‘ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು’

Political News: ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಆರೋಪಿಸಿ, ರಾಜ್ಯದ ಹಲವೆಡೆ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಮಾಜಿ ಸಚಿವ, ಬಿಜೆಪಿ ನಾಯಕ ಸಿ.ಟಿ.ರವಿ, ಅಧಿಕಾರದಲ್ಲಿದ್ದರೂ ಪ್ರತಿಭಟಿಸುತ್ತಿರುವ ವಿಶ್ವದ ಏಕೈಕ ಪಕ್ಷ ಕಾಂಗ್ರೆಸ್ ಆಗಿರಬೇಕು ಎಂದು ವ್ಯಂಗ್ಯವಾಡಿದ್ದಾರೆ.

ಅಲ್ಲದೇ, ಪ್ರತಿ ಕನ್ನಡಿಗನಿಗೆ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುವ ಭರವಸೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮನಗಂಡಿರುವ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸುತ್ತಿದ್ದಾರೆ. ತಮ್ಮ ವೈಫಲ್ಯವನ್ನು ಮರೆಮಾಚಲು ಈ ಸೋತವರು ತಮ್ಮ ಪ್ರತಿಭಟನೆಯ ಮೂಲಕ ಕನ್ನಡಿಗರನ್ನು ಮೂರ್ಖರನ್ನಾಗಿಸಲು ಪ್ರಯತ್ನಿಸುತ್ತಿದ್ದಾರೆ. ಎಷ್ಟೇ ಪ್ರತಿಭಟಿಸಿದರೂ ಕನ್ನಡಿಗರು ಚುನಾವಣಾ ಸಂದರ್ಭದಲ್ಲಿ ಮಾಡಿದ ವಂಚನೆಗೆ ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಿದ್ದಾರೆ.

ಚುನಾವಣೆಯಲ್ಲಿ 10 ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತೇವೆ ಎಂದು ಭರವಸೆ ನೀಡಿ ವಿಫಲಾಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಉಗ್ರ ಪ್ರತಿಭಟನೆ ನಡೆಸುತ್ತಿದೆ. ಅಧಿಕಾರಕ್ಕಾಗಿ ಸುಳ್ಳು ಭರವಸೆಗಳನ್ನು ನೀಡಿ, ಅಧಿಕಾರವಹಿಸಿಕೊಂಡ ನಂತರ ಜನರಿಗೆ ಮೋಸ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಂಗ್ರೆಸ್ ಪಕ್ಷ ಮಾಡುತ್ತಿರುವ ಈ ಪ್ರತಿಭಟನೆಗೆ ಕನ್ನಡಿಗರೆಲ್ಲರ ಬೆಂಬಲವಿದೆ ಎಂದು ರವಿ ವ್ಯಂಗ್ಯವಾಗಿ ಟ್ವೀಟ್ ಮಾಡಿದ್ದಾರೆ.

ಅಧಿಕಾರಕ್ಕೆ ಬರಲು ಏನು ಬೇಕಾದರೂ ಭರವಸೆ ಕೊಡುವ ಮೋಸಗಾರರ ಮೇಲೆ ಜನರು ನಂಬಿಕೆ ಇಟ್ಟರೆ ಹೀಗಾಗುತ್ತದೆ ಎಂದು ಸಿ.ಟಿ.ರವಿ ಟ್ವೀಟ್ ಮಾಡಿದ್ದಾರೆ.

ಜಗದೀಶ್ ಶೆಟ್ಟರ್‌ಗೆ ಮತ್ತೊಮ್ಮೆ ಮುಖಭಂಗ: ಮತ್ತೊಮ್ಮೆ ಅಧಿಕಾರದ ಗದ್ದುಗೆ ಏರಿದ ಬಿಜೆಪಿ

ಇದೆಲ್ಲ ಕಾಂಗ್ರೆಸ್ ಅಗ್ಗದ ಜನಪ್ರಿಯತೆಗೆ ಮಾಡಿರುವ ಯೋಜನೆ: ಪ್ರಹ್ಲಾದ್ ಜೋಶಿ

ಕೇಂದ್ರ ಸರ್ಕಾರ ಅಕ್ಕಿ ಕೊಡುತ್ತಿಲ್ಲವೆಂದು ಕೋಲಾರದಲ್ಲಿ ಕಾಂಗ್ರೆಸ್ಸಿಗರಿಂದ ಪ್ರತಿಭಟನೆ..

About The Author