ಬೆಂಗಳೂರು: ಕೆಪಿಸಿಸಿ ಉಪಾಧ್ಯಕ್ಷರಾಗಿದ್ದಂತ ಮಾಜಿ ಸಚಿವ ಪ್ರಮೋದ್ ಮಧ್ವರಾಜ್, ಪಕ್ಷಕ್ಕೆ ರಾಜೀನಾಮೆ ನೀಡಿ, ಗುಡ್ ಬೈ ಹೇಳಿದ್ದಾರೆ.
ಕಾಂಗ್ರೆಸ್ ಪ್ರಾಥಮಿಕ ಸದಸ್ಯತ್ವ ಹಾಗೂ ಕೆಪಿಸಿಸಿ ಉಪಾಧ್ಯಕ್ಷರ ಸ್ಥಾನಕ್ಕೂ ರಾಜೀನಾಮೆ ಸಲ್ಲಿಸಿದ್ದಾರೆ. ಈ ಸಂಬಂಧ ರಾಜೀನಾಮೆ ಪತ್ರವನ್ನು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಸಲ್ಲಿಸಿದ್ದಾರೆ.
ಅಂದಹಾಗೇ ಕಾಂಗ್ರೆಸ್ ಪಕ್ಷದಿಂದ ಈ ಹಿಂದೆ ಪ್ರಮೋದ್ ಮಧ್ವರಾಜ್ ಅವರು ಕ್ರೀಢಾ ಸಚಿವರಾಗಿದ್ದರು. ಇದೀಗ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿ, ಹೊರ ನಡೆದಿದ್ದಾರೆ.



