BREAKING: ನೂತನ ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ನಾಳೆ ‘ಮಾಜಿ ಸಚಿವ ಸಿಎಂ ಇಬ್ರಾಹಿಂ’ ಪದಗ್ರಹಣ

ಬೆಂಗಳೂರು: ಭಾನುವಾರ ಬೆಳಗ್ಗೆ ಕೇಂದ್ರದ ಮಾಜಿ ಸಚಿವ ಸಿ.ಎಂ. ಇಬ್ರಾಹಿಂ ಅವರು ಜೆಡಿಎಸ್‍ ರಾಜ್ಯಾಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಕೆ.ಎನ್.ತಿಪ್ಪೇಸ್ವಾಮಿ ತಿಳಿಸಿದರು.

ಪಕ್ಷದ ರಾಜ್ಯ ಕಚೇರಿಯಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರಸ್ತುತ ರಾಜ್ಯಾಧ್ಯಕ್ಷರಾಗಿರುವ ಹೆಚ್.ಕೆ. ಕುಮಾರಸ್ವಾಮಿ ಅವರಿಗೆ ಪಾರ್ಲಿಮೆಂಟರಿ ಬೋರ್ಡ್ ಅಧ್ಯಕ್ಷರಾಗಿ ಪದಗ್ರಹಣ ಮಾಡಲಿದ್ದಾರೆ ಎಂದು ತಿಳಿಸಿದರು.

ನಾಳೆ ಬೆಳಗ್ಗೆ 10.15ಕ್ಕೆ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಮಾಜಿ ಪ್ರಧಾನಿ, ಜೆಡಿಎಸ್‍ ವರಿಷ್ಠ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಮತ್ತಿತರ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಪ್ಪೇಸ್ವಾಮಿ ಮಾಹಿತಿ ನೀಡಿದರು.

About The Author