ಬೆಂಗಳೂರು: ಉದ್ಯಮಿ ಸಿದ್ಧಾರ್ಥ್ ಸಾವಿನ ಕುರಿತು ಸೂಕ್ತ ತನಿಖೆಯಾಗಬೇಕು ಅಂತ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ ದೇವೇಗೌಡರು ಆಗ್ರಹಿಸಿದ್ದಾರೆ.
ಉದ್ಯಮಿ ಸಿದ್ಧಾರ್ಥ್ ಸಾವಿನ ಸುದ್ದಿಗೆ ವಿಷಾದ ವ್ಯಕ್ತಪಡಿಸಿರುವ ಮಾಜಿ ಪ್ರಧಾನಿ ದೇವೇಗೌಡರು ‘ವಿ.ಜಿ. ಸಿದ್ಧಾರ್ಥ ಅವರ ಸಾವಿನ ವಿಷಯ ತಿಳಿದು ಆಘಾತವಾಗಿದೆ. ಸಿದ್ಧಾರ್ಥರವರದ್ದು ತುಂಬಾ ಸರಳ ವ್ಯಕ್ತಿತ್ವ. 35 ವರ್ಷಗಳಿಂದ ಅವರನ್ನು ನಾನು ನೋಡಿದ್ದೇನೆ. ಸಾವಿರಾರು ಜನರ ಸ್ವಾಭಿಮಾನದ ಬದುಕಿಗೆ ದಾರಿಯಾಗಿದ್ದರು.
ಅವರ ಈ ದಾರುಣ ಸಾವಿನ ಬಗ್ಗೆ ಸರ್ಕಾರ ಸೂಕ್ತ ತನಿಖೆ ನಡೆಸಲಿ’ ಅಂತ ಟ್ವೀಟ್ ಮಾಡಿದ್ದಾರೆ.
ಇನ್ನು ನಿನ್ನೆ ಸಿದ್ಧಾರ್ಥ್ ನಾಪತ್ತೆ ಸುದ್ದಿ ತಿಳಿಯುತ್ತಿದ್ದಂತೆ ದೇವೇಗೌಡರು ಪಕ್ಷ ಬೇಧ ಮರೆತು ಮಾಜಿ ಸಿಎಂ ಎಸ್.ಎಂ ಕೃಷ್ಣರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ರು. ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಅವರು ಐಟಿ ಇಲಾಖೆ ದಾಳಿ ಹೇಗಿರುತ್ತೆ ಅನ್ನೋದನ್ನು ನೀವೇ ವಿಶ್ಲೇಷಿಸಿಕೊಳ್ಳಿ ಅಂತ ಸೂಚ್ಯವಾಗಿ ನುಡಿದಿದ್ದರು.