Monday, December 23, 2024

Latest Posts

‘ಲಮಾಣಿಯವರಿಗೆ ಸಚಿವ ಸ್ಥಾನ ಬಿಟ್ಟು ಕೊಡಲಿ, ದಲಿತರನ್ನೇ ಸಿಎಂ ಮಾಡಲಿ’

- Advertisement -

Political News: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಾಂಗ್ರೆಸ್ ವಿರುದ್ಧ ಟ್ವೀಟ್ ಮಾಡಿದ್ದು, ಸಾಲು ಸಾಲು ಪ್ರಶ್ನೆ ಕೇಳಿದ್ದಾರೆ. ದಲಿತ ಉಪಸಭಾಧ್ಯಕ್ಷರ ಮೇಲೆ ಕಾಂಗ್ರೆಸ್ ನಾಯಕರು ಅನುಕಂಪ ತೊರಿಸುವ ಬದಲು, ಸಚಿವ ಸ್ಥಾನವನ್ನ ಅವರಿಗೆ ಬಿಟ್ಟುಕೊಡಲಿ. ಇಷ್ಟು ದಿನ ಕೇಳಿಬರುತ್ತಿದ್ದ ದಲಿತ ಸಿಎಂ ಕೂಗು ಈಗೇಕಿಲ್ಲ..? ಈಗಲೂ ದಲಿತರನ್ನೇ ಸಿಎಂ ಮಾಡಲಿ ಎಂದು ಟಾಂಗ್ ನೀಡುವ ಮೂಲಕ ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಟ್ವೀಟ್ ಮಾಡಿದ್ದಾರೆ.

ಕುಮಾರಸ್ವಾಮಿ ಮಾಡಿದ ಟ್ವೀಟ್ ಹೀಗಿದೆ..

ಸ್ವತಃ ಮುಖ್ಯಮಂತ್ರಿಗಳು, ಸಂಸದೀಯ ಸಚಿವರು, ಇನ್ನೂ ಕೆಲ ಮಂತ್ರಿಗಳು ಸದನವನ್ನೇ ದಿಕ್ಕು ತಪ್ಪಿಸಲು ಯತ್ನಿಸಿದ್ದಾರೆ. ಆಗ ನಾನು ಕೇವಲ ನಿಯೋಜಿತ ಮುಖ್ಯಮಂತ್ರಿ. ರಾಜಭವನದ ಆದೇಶದ ಮೇರೆಗೆ ಮುಖ್ಯ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲಾ ವ್ಯವಸ್ಥೆ ಮಾಡಿರುತ್ತದೆ ಎಂಬುದು ಇವರಿಗೆ ತಿಳಿಯದೆ?

ಉಪ ಸಭಾಧ್ಯಕ್ಷರು ದಲಿತರೆನ್ನುವ ಟ್ರಂಪ್ ಕಾರ್ಡ್ ತೇಲಿಬಿಟ್ಟಿದೆ ಸರಕಾರ. ದಲಿತರೆನ್ನುವ ಕಾರಣಕ್ಕೆ ಉಪ ಸಭಾಧ್ಯಕ್ಷರ ಮೇಲೆ ಅನುಕಂಪದ ಹೊಳೆ ಹರಿಸುವ ಕಾಂಗ್ರೆಸ್, ಅವರಿಗೆ ಸಚಿವ ಸ್ಥಾನವನ್ನೇ ನೀಡಬಹುದಿತ್ತು. ನೀಡಲಿಲ್ಲ ಯಾಕೆ? ಶಾಸಕ ಪುಟ್ಟರಂಗಶೆಟ್ಟಿ ಅವರು ಬೇಡವೇ ಬೇಡ ಎಂದ ಹುದ್ದೆಯನ್ನು ರುದ್ರಪ್ಪ ಲಮಾಣಿ ಅವರ ತಲೆಗೆ ಕಟ್ಟಿದ್ದು ಯಾಕೆ?

ಇಂಥ ಅತಿಯಾದ ಜಾಣತನ, ಭಂಡತನ ಯಾಕೆ? ಸಂಪುಟ ರಚನೆ ವೇಳೆ ರುದ್ರಪ್ಪ ಲಮಾಣಿ ಅವರು ದಲಿತರೆನ್ನುವುದು ಕಾಂಗ್ರೆಸ್’ಗೆ ಗೊತ್ತಿರಲಿಲ್ಲವೇ? ದಲಿತ ಕಾರ್ಡ್ ಬಿಟ್ಟ ಪ್ರಿಯಾಂಕ್ ಖರ್ಗೆ ಅಥವಾ ಕೃಷ್ಣ ಭೈರೇಗೌಡರಿಗೆ ಅಷ್ಟು ದಲಿತಪ್ರೇಮ ಇದ್ದರೆ ಅವರ ಸಚಿವಗಿರಿಯನ್ನು ಲಮಾಣಿ ಅವರಿಗೇ ಬಿಟ್ಟುಕೊಟ್ಟು ಈ ಇಬ್ಬರಲ್ಲಿ ಒಬ್ಬರು ಉಪ ಸಭಾಧ್ಯಕ್ಷರಾಗಲಿ.

ಅಷ್ಟೇ ಅಲ್ಲ; ದಲಿತ ಮುಖ್ಯಮಂತ್ರಿ ಕೂಗು ಕಾಂಗ್ರೆಸ್ ಪಕ್ಷದಲ್ಲಿ ಬಹಳ ದಿನಗಳಿಂದ ಇದೆ. ಹಿಂದೆ ಖರ್ಗೆ ಅವರಿಗೆ ಸಿಎಂ ಹುದ್ದೆ ಕೈ ತಪ್ಪುವಂತೆ ಮಾಡಲಾಗಿತ್ತು. ಈಗ ದಲಿತ ಮುಖ್ಯಮಂತ್ರಿ ಮಾಡಲು ಇದೇ ಸಕಾಲ. ದಲಿತರನ್ನೇ ಸಿಎಂ ಮಾಡಲಿ. ನುಡಿದಂತೆ ನಡೆಯುವ ಪಕ್ಷಕ್ಕೆ ಇದು ಅಸಾಧ್ಯವೇನಲ್ಲ. ಅಲ್ಲವೇ?

Congress: ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆ ಪಕ್ಷದಿಂದ ಉಚ್ಚಾಟನೆ ಮಾಡಬಹುದಾ?

Siddaramaiah : ಬಿಜೆಪಿಗರ ಧರಣಿ ವಿರುದ್ಧ ಸದನದಲ್ಲಿ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

Praladh joshi:ಮಣಿಪುರದ ಚರ್ಚೆಗೆ ಸರ್ಕಾರ ಸಿದ್ಧವಿದೆ, ವಿಪಕ್ಷಗಳು ಪ್ರತಿಭಟನೆ ಕೈಬಿಟ್ಟು ಸುಗಮ ಕಲಾಪಕ್ಕೆ ಅವಕಾಶ ಮಾಡಿಕೊಡಲಿ

- Advertisement -

Latest Posts

Don't Miss