Hubli News: ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ನಿಧನದಿಂದ ರಾಜ್ಯವೂ ಓರ್ವ ಮಹಾನ ವ್ಯಕ್ತಿಯನ್ನ ಕಳೆದುಕೊಂಡತಾಗಿದೆ ಎಂದು ಮಾಜಿ ಸಚಿವ ಶಂಕರಪಾಟೀಲ ಮುನೇನಕೊಪ್ಪ ಸಂತಾಪ ಸೂಚಿಸಿದರು.
ಈ ಕುರಿತು ಮಾಧ್ಯಮದ ಜೊತೆಗೆ ಮಾತನಾಡಿದ ಅವರು,ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ, ಕೇಂದ್ರ ಸಚಿವರಾಗಿ ಅತ್ಯುತ್ತಮ ಕಾರ್ಯವನ್ನ ಮಾಡಿದ್ದ ಎಸ್.ಎಂ.ಕೃಷ್ಣ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬಕ್ಕೆ ಈ ನೋವನ್ನ ಭರಿಸುವ ಶಕ್ತಿ ನೀಡಲಿ ಎಂದು ಮಾಜಿ ಸಚಿವ ಶಂಕರ ಪಾಟೀಲಮುನೇನಕೊಪ್ಪ ಅವರು ಸಂತಾಪ ಸೂಚಿಸಿದ್ದಾರೆ.




