ಕಾಂಗ್ರೆಸ್ ಪಕ್ಷದ ಮಾಜಿ ಕೇಂದ್ರ ಸಚಿವ ಅಶ್ವಿನ್ ಕುಮಾರ್ (Former Union Minister Ashwin Kumar) ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜೀನಾಮೆಯ ಬಳಿಕ ಮಾತನಾಡಿದ ಅವರು ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ (Punjab Assembly Elections) ಆಮ್ ಆದ್ಮಿ ಪಕ್ಷ (Aam Aadmi Party) ಅಧಿಕಾರಕ್ಕೆ ಬರಲಿದ್ದು, ಕಾಂಗ್ರೆಸ್ ಗೆ ಸೋಲು ಅನುಭವಿಸಲಿದೆ ಎಂದಿದ್ದಾರೆ. 46 ವರ್ಷಗಳ ಸುದೀರ್ಘ ಒಡನಾಟದ ನಂತರ ನಾನು ಪಕ್ಷವನ್ನು ತೊರೆಯುತ್ತಿದ್ದೇನೆ ಎಂದು ಹೇಳಿದ್ದಾರೆ. ಇನ್ನು ಕಾಂಗ್ರೆಸ್ ಅಧ್ಯಕ್ಷರಿಗೆ ಪತ್ರ ಬರೆದು ಪ್ರಸ್ತುತ ಪರಿಸ್ಥಿತಿ ಮತ್ತು ನನ್ನ ಗಣತಿಯನ್ನು ಗಮನದಲ್ಲಿಟ್ಟುಕೊಂಡು, ಪಕ್ಷದ ಹೊರಗಿನ ದೊಡ್ಡ ರಾಷ್ಟ್ರೀಯ ಸಮಸ್ಯೆಗಳಿಂದ ನಾನು ಉತ್ತಮವಾಗಿ ಸೇವೆ ಸಲ್ಲಿಸುತ್ತೇನೆ ಎಂದು ತೀರ್ಮಾನಿಸಲಾಗಿದೆ ಎಂದು ಬರೆದಿದ್ದಾರೆ. ನನ್ನ ರಾಜಿನಾಮೆಗೆ ಕಾರಣ ಪಕ್ಷದಲ್ಲಿ ನಾಯಕತ್ವದ ಕೊರತೆ ಇದೆ. ಕಾಂಗ್ರೆಸ್ ಚೇತರಿಕೆಗೊಳ್ಳಲು ಸಾಧ್ಯವಾಗದೆ ನಿರಂತರವಾಗಿ ನೆಲಕಚ್ಚುತ್ತದೆ ಎಂದು ಹೇಳಿದರು. ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರತಿಮೆ ಮತ್ತು ಗುಲಾಂ ನಬಿ ಆಜಾದ್ ಅವರಿಗೆ ಪದ್ಮಭೂಷಣಕ್ಕೆ ಸಂಬಂಧಿಸಿದ ಇತ್ತೀಚಿನ ವಿವಾದಗಳು ರಾಜೀನಾಮೆ ನೀಡುವ ನಿರ್ಧಾರವನ್ನು ತೆಗೆದುಕೊಳ್ಳುವಂತೆ ಒತ್ತಾಯಿಸಿದೆ ಎಂದು ಮಾಜಿ ಕಾನೂನು ಸಚಿವರು ಹೇಳಿದರು.