ಹಿಂದಿ ರಾಜಕಾರಣದ ಬಗ್ಗೆ ಕುಮಾರಸ್ವಾಮಿ ಆಕ್ರೋಶ..!

ಹಿಂದಿ ರಾಜಕಾರಣದ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ, ಕನ್ನಡದಲ್ಲಿ ಪರೀಕ್ಷೆಗಳು ಬರೆಯಲು ಅವಕಾಶ ಕೊಡಬೇಕೆಂದು ಆಗ್ರಹಿಸಿದ್ದಾರೆ.

ಹಿಂದಿ ರಾಜಕಾರಣವು ದಕ್ಷಿಣ ಭಾರತದ ಹಲವು ನಾಯಕರ ಪ್ರಧಾನಿಯಾಗುವ ಅವಕಾಶ ಕಸಿದಿದೆ. ಅದರಲ್ಲಿ ದೇವೇಗೌಡರು, ಕರುಣಾನಿಧಿ, ಕಾಮರಾಜರ ಹೆಸರುಗಳು ಪ್ರಧಾನ. ಈ ವ್ಯೂಹವನ್ನು ದೇವೇಗೌಡರು ಭೇದಿಸಿ ಅತ್ಯುನ್ನತ ಪಟ್ಟ ಅಲಂಕರಿಸಿದರಾದರೂ, ಭಾಷೆ ವಿಚಾರಕ್ಕೆ ಅವರನ್ನು ಮೂದಲಿಸಿದ, ಗೇಲಿ ಮಾಡಿದ, ಕನ್ನಡತನ ಪ್ರಶ್ನಿಸಿದ ಪ್ರಸಂಗಗಳು ಆಗಿ ಹೋಗಿವೆ.

ಭಾರತದ ಪ್ರಧಾನ ಮಂತ್ರಿಯಾಗಿದ್ದ ದೇವೇಗೌಡರಿಂದ ಅಂದು ಕೆಂಪು ಕೋಟೆಯಲ್ಲಿ ಹಿಂದಿಯಲ್ಲೇ ಭಾಷಣ ಮಾಡಿಸುವಲ್ಲಿ ‘ಹಿಂದಿ ರಾಜಕಾರಣ’ ಯಶಸ್ವಿಯಾಗಿತ್ತು. ಬಿಹಾರ ಮತ್ತು ಉತ್ತರ ಪ್ರದೇಶದ ಬಹುದೊಡ್ಡ ರೈತ ಸಮುದಾಯದ ದೃಷ್ಟಿಯಿಂದ ಅಂದು ದೇವೇಗೌಡರು ಹಿಂದಿಯಲ್ಲೇ ಮಾತನಾಡಿದರು. ಅಷ್ಟರ ಮಟ್ಟಿಗೆ ಈ ದೇಶದಲ್ಲಿ ಹಿಂದಿ ರಾಜಕಾರಣ ಕೆಲಸ ಮಾಡುತ್ತದೆ.

ಇಂಥದ್ದೇ ಅನುಭವ ನನಗೂ ಆಗಿವೆ. ನಾನೂ 2 ಬಾರಿ ಸಂಸದನಾಗಿದ್ದವನು. ಸಂಸತ್‌ನಲ್ಲಿ ಕನ್ನಡದಲ್ಲಿ ಮಾಡಲಾಗುವ ಭಾಷಣಗಳ ಬಗ್ಗೆ ಆಳುವ ವರ್ಗ ದಿವ್ಯ ನಿರ್ಲಕ್ಷ್ಯ ತೋರುತ್ತದೆ. ಅಲ್ಲದೆ, ಹಿಂದಿ ವ್ಯಾಮೋಹಿ ರಾಜಕಾರಣಿಗಳ ವರಸೆಗಳನ್ನು ಹತ್ತಿರದಿಂದ ನಾನು ಕಂಡಿದ್ದೇನೆ. ಹಿಂದಿಯೇತರ ರಾಜ್ಯಗಳ ರಾಜಕಾರಣಿಗಳೆಂದರೆ ಬಹುತೇಕರಿಗೆ ಅಲ್ಲಿ ಅಪತ್ಯವೇ ಸರಿ.

ರಾಜಕಾರಣ ಹೊರತುಪಡಿಸಿ ಔದ್ಯೋಗಿಕ ಕ್ಷೇತ್ರಕ್ಕೆ ಬಂದರೆ, ಕೇಂದ್ರ ಸರ್ಕಾರದ ಕೆಲ ಹುದ್ದೆಗಳ ಪರೀಕ್ಷೆಗಳನ್ನು ಇಂಗ್ಲಿಷ್‌–ಹಿಂದಿಯಲ್ಲೇ ಬರೆಯಬೇಕಿದೆ. ಅದರಲ್ಲಿ #IBPSmosa ಕೂಡ ಒಂದು. ಈ ಬಾರಿಯ ಅಧಿಸೂಚನೆಯಲ್ಲಿ ಕನ್ನಡಕ್ಕೆ ಸ್ಥಾನವೇ ಇಲ್ಲ. ಹೀಗಾಗಿ ಕನ್ನಡದ ಉದ್ಯೋಗಾಕಾಂಕ್ಷಿಗಳು ಅವಕಾಶಗಳಿಂದ ವಂಚಿತರಾಗುತ್ತಿದ್ದಾರೆ. ಇದು ನಿಲ್ಲಬೇಕು ಎಂದು ಹೆಚ್ಡಿಕೆ ಆಗ್ರಹಿಸಿದ್ದಾರೆ.

ಅಧಿಕೃತ ಭಾಷೆಗಳಲ್ಲಿ ಹಿಂದಿಯೂ ಒಂದು ಎಂದು ಕೇಂದ್ರ ಸರ್ಕಾರ ಬಾಯಿ ಮಾತಿಗಷ್ಟೇ ಹೇಳುತ್ತದೆ. ಆದರೆ, ಹಿಂದಿ ಅಭಿವೃದ್ಧಿಗಾಗಿ ದೇಶ, ವಿದೇಶದಲ್ಲಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲು ಕೇಂದ್ರವು ಕೋಟ್ಯಂತರ ಮೊತ್ತ ವಿನಿಯೋಗಿಸುತ್ತದೆ. ಇದು ರಹಸ್ಯ ಕಾರ್ಯಸೂಚಿಗಳಲ್ಲೊಂದು. ಪ್ರಾಮಾಣಿಕ ಭಾಷಾಭಿಮಾನದಿಂದ ಮಾತ್ರ ಇವುಗಳನ್ನು ಮೆಟ್ಟಿಸಲು ಸಾಧ್ಯ ಎಂದಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author