ಬೆಳಗಾವಿ ಜಿಲ್ಲೆ ಪೀರನವಾಡಿಯಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ಪ್ರತಿಷ್ಟಾಪನೆಗೆ ವಿರೋಧಿಸಿ ಮರಾಠೀ ಭಾಷಿಗರು ದಾಂಧಲೆ ನಡೆಸಿದ್ದು ಅಕ್ಷಮ್ಯ ಎಂದು ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನಮ್ಮ ನೆಲದಲ್ಲಿ ಅಪ್ರತಿಮ ಹೋರಾಟಗಾರ ರಾಯಣ್ಣನ ಪ್ರತಿಮೆ ಸ್ಥಾಪನೆಗೆ ಯಾವ ದೊಣ್ಣೆ ನಾಯಕನ ಅಪ್ಪಣೆಯೂ ಬೇಕಿಲ್ಲ. ಎಂಇಎಸ್, ಶಿವಸೇನೆ ಅಥವಾ ಮತ್ಯಾರೇ ಆಗಲಿ ನಮ್ಮ ನಾಡಿನ ಹೆಮ್ಮೆಯ ವೀರಪುತ್ರ ಸಂಗೊಳ್ಳಿ ರಾಯಣ್ಣನಿಗೆ ಅಪಮಾನ ಮಾಡಿದರೆ ಕನ್ನಡಿಗರ ಸಹನೆ ಪರೀಕ್ಷಿಸಿದಂತೆ. ಇಂತಹ ಉದ್ಧಟತನಗಳನ್ನು ಕನ್ನಡಿಗರು ಸಹಿಸುವುದಿಲ್ಲ ಎಂದು ಎಚ್ಚರಿಸುವೆ ಎಂದಿದ್ದಾರೆ.
ಸಂಗೊಳ್ಳಿ ರಾಯಣ್ಣ ನಮ್ಮ ನಾಡಿನ ಹೆಮ್ಮೆ. ಅವರ ಪ್ರತಿಮೆ ಸ್ಥಾಪನೆಗೆ ವಿರೋಧಿಸುವುದು ಕನ್ನಡಿಗರ ಕೆಚ್ಚೆದೆಯ ಸ್ವಾಭಿಮಾನ ಕೆಣಕಿದಂತೆ. ನಾಡಿನ ವೀರಪುತ್ರ ಮತ್ತು ವನಿತೆಯರ ವಿರುದ್ಧ ನಮ್ಮ ನೆಲದಲ್ಲಿ ತಗಾದೆ ತೆಗೆದರೆ ತಕ್ಕಪಾಠ ಕಲಿಸಬೇಕಾಗುತ್ತದೆ.
ನಮ್ಮ ನಾಡಿನ ನೆಲ-ಜಲ, ಭಾಷೆ ಮತ್ತು ಗಡಿ ವಿಷಯದಲ್ಲಿ ರಾಜಿಯ ಪ್ರಶ್ನೆಯೇ ಇಲ್ಲ. ಈ ನೆಲದ ಅಸ್ಮಿತೆಗೆ ಭಂಗ ತರುವವರನ್ನು ಹೆಡೆಮುರಿ ಕಟ್ಟುವುದು ಸ್ವಾಭಿಮಾನಿ ಕನ್ನಡಿಗರ ರಕ್ತದಲ್ಲೇ ಇದೆ.
ಕನ್ನಡಿಗರೆಂದರೆ – ಸಾಧುಂಗೆ ಸಾಧು, ಮಾಧುರ್ಯಂಗೆ ಮಾಧುರ್ಯನ್, ಬಾದಿಪ್ಪ ಕಲಿಗೆ ಕಲಿಯುಗ ವಿಪರೀತನ್ ಎನ್ನುವ ಮೂಲಕ ಮಾಜಿ ಸಿಎಂ ಕುಮಾರಸ್ವಾಮಿ ಎಚ್ಚರಿಕೆ ನೀಡಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.