Tuesday, May 21, 2024

Latest Posts

ಪ್ರಹ್ಲಾದ್ ಜೋಶಿ ಪರ ಪ್ರಚಾರಕ್ಕಾಗಿ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ ಮಾಜಿ ಸಿಎಂ ಯಡಿಯೂರಪ್ಪ

- Advertisement -

Hubli News: ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಪ್ರಚಾರಕ್ಕಳಿಯಲು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸಜ್ಜಾಗಿದ್ದಾರೆ. ಹುಬ್ಬಳ್ಳಿ- ಧಾರವಾಡದಲ್ಲಿ ಬಿಜೆಪಿ ಲೋಕಸಭಾ ಚುನಾವಣೆಗೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸ್ಪರ್ಧಿಸುತ್ತಿದ್ದು, ಜೋಶಿ ಪರ ಪ್ರಚಾರಕ್ಕಾಗಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್‌ಪ ಹುಬ್ಬಳ್ಳಿಗೆ ಆಗಮಿಸಲಿದ್ದಾರೆ.

ಈ ಕ್ಷೇತ್ರದಲ್ಲಿ ಲಿಂಗಾಯಿತ ಮತದಾರರ ಸಂಖ್ಯೆ ಹೆಚ್ಚಾಗಿದ್ದು, ಯಡಿಯೂರಪ್ಪ ಬಂದು ಕ್ಯಾಂಪೇನ್ ಮಾಡಿದ್ರೆ, ಮತದಾರರ ಮೇಲೆ ಉತ್ತಮ ಎಫೆಕ್ಟ್ ಬೀಳಬಹುದು ಎಂಬುದು ಬಿಜೆಪಿ ಲೆಕ್ಕಾಚಾರ. ಹಾಗಾಗಿ ಮಂಗಳವಾರದ ದಿನ ಬಿ.ಎಸ್.ಯಡಿಯೂರಪ್ಪ ಹುಬ್ಬಳ್ಳಿಗೆ ಆಗಮಿಸಿ, ಜೋಶಿ ಪರ ಕ್ಯಾಂಪೇನ್ ಮಾಡಲಿದ್ದಾರೆ. ಒಂಟ್ಟು ನಾಲ್ಕು ಕಡೆಯಲ್ಲಿ ಕಾರ್ಯಕ್ರಮ ನಿಗದಿಯಾಗಿದ್ದು, ಹುಬ್ಬಳ್ಳಿ, ನವಲಗುಂದ, ಲಿಂಗರಾಜನಗರದಲ್ಲಿ ಕಾರ್ಯಕ್ರಮ ನಡೆಯಲಿದೆ.

ಈ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಸೇರಿ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದು, ಮತ ಪ್ರಚಾರ ನಡೆಸಲಿದ್ದಾರೆ.

ಚಾಮರಾಜನಗರ ಬಿಜೆಪಿ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

ಮತದಾನ ಜಾಗೃತಿ ಮೂಡಿಸಿ ಗಮನಸೆಳೆದ ಪುಟಾಣಿಗಳು

ನೇಹಾಗೆ ಆದಂತಹ ಘಟನೆ ಇನ್ನೊಬ್ಬರಿಗೆ ಆಗಬಾರದು ಅನ್ನೋದು ನಮ್ಮ ಬೇಡಿಕೆ: ಮುರುಗೇಶ್ ನಿರಾಣಿ

- Advertisement -

Latest Posts

Don't Miss