು, ಗಾಯಾಳುಗಳ ಆರೋಗ್ಯ ವಿಚಾರಿಸಿದ ಸಚಿವ ಗುಂಡೂರಾವ್..
‘ನಿನ್ನೆಯೇ ಹಲವರಿಗೆ ಶಾಕ್ ಹೊಡೆದಿದೆ, ವಿಷಯ ತಿಳಿದರೂ ಅಧಿಕಾರಿಗಳು ಸ್ಥಳಕ್ಕೆ ಬರದೇ ನಿರ್ಲಕ್ಷಿಸಿದ್ದಾರೆ’