- Advertisement -
www.karnatakatv.net : ಬೆಳಗಾವಿ: ಮಾಜಿ ಸಚಿವ ವಿನಯ ಕುಲಕರ್ಣಿ ಇವತ್ತು ಬೆಳಗಾವಿ ಹಿಂಡಲಗಾ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆದ ತಕ್ಷಣ ಬೆಳಗಾವಿ ನಾಗನೂರು ರುದ್ರಾಕ್ಷಿ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶಿರ್ವಾದ ಪಡೆದುಕೊಂಡರು.
ಇದೇ ಸಂದರ್ಭದಲ್ಲಿ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಅವರು ವಿನಯ ಕುಲಕರ್ಣಿ ಅವರನ್ನ ಸ್ವಾಗತಿಸಿದರು.ನಂತರ ಸಂಸದ ಪ್ರಕಾಶ ಹುಕ್ಕೇರಿಯನ್ನ ಬಿಗಿಯಾಗಿ ಅಪ್ಪಿಕೊಂಡ ವಿನಯ ಕುಲಕರ್ಣಿ ಬಳಿಕ ನಾಗನೂರು ಮಠದ ಶಿವಬಸವ ಸ್ವಾಮೀಜಿ ಗದ್ದುಗೆ ದರ್ಶನ ಪಡೆದರು.
ನಾಗೇಶ್ ಕರ್ನಾಟಕ ಟಿವಿ ಬೆಳಗಾವಿ
- Advertisement -

