Thursday, December 5, 2024

Latest Posts

ಮಾಜಿ ಸಚಿವ, ಹಾನಗಲ್ ಮಾಜಿ ಶಾಸಕ ಮನೋಹರ್ ತಹಶೀಲ್ದಾರ್ ನಿಧನ

- Advertisement -

Political News: ಹಾನಗಲ್‌ನ ಮಾಜಿ ಶಾಸಕ ಮತ್ತು ಮಾಜಿ ಅಬಕಾರಿ ಸಚಿವರಾಗಿದ್ದ ಮನೋಹರ್ ತಹಶೀಲ್ದಾರ್‌ ಇಂದು ನಿಧನರಾಗಿದ್ದಾರೆ. 80 ವರ್ಷದ ಮನೋಹರ್ ಬಹುದಿನಗಳಿಂದ ವಯೋಸಹಜ ಖಾಯಿಲೆಯಿಂದ ಬಳಲುತ್ತಿದ್ದರು. ಇಷ್ಟು ದಿನ ಚಾಮರಾಜಪೇಟೆಯಲ್ಲಿರುವ ಶಂಕರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ ಮನೋಹರ್ ಸಾವನ್ನಪ್ಪಿದ್ದಾರೆ.

ಕೆಲ ದಿನಗಳಿಂದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಸೇರಿ, ಹಲವು ರಾಜಕೀಯ ಗಣ್ಯರು ಮನೋಹರ್ ಅವರ ಆರೋಗ್ಯ ವಿಚಾರಿಸಿದ್ದರು. ಆದರೆ ಇಂದು ಚಿಕಿತ್ಸೆ ಫಲಿಸದೇ, ಮನೋಹರ್ ನಿಧರಾಗಿದ್ದು, ಇವರ ನಿಧನಕ್ಕೆ ರಾಜಕೀಯ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಮೊದಲು ಕಾಂಗ್ರೆಸ್‌ನಲ್ಲಿದ್ದ ಮನೋಹರ್, ಕಳೆದ ಬಾರಿ ಕಾಂಗ್ರೆಸ್‌ನಲ್ಲಿ ಟಿಕೇಟ್ ಸಿಗಲಿಲ್ಲವೆಂಬ ಕಾರಣಕ್ಕೆ, ಕಾಂಗ್ರೆಸ್ ತೊರೆದು ಜೆಡಿಎಸ್ ಸೇರಿದ್ದರು. ಬಳಿಕ ಲೋಕಸಭೆ ಚುನಾವಣೆ ಸಮಯದಲ್ಲಿ ಜೆಡಿಎಸ್ ಬಿಟ್ಟು ಬಿಜೆಪಿ ಸೇರಿದ್ದರು.

ಇನ್ನು ಹಾನಗಲ್‌ನ ಅಕ್ಕಿವಳ್ಳಿ ಗ್ರಾಮದಲ್ಲಿರುವ ಅವರ ಜಮೀನಿನಲ್ಲೇ ಅಂತ್ಯಕ್ರಿಯೆ ನೆರವೇರಿಸಲಾಗಿದೆ. ಮಾಜಿ ಸಚಿವರಾದ ಮನೋಹರ ತಹಶೀಲ್ದಾರ್ ಅವರ ನಿಧನದ ಸುದ್ದಿ ದುಃಖವುಂಟುಮಾಡಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಮನೋಹರ ತಹಶೀಲ್ದಾರ್ ಅವರ ಅಗಲಿಕೆಯಿಂದ ನೊಂದಿರುವ ಕುಟುಂಬವರ್ಗ ಮತ್ತು ಬಂಧು ಮಿತ್ರರಿಗೆ ನನ್ನ ಸಂತಾಪಗಳು ಎಂದು ಸಿಎಂ ಸಿದ್ದರಾಮಯ್ಯ ಸಂತಾಪ ಸೂಚಿಸಿದ್ದಾರೆ.

ಮಾಜಿ ಸಚಿವರು, ಹಾನಗಲ್ ಕ್ಷೇತ್ರದ ಆರು ಬಾರಿಯ ಶಾಸಕರು ಹಾಗೂ ಆತ್ಮೀಯರಾದ ಶ್ರೀ ಮನೋಹರ್ ತಹಶೀಲ್ದಾರ್ ಅವರು ನಿಧನರಾದ ವಿಷಯ ತಿಳಿದು ತುಂಬಾ ದುಃಖಿತನಾಗಿದ್ದೇನೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರ ನಾಯಕತ್ವವನ್ನು ಮೆಚ್ಚಿ ಬಿಜೆಪಿ ಸೇರಿದ್ದ ಅವರು, ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯ ಗೆಲುವಿಗಾಗಿ ಶ್ರಮಿಸಿದ್ದರು. ಅವರ ನಿಧನದಿಂದ ರಾಜ್ಯವು ಒಬ್ಬ ಅನುಭವಿ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ‌. ದೇವರು ಅವರ ಆತ್ಮಕ್ಕೆ ಶಾಂತಿ ನೀಡಿ, ಅವರ ಕುಟುಂಬಕ್ಕೆ ಹಾಗೂ ಅವರ ಅಪಾರ ಅಭಿಮಾನಿ ಬಳಗಕ್ಕೆ ಈ ನೋವನ್ನು ಭರಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಓಂ ಶಾಂತಿಃ ಎಂದು ಮಾಜಿ ಸಿಎಂ, ಹಾಲಿ ಸಂಸದ ಬಸವರಾಜ್ ಬೊಮ್ಮಾಯಿ ಸಂತಾಪ ಸೂಚಿಸಿದ್ದಾರೆ.

- Advertisement -

Latest Posts

Don't Miss