www.karnatakatv.net: ರಾಯಚೂರು : ನಗರದಲ್ಲಿ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾದ ವೇಳೆ ಪೊಲೀಸರ ಮೇಲೆ ಕೈ ಮಾಡಿದ ಮಾಜಿ ಶಾಸಕ.
ರಾಯಚೂರು ಗ್ರಾಮಾಂತರ ಬಿಜೆಪಿ ಮಾಜಿ ಶಾಸಕ ಪಾಪರೆಡ್ಡಿ ಅವರ ನೇತೃತ್ವದಲ್ಲಿ ಅಂಬೇಡ್ಕರ್ ವೃತ್ತದಲ್ಲಿ ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆಗೆ ಮುಂದಾಗಿದ್ದುರು. ಸಿದ್ದರಾಮಯ್ಯ ಪ್ರತಿಕೃತಿ ದಹಿಸಲು ಅವಕಾಶ ನೀಡದ ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆದಿದೆ. ಪೊಲೀಸರು ಮತ್ತು ಪ್ರತಿಭಟನಕಾರರ ನಡುವೆ ವಾಗ್ವಾದ ನಡೆದುದ್ದು, ಇದೇ ಸಂದರ್ಭದಲ್ಲಿ ಪೊಲೀಸರಿಗೆ ಕೈ ಎತ್ತಿದ್ದಾನೆ. ಪೋಲೀಸ್ ರ ಮಾತಿಗೆ ಕಿವಿಕೊಡದ ಪ್ರತಿಭಟನಾಕಾರರು ಕೊನೆಗೂ ಪ್ರತಿಕೃತಿಗೆ ಬೆಂಕಿ ಹಚ್ಚಿ ಕಾಂಗ್ರೆಸ್ ವಿರುದ್ದ ಘೋಷಣೆ ಕುಗಿದರು. ಪಶ್ಚಿಮ ಠಾಣೆ ಪಿ ಸಿ ರಾಘವೇಂದ್ರ ಮೇಲೆಹಲ್ಲೆ ಮಾಡಿ, ಬಿಜೆಪಿ ಎಸ್ ಮೋರ್ಚಾದಿಂದ ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನಾ ಧರಣಿ ಮಾಡಿದರು .
ಅನಿಲ್ ಕುಮಾರ್, ಕರ್ನಾಟಕ ಟಿವಿ- ರಾಯಚೂರು