ಬೆಂಗಳೂರು: ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲಿದ್ದು, ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಹೇಳಲಾಗಿತ್ತು. ಆದರೆ ಕಾಂಗ್ರೆಸ್ ಹೆಚ್ಚಿನ ಸ್ಥಾನವನ್ನು ಗೆದ್ದಿದೆ. ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದು, ನೂತನ ಸರ್ಕಾರಕ್ಕೆ ಶುಭ ಕೋರಿದ್ದಾರೆ. ಅಲ್ಲದೇ ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ ಎಂದು ಹೇಳಿದ್ದಾರೆ. ಹೆಚ್ಜಿಕೆ ಈ ರೀತಿ ಟ್ವೀಟ್ ಮಾಡಿದ್ದಾರೆ.
ರಾಜ್ಯದಲ್ಲಿ ಅಸ್ತಿತ್ವಕ್ಕೆ ಬರಲಿರುವ ನೂತನ ಸರಕಾರಕ್ಕೆ ಶುಭವಾಗಲಿ. ಜನರ ಆಶೋತ್ತರಳಿಗೆ ಸ್ಪಂದಿಸಲಿ ಎಂದು ಹಾರೈಸುತ್ತೇನೆ. ಈ ಚುನಾವಣೆಯಲ್ಲಿ ಪಕ್ಷದ ಪರವಾಗಿ ಹಗಲಿರುಳು ಶ್ರಮಿಸಿದ ಕಾರ್ಯಕರ್ತರು, ಮುಖಂಡರು, ಅಭ್ಯರ್ಥಿಗಳಿಗೆ ನನ್ನ ಕೃತಜ್ಞತೆಗಳು. ಯಾವುದೇ ಕಾರಣಕ್ಕೂ ಯಾರೂ ಧೃತಿಗೆಡುವುದು ಬೇಡ, ನಿಮ್ಮ ಜತೆಯಲ್ಲಿ ನಾನಿದ್ದೇನೆ.
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಶ್ರೀ ಹೆಚ್.ಡಿ.ದೇವೇಗೌಡರು, ಶ್ರೀ ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ.
ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು ಎಂದು ಹೆಚ್.ಡಿ.ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.
ರಾಜ್ಯದ ಜನತೆಯ ಆದೇಶವನ್ನು ನಾನು ಸ್ವಾಗತಿಸುತ್ತೇನೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನಾದೇಶವೇ ಅಂತಿಮ. ಸೋಲು, ಗೆಲುವನ್ನು ನಾನು ಸಮಚಿತ್ತದಿಂದ ಸ್ವೀಕರಿಸುತ್ತೇನೆ. ಆದರೆ, ಈ ಸೋಲು ಅಂತಿಮವಲ್ಲ, ನನ್ನ ಹೋರಾಟ ನಿಲ್ಲುವುದಿಲ್ಲ, ಸದಾ ಜನರ ಜತೆಯಲ್ಲೇ ಇರುತ್ತೇನೆ. ನಮ್ಮ ಪಕ್ಷವನ್ನು ಆಶೀರ್ವದಿಸಿದ ಮಹಾಜನತೆಗೆ ಅಭಿನಂದನೆಗಳು. 1/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 13, 2023
ನನಗಾಗಲಿ, ನಮ್ಮ ಕುಟುಂಬಕ್ಕೆ ಆಗಲಿ ಸೋಲು, ಗೆಲುವು ಹೊಸದೇನಲ್ಲ. ಈ ಹಿಂದೆ ಶ್ರೀ ಹೆಚ್.ಡಿ.ದೇವೇಗೌಡರು, ಶ್ರೀ ಹೆಚ್.ಡಿ.ರೇವಣ್ಣ, ನಾನೂ ಸೋತಿದ್ದೆವು. ಹಾಗೆಯೇ ಗೆದ್ದಾಗ ಬದ್ಧತೆಯಿಂದ ಜನಸೇವೆ ಮಾಡಿದ್ದೇವೆ. ಮುಂದಿನ ದಿನಗಳಲ್ಲಿ ಸಂಘಟನೆಯಲ್ಲಿ ತೊಡಗಿಸಿಕೊಂಡು ಪಕ್ಷ ಕಟ್ಟುವ ಕೆಲಸ ಮಾಡುತ್ತೇನೆ. 2/3
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 13, 2023
ಕನಕಪುರಕ್ಕೆ ಒಂದೇ ಒಂದು ದಿನ ಪ್ರಚಾರಕ್ಕೆ ಹೋಗಿ, 1 ಲಕ್ಷ ಮತಗಳ ಅಂತರದಿಂದ ಗೆದ್ದ ಡಿಕೆಶಿ