ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ

ಶಾಮನೂರು ಶಿವಶಂಕರಪ್ಪ ನಿಧನಕ್ಕೆ ಮಾಜಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದ್ದಾರೆ. ಹಿರಿಯ ಶಾಸಕರು ಹಾಗೂ ವೀರಶೈವ ಮಹಾಸಭಾ ಅಧ್ಯಕ್ಷರಾದ ಶಾಮನೂರ ಶಿವಶಂಕರಪ್ಪನವರು ನಿಧನರಾದ ವಿಷಯ ತಿಳಿದು ನನಗೆ ಅತ್ಯಂತ ದುಃಖವಾಗಿದೆ.

ಸಾಮಾಜಿಕ, ರಾಜಕೀಯ, ಶೈಕ್ಷಣಿಕ, ಔದ್ಯೋಗಿಕ ಕ್ಷೇತ್ರಗಳೂ ಸೇರಿ ಇತರ ಕ್ಷೇತ್ರಗಳಲ್ಲಿ ಅನೇಕ ವರ್ಷಗಳಿಂದ ಸೇವೆ ಸಲ್ಲಿಸಿದ್ದರು. ಶಾಸಕರಾಗಿ, ರಾಜ್ಯದ ಸಚಿವರಾಗಿ ದಕ್ಷ ಹಾಗೂ ಪ್ರಾಮಾಣಿಕತೆಯಿಂದ ಕಾರ್ಯನಿರ್ವಹಿಸಿದ್ದರು.

ಅಖಿಲ ಭಾರತ ವೀರಶೈವ ಮಹಾಸಭೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಮಾಜವನ್ನು ಮುನ್ನಡೆಸಿದ್ದರು. ಅವರ ನಿಧನದಿಂದ ರಾಜ್ಯಕ್ಕೆ, ವಿಶೇಷವಾಗಿ ದಾವಣಗೆರೆ ಜಿಲ್ಲೆ ಮತ್ತು ವೀರಶೈವ ಸಮಾಜಕ್ಕೆ ತುಂಬಲಾರದ ಹಾನಿಯಾಗಿದೆ.

ವೈಯಕ್ತಿಕವಾಗಿ ನಾನೂ ಅತ್ಯಂತ ಗೌರವಿಸುತ್ತಿದ್ದ ಇವರು ಇನ್ನಿಲ್ಲವಾಗಿರುವುದು ನನಗೆ ತೀವ್ರ ನೋವನ್ನುಂಟು ಮಾಡಿದೆ. ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ, ಅವರ ಅಭಿಮಾನಿಗಳಿಗೆ ನೀಡಲಿ. ಮೃತರ ಆತ್ಮಕ್ಕೆ ಚಿರಶಾಂತಿ ದೊರೆಯಲೆಂದು ಪ್ರಾರ್ಥಿಸುತ್ತೇನೆ ಎಂದು, ಮಾಜಿ ಸಚಿವರಾದ ಶಂಕರ ಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದ್ದಾರೆ.

About The Author