Wednesday, April 16, 2025

Latest Posts

‘ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ’

- Advertisement -

ಬೆಂಗಳೂರು: ನಿನ್ನೆ ತಾನೇ ಎಲೆಕ್ಷನ್ ಮುಗಿದಿದೆ. ಮೊನ್ನೆ ತನಕ ಆಯಾ ಪಕ್ಷದ ಕಾರ್ಯಕರ್ತರು ಚುನಾವಣಾ ಪ್ರಚಾರದಲ್ಲಿ ಮುಳುಗಿದ್ದರು. ಹಲವೆಡೆ ತೆರಳಿ ಪ್ರಚಾರವನ್ನೂ ಮಾಡಿದ್ದರು. ಹಾಗಾಗಿ ಕಾಂಗ್ರೆಸ್ ಪಕ್ಷದ ಪರ ಪ್ರಚಾರ ಮಾಡಿದ ಕಾರ್ಯಕರ್ತರಿಗೆ ಮಾಜಿ ಸಿಎಂ ಸಿದ್ದರಾಮಯ್ಯ ಧನ್ಯವಾದ ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಸಿದ್ದರಾಮಯ್ಯ, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ನನ್ನದೊಂದು ವಿಶೇಷ ಮನವಿ: ಚುನಾವಣೆಗಾಗಿ ಮನೆ ಮತ್ತು ಸಂಸಾರ ತೊರೆದು ಕೆಲಸ ಮಾಡಿದ್ದೀರಿ. ಈಗ ಸ್ವಲ್ಪ ಬಿಡುವು ಮಾಡಿಕೊಂಡು ತಂದೆ-ತಾಯಿ, ಹೆಂಡತಿ ಮಕ್ಕಳ ಜೊತೆ ಕಾಲ ಕಳೆಯಿರಿ. ಪ್ರಾಮಾಣಿಕವಾದ ನಮ್ಮ ಹೋರಾಟ ಖಂಡಿತ ಫಲಪ್ರದವಾಗುತ್ತದೆ. ಮತ್ತೊಮ್ಮೆ ನಿಮಗೆಲ್ಲರಿಗೆ ಧನ್ಯವಾದಗಳು ಮತ್ತು ಶುಭಾಶಯಗಳು ಎಂದಿದ್ದಾರೆ.

ಅಲ್ಲದೇ, ಕಾಂಗ್ರೆಸ್ ಪಕ್ಷದ ಹೆಮ್ಮೆಯ ಕಾರ್ಯಕರ್ತರು ಮತ್ತು ಅಭಿಮಾನಿ ಬಂಧುಗಳೇ, ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಪರವಾಗಿ ರಾತ್ರಿ-ಹಗಲೆನ್ನದೆ, ಊಟ-ತಿಂಡಿ-ವಿಶ್ರಾಂತಿಯನ್ನು ಮರೆತು ನಿರಂತರವಾಗಿ ಕೆಲಸ ಮಾಡಿದ ನಿಮಗೆಲ್ಲರಿಗೂ ಅಭಿನಂದನೆಗಳು ಮತ್ತು ನನ್ನ ಧನ್ಯವಾದಗಳು. ನಾನು ಸ್ಪರ್ಧಿಸುತ್ತಿರುವ ವರುಣಾ ಕ್ಷೇತ್ರಕ್ಕೆ ರಾಜ್ಯದ ಮೂಲೆಮೂಲೆಗಳಿಂದ ಮಾತ್ರವಲ್ಲ, ಬೇರೆ ರಾಜ್ಯಗಳಿಂದಲೂ ಬಂದು ನನ್ನ ಮೇಲಿನ ಪ್ರೀತಿ-ಅಭಿಮಾನದಿಂದ ತಮ್ಮ ಪಾಡಿಗೆ ತಾವು ಪ್ರಚಾರ ಮಾಡಿದ್ದಾರೆ. ಅವರಲ್ಲೆರನ್ನು ನನಗೆ ಭೇಟಿ ಮಾಡಿ ಧನ್ಯವಾದಗಳನ್ನು ತಿಳಿಸಲು ಕೂಡಾ ಸಾಧ್ಯವಾಗಿಲ್ಲ. ಈ ಪ್ರೀತಿ ಮತ್ತು ಅಭಿಮಾನವೇ ನನ್ನ ಮತ್ತು ಕಾಂಗ್ರೆಸ್ ಪಕ್ಷದ ಶಕ್ತಿ. ಇವರೆಲ್ಲರಿಗೂ ನನ್ನ ಹೃದಯಪೂರ್ವಕ ಕೃತಜ್ಞತೆಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ಯೋಗಿ ಆದಿತ್ಯನಾಥ್‌ರನ್ನ ಭೇಟಿಯಾದ ‘ದಿ ಕೇರಳ ಸ್ಟೋರಿ’ ತಂಡ..

‘ಬೆಂಗಳೂರು ಓಡಿಸ್ತೀನಿ, ಊರು ಬಿಡಿಸುತ್ತೀನಿ ಅಂದವರಿಗೆ ಚುನಾವಣೆ ಫಲಿತಾಂಶ ಬರಲಿದೆ’

‘ಅತಂತ್ರ ಬರುವ ಪ್ರಶ್ನೆ ನಮ್ಮ‌ ಮುಂದೆ ಇಲ್ಲ, ಜೆಡಿಎಸ್ ಅಭ್ಯರ್ಥಿಗಳೇ ಗೆಲ್ಲುವುದು’

- Advertisement -

Latest Posts

Don't Miss