ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..

ಮೈಸೂರು: ತಾಯಿ ಚಾಮುಂಡೇಶ್ವರಿ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಳಗ್ಗೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮುಂದಿನ ಚುನಾವಣೆಯ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ತೆರಳಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ. ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿ ಚಾಮುಂಡೇಶ್ವರಿಯನ್ನು ಬೇಡಿದ್ದೇನೆ ಎಂದರು. ಹಾಸನಾಂಬೆಯ ದರ್ಶನಕ್ಕೆ ಬಂದ ವೇಳೆ … Continue reading ನಿಖಿಲ್ ಸ್ಪರ್ಧೆ ಬಗ್ಗೆ ಪರೋಕ್ಷವಾಗಿ ಸೂಚನೆ ಕೊಟ್ಟ ಹೆಚ್‌ಡಿಕೆ..