Saturday, January 18, 2025

Latest Posts

ಮಾಜಿ ವಿದೇಶಾಂಗ ಸಚಿವ ಎಸ್.ಎಂ.ಕೃಷ್ಣ ನಿಧನ: ಸ್ಯಾಂಡಲ್‌ವುಡ್ ಗಣ್ಯರಿಂದ ಸಂತಾಪ ಸೂಚನೆ

- Advertisement -

Political News: ಮಾಜಿ ಸಿಎಂ, ಮಾಜಿ ಕೇಂದ್ರ ಸಚಿವ ಎಸ್.ಎಂ.ಕೃಷ್ಣ ವಯೋಸಹಜ ಖಾಯಿಲೆಯಿಂದ ನಿಧನರಾಗಿದ್ದು, ಸ್ಯಾಂಡಲ್‌ವುಡ್ ತಾರೆಯರು ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ.

ನಟಿ, ಮಾಜಿ ಸಂಸದೆ ಸುಮಲತಾ ಅಂಬರೀಷ್ ಕೂಡ ಎಸ್.ಎಂ.ಕೃಷ್ಣ ನಿಧನಕ್ಕೆ ಸಂತಾಪ ಸೂಚಿಸಿದ್ದು, ನಮ್ಮ ಮಂಡ್ಯದ ಹೆಮ್ಮೆ, ಮಾದರಿ ನಾಯಕರು, ರಾಜ್ಯದ ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ ದೂರದೃಷ್ಟಿ ಆಡಳಿತ ನೀಡಿದ ಹಿರಿಯರು, ಮುತ್ಸದ್ದಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಅತೀವ ದುಃಖವಾಯಿತು. ಸಜ್ಜನರಾಗಿ ತಮ್ಮ ಶಿಸ್ತುಬದ್ಧ ಜೀವನ, ಆದರ್ಶಪ್ರಾಯ ನಡವಳಿಕೆ ಮೂಲಕ ರಾಜಕೀಯ-ಸಾಮಾಜಿಕ ವಲಯದಲ್ಲಿ ವಿಭಿನ್ನರಾಗಿದ್ದ ಅವರ ಮಾರ್ಗದರ್ಶನ, ಆಶೀರ್ವಾದ ನಮ್ಮ ಕುಟುಂಬಕ್ಕೆ ಸದಾ ದೊರಕಿದ್ದು ಸೌಭಾಗ್ಯವೇ ಸರಿ. ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ-ಹಿತೈಷಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ದೂರದೃಷ್ಟಿ, ತತ್ವಾದರ್ಶಗಳು ನಿರಂತರ ಪ್ರೇರಣೆಯಾಗಿರಲಿ. ಓಂ ಶಾಂತಿ ಎಂದು ಟ್ವೀಟ್ ಮಾಡಿದ್ದಾರೆ.

ನಿಖಿಲ್ ಕುಮಾರ್ ಎಸ್.ಎಂ.ಕೃಷ್ಣ ನಿಧನದ ಬಗ್ಗೆ ಸಂತಾಪ ಸೂಚಿಸಿದ್ದು, ಮಾಜಿ ಮುಖ್ಯಮಂತ್ರಿಗಳು, ಕೇಂದ್ರದ ಮಾಜಿ ವಿದೇಶಾಂಗ ಸಚಿವರು ಹಾಗೂ ಕರ್ನಾಟಕ ಕಂಡ ಅತ್ಯುತ್ತಮ ಮುಖ್ಯಮಂತ್ರಿಗಳಲ್ಲಿ ಒಬ್ಬರಾಗಿದ್ದ ಹಿರಿಯರು, ಮುತ್ಸದ್ದಿಗಳಾದ ಶ್ರೀ ಎಸ್.ಎಂ.ಕೃಷ್ಣ ಅವರು ನಮ್ಮನ್ನು ಅಗಲಿರುವ ಸುದ್ದಿ ಕೇಳಿ ಬಹಳ ನೋವುಂಟಾಯಿತು. ಅಗಲಿದ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ, ಅವರ ಕುಟುಂಬ ಅಭಿಮಾನಿ ವರ್ಗಕ್ಕೆ ಮತ್ತು ರಾಜ್ಯದ ಜನತೆಗೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ನಿಖಿಲ್ ಕುಮಾರ್ ಸಂತಾಪ ಸೂಚಿಸಿದ್ದಾರೆ.

ರಿಯಲ್ ಸ್ಟಾರ್ ಉಪೇಂದ್ರ ಕೂಡ ಕೃಷ್ಣ ನಿಧನದ ಬಗ್ಗೆ ಟ್ವೀಟ್ ಮಾಡಿದ್ದು, ರಾಜ್ಯದ ಮುಖ್ಯಮಂತ್ರಿಯಾಗಿ, ದೇಶದ ವಿದೇಶಾಂಗ ಸಚಿವರಾಗಿ, ಭಾರತದಲ್ಲಿ ವಿವಿಧ ಮುಖ್ಯ ಹುದ್ದೆಗಳ ಮೂಲಕ ದೇಶ ಮತ್ತು ನಾಡಿಗೆ ಅಪಾರ ಕೊಡುಗೆಗಳನ್ನು ನೀಡಿದ್ದ ಪದ್ಮವಿಭೂಷಣ ಶ್ರೀ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಸದ್ಗತಿ ಲಭಿಸಲಿ ಮತ್ತು ಅವರ ಕುಟುಂಬಕ್ಕೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ಆ ಭಗವಂತ ಕರುಣಿಸಲಿ.. ಓಂ ಶಾಂತಿ ಎಂದಿದ್ದಾರೆ.

ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾಗಿದ್ದ ಶ್ರೀ ಎಸ್. ಎಂ. ಕೃಷ್ಣ ಅವರಿಗೆ ಗೌರವಪೂರ್ವಕ ಶ್ರದ್ಧಾಂಜಲಿ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ ಎಂದು ಅಶ್ವಿನಿ ಪುನೀತ್ ರಾಜ್‌ಕುಮಾರ್ ಕಂಬನಿ ಮಿಡಿದಿದ್ದಾರೆ.

- Advertisement -

Latest Posts

Don't Miss