Political News: ಜೆಡಿಎಸ್ ಪಕ್ಷ ವಿಸರ್ಜನೆ ಬಗ್ಗೆ ಮಾತನಾಡಿರುವ ಕಾಂಗ್ರೆಸ್ ನಾಯಕರ ಬಗ್ಗೆ ಮಾಜಿ ಸಿಎಂ ಕುಮಾರಸ್ವಾಮಿ, ಆಕ್ರೋಶ ವ್ಯಕ್ತಪಡಿಸಿ, ಟ್ವೀಟ್ ಮಾಡಿದ್ದಾರೆ.
ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ ಎಂದಿದ್ದಾರೆ.
ಚುನಾವಣೆ ಫಲಿತಾಂಶ ಬಂದಿದೆ, ನನಗೆ ಜನರು 123 ಕ್ಷೇತ್ರ ಕೊಡಲಿಲ್ಲ. ಈಗ ಪಂಚರತ್ನ ಜಾರಿ ಹಾಗೂ ಪಕ್ಷ ವಿಸರ್ಜನೆ ಪ್ರಶ್ನೆ ಎಲ್ಲಿ? ಸಾಮಾನ್ಯಜ್ಞಾನವೇ ಇಲ್ಲದ ಸಚಿವರಿಗೆ ಈ ಪರಿ ಅಜ್ಞಾನವಿದೆ ಎಂದು ನಾನಂತೂ ಎಣಿಸಿರಲಿಲ್ಲ. ಇಷ್ಟು ಅವಿವೇಕವುಳ್ಳ ಇವರ ಮುಂದಿನ ಆಡಳಿತದ ಈಗಲೇ ಆತಂಕವಾಗುತ್ತಿದೆ ಎಂದು ಕುಮಾರಸ್ವಾಮಿ ವ್ಯಂಗ್ಯವಾಡಿ್ದ್ದಾರೆ..
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ ಎಂದು ಮಾಜಿ ಸಿಎಂ H.D.Kumaraswamy Tweet ಮಾಡಿದ್ದಾರೆ.
ಪಕ್ಷ ವಿಸರ್ಜನೆ, ಅಂತಿಮ ಸಂಸ್ಕಾರದ ಹೇಳಿಕೆ ಕೊಟ್ಟ ಸಂಸ್ಕಾರಹೀನರಿಗೆ ಹೇಳುವುದು ಇಷ್ಟೇ. ನನಗೆ 123 ಸೀಟು ಬಂದಿಲ್ಲ, ಪಂಚರತ್ನ ಜಾರಿಗೆ ಜನರು ಅವಕಾಶವನ್ನೂ ಕೊಟ್ಟಿಲ್ಲ, ಹಾಗಾಗಿ ಪಕ್ಷವನ್ನು ವಿಸರ್ಜನೆ ಮಾಡುವುದೂ ಇಲ್ಲ. ಇನ್ನೇನಾದರೂ ಅನುಮಾನ ಇದ್ದವರು ಬರಲಿ, ಅಂಥವರ ಅಜ್ಞಾನ ಹೋಗಲಾಡಿಸುತ್ತೇನೆ.6/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
ಕೆಲವರ ವಿವೇಕರಹಿತ ಹೇಳಿಕೆಗಳಿಗೆ ಉತ್ತರಿಸುವುದು ಬೇಡ ಭಾವಿಸಿದ್ದೆ. ನಾನು ಸೋತ ನೋವಿನಲ್ಲಿದ್ದೇನೆ. ಕಾಂಗ್ರೆಸ್ ನವರು ಗೆದ್ದ ಅಹಂನಲ್ಲಿ ಇದ್ದಾರೆ. ಅಹಂ ಅಳಿಯುತ್ತದೆ ಅನ್ನುವ ಕನಿಷ್ಠ ಅರಿವು ಅವರಿಗೆ ಇದ್ದಂತೆ ಇಲ್ಲ. ಆ ಅರಿವು ಬರುವ ಕಾಲವೂ ದೂರವಿಲ್ಲ. ಕಾಯುವ ತಾಳ್ಮೆ ನನಗಿದೆ. 1/6
— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) May 31, 2023
ಶಾಸಕರ ಮನೆ ಹತ್ತಿರವೇ ಕುಡುಕರ ಅಡ್ಡೆ: ಸಿಎಲ್-7 ವಿರುದ್ಧ ಗುಡುಗಿದ ಶಾಸಕ ಸ್ವರೂಪ್
‘ಗ್ಯಾರಂಟಿ ಯೋಜನೆಗಳ ವಿಚಾರದಲ್ಲಿ ನಾವು ಯಾರ ಒತ್ತಡಕ್ಕೂ ಮಣಿಯುವುದಿಲ್ಲ’