2028ಕ್ಕೆ ಮದ್ದೂರಿನಿಂದಲೇ ಸುಮಲತಾ ಸ್ಪರ್ಧೆ?

2028ರ ಚುನಾವಣೆಗೆ ಮಾಜಿ ಸಂಸದೆ ಸುಮಲತಾ ಸ್ಪರ್ಧೆ ಖಚಿತವಾಗಿದೆ. ಇದನ್ನು ಸ್ವತಃ ಸುಮಲತಾ ಅವರೇ ಬಹಿರಂಗವಾಗಿ ಹೇಳಿಕೊಂಡಿದ್ದಾರೆ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮದ್ದೂರು ಕ್ಷೇತ್ರದಿಂದಲೇ ಸ್ಪರ್ಧೆಗಿಳಿಯುವಂತೆ, ಬಿಜೆಪಿ ನಾಯಕರು ಆಹ್ವಾನ ನೀಡಿದ್ದರು.

ಆದರೆ, ರಾಜ್ಯ ರಾಜಕಾರಣಕ್ಕೆ ಬರುವ ಮನಸ್ಸು ಇಲ್ಲವೆಂಬ ಅಭಿಪ್ರಾಯ ವ್ಯಕ್ತಪಡಿಸಿದ್ದೆ. ಮದ್ದೂರು ನನ್ನ ಪತಿ ಅಂಬರೀಶ್ ಅವರ ಕರ್ಮಭೂಮಿ. ಹೀಗಾಗಿ ನಾನು ಅಥವಾ ಪುತ್ರ ಅಭಿಷೇಕ್‌ ಅಂಬರೀಶ್ ಮದ್ದೂರು ಕ್ಷೇತ್ರದಿಂದ ಸ್ಪರ್ಧಿಸುವಂತೆ, ಅಂಬಿ ಅಭಿಮಾನಿಗಳ ಅಪೇಕ್ಷೆಯಾಗಿದೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ನನ್ನ ಸ್ಪರ್ಧೆ ಖಚಿತ. ಅದು ಯಾವ ಕ್ಷೇತ್ರ ಎನ್ನುವುದನ್ನು ಬಿಜೆಪಿ ವರಿಷ್ಠರು ತೀರ್ಮಾನ ಮಾಡುತ್ತಾರೆ. ಆದರೆ, ಮದ್ದೂರು ಕ್ಷೇತ್ರ ನನ್ನ ಪ್ರಥಮ ಆಯ್ಕೆಯಾಗಿದೆ ಎಂದು, ಮಾಜಿ ಸಂಸದೆ ಸುಮಲತಾ ಅಂಬರೀಶ್ ಹೇಳಿದ್ದಾರೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ದೊಡ್ಡ ಅರಸಿನಕೆರೆ ಗ್ರಾಮದ ಕಾರ್ಯಕ್ರಮಕ್ಕೆ ತೆರಳುವಾಗ, ಮಾರ್ಗ ಮಧ್ಯೆ ಪ್ರವಾಸಿ ಮಂದಿರದಲ್ಲಿ ಸುದ್ದಿಗಾರರೊಂದಿಗೆ ಸುಮಲತಾ ಮಾತನಾಡಿದ್ರು.

ರಾಜಕೀಯ ಪ್ರವೇಶ ಕುರಿತು ನಿರ್ಧಾರ ಕೈಗೊಳ್ಳುವಲ್ಲಿ ಅಭಿಷೇಕ್ ಅಂಬರೀಶ್ ಸರ್ವ ಸ್ವತಂತ್ರ. ಸೂಕ್ತ ಸಮಯದಲ್ಲಿ ಆತ ತಂದೆ ಅಂಬರೀಷ್ ಅವರ ಬೆಂಬಲಿಗರು, ಮುಖಂಡರು ಹಾಗೂ ಅಭಿಮಾನಿಗಳೊಂದಿಗೆ ಚರ್ಚೆ ನಡೆಸಿದ ನಂತರವೇ, ಆತನ ರಾಜಕೀಯ ಪ್ರವೇಶ ನಿರ್ಧಾರವಾಗಲಿದೆ ಎಂದು ಸುಮಲತಾ ಹೇಳಿದ್ರು.

ಇನ್ನು, ಅಭಿಷೇಕ್‌ ಅಂಬರೀಶ್‌ ಪ್ರತಿಕ್ರಿಯೆ ನೀಡಿದ್ದು, ನನ್ನ ರಾಜಕೀಯ ಪ್ರವೇಶ ಮತ್ತು ಚುನಾವಣೆ ಸ್ಪರ್ಧೆ ಬಗ್ಗೆ, ಯಾವುದೇ ವೈಯಕ್ತಿಕ ನಿರ್ಧಾರ ಕೈಗೊಳ್ಳುವುದಿಲ್ಲ. ನನ್ನ ತಾಯಿ ಸುಮಲತಾ ಅಂಬರೀಶ್ ಮತ್ತು ಕುಟುಂಬ ಹಾಗೂ ತಂದೆಯ ಆಪ್ತರೊಂದಿಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಹೇಳಿದ್ರು.

About The Author