ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಉಂಟಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಈ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಮುಂಗಾರು ಮಳೆಗೆ ನಲುಗಿರುವ ರಾಜ್ಯದ ಜನತೆ ಮತ್ತು ಜಾನುವಾರುಗಳ ರಕ್ಷಣೆಗೆ ಸರ್ಕಾರ ಸಮರೋಪಾದಿಯಲ್ಲಿ ಸ್ಪಂದಿಸುವ ಪರಿಹಾರ ಕಾಮಗಾರಿಗಳನ್ನು ಅನುಷ್ಠಾನ ಮಾಡುವಂತೆ ಆಗ್ರಹಿಸುತ್ತೇನೆ.
ಈ ಬಾರಿಯೂ ರಾಜ್ಯ ಅತಿವೃಷ್ಟಿಯ ಸಂಕಷ್ಟಕ್ಕೆ ಸಿಲುಕಿದ್ದು, ವಿಶೇಷವಾಗಿ ರೈತರು ಕಂಗಾಲಾಗಿದ್ದಾರೆ. ಉತ್ತರ ಕನ್ನಡ ಮತ್ತು ಕೊಡಗು ಜಿಲ್ಲೆಗಳಲ್ಲಿ ಮುಂಗಾರಿನ ಅಬ್ಬರ ಭೀತಿಯ ವಾತಾವರಣ ಸೃಷ್ಟಿಸಿದೆ. ಜಿಲ್ಲಾವಾರು ವಿಶೇಷ ಕಾರ್ಯಪಡೆ ರಚಿಸುವ ಮೂಲಕ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಅತಿವೃಷ್ಟಿ ಸಂತ್ರಸ್ತರಿಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕು. ಬೆಳೆ ಹಾನಿಗೊಳಗಾದ ರೈತರಿಗೆ ಹಾಗೂ ಮನೆ-ಮಠ ಕಳೆದುಕೊಂಡವರಿಗೆ, ಜೀವ ಹಾನಿಗೊಳಗಾದವರಿಗೆ ತಡಮಾಡದೆ ಸರ್ಕಾರ ಸಹಾಯಹಸ್ತ ಚಾಚಬೇಕು.
ಸತತ ನೆರೆಯಿಂದ ಸಂತ್ರಸ್ತರಾಗಿರುವ ಕುಟುಂಬಗಳಿಗೆ ಹೆಚ್ಚಿನ ಪರಿಹಾರ ನೀಡಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ರಾಜ್ಯ ಸರ್ಕಾರ ಕೂಡ ಈ ಸಂಬಂಧ ಕೇಂದ್ರದ ಮೇಲೆ ಒತ್ತಡ ತರಬೇಕು ಎಂದು ಒತ್ತಾಯಿಸುತ್ತೇನೆ ಎಂದಿದ್ದಾರೆ.
ಅತಿವೃಷ್ಟಿ ಸಂತ್ರಸ್ತರ ಪರಿಹಾರ ಕಾಮಗಾರಿಗಳಿಗೆ ಹಣಕಾಸಿನ ಕೊರತೆಯಾಗದಂತೆ ಸಕಾಲಿಕ ಎಚ್ಚರಿಕೆಯನ್ನು ಸರ್ಕಾರ ತೆಗೆದುಕೊಳ್ಳದಿದ್ದರೆ ಪರಿಸ್ಥಿತಿ ಬಿಗಡಾಯಿಸುತ್ತದೆ. ಒಂದು ಕಡೆ ಕೊರೋನಾ ಸೋಂಕಿನ ಭೀತಿ ಈಗ ನೆರೆಪೀಡಿತ ಪರಿಸ್ಥಿತಿ ಸರ್ಕಾರಕ್ಕೊಂದು ಅಗ್ನಿಪರೀಕ್ಷೆ. ಎಚ್ಚರ ತಪ್ಪಿದರೆ ಜನರ ಬದುಕು ಮೂರಾಬಟ್ಟೆಯಾಗುತ್ತದೆ.
ಸಚಿವರು ಮತ್ತು ಅಧಿಕಾರಿಗಳು ಮಳೆ ಹಾನಿಗೊಳಗಾದ ಪ್ರದೇಶಗಳಿಗೆ ತೆರಳಿ ಅಲ್ಲಿಯೇ ಮೊಕ್ಕಾಂ ಮಾಡಿ ಪರಿಸ್ಥಿತಿಯ ಉಸ್ತುವಾರಿ ನೋಡಿಕೊಳ್ಳುವ ಮೂಲಕ ನೆರೆ ಸಂತ್ರಸ್ತರಿಗೆ ಧೈರ್ಯ ತುಂಬುವ ಕೆಲಸ ಮಾಡಬೇಕಿದೆ ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.




