ನವದೆಹಲಿ : ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಸರ್ಕಾರ ಫಾರ್ಮಾಲಿಟೀಸ್ ಪೂರ್ಣಗೊಳಿಸಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ತಿಳಿಸಿದ್ದಾರೆ.
ಸಂಪುಟ ಸಭೆಯ ನಂತರ ಸಂಪುಟ ನಿರ್ಧಾರಗಳ ಬಗ್ಗೆ ಕೇಂದ್ರ ಸಚಿವ ಅನುರಾಗ್ ಠಾಕೂರ್ ಪತ್ರಿಕಾಗೋಷ್ಠಿಯಲ್ಲಿ, ‘ಇಂದು ಪ್ರಧಾನಮಂತ್ರಿಯವರ ನೇತೃತ್ವದ ಕೇಂದ್ರ ಸಚಿವ ಸಂಪುಟವು ಮೂರು ಕೃಷಿ ಕಾನೂನುಗಳನ್ನ ರದ್ದುಗೊಳಿಸಲು ಔಪಚಾರಿಕತೆಗಳನ್ನ ಪೂರ್ಣಗೊಳಿಸಿದೆ ಎಂದು ಹೇಳಿದ್ದಾರೆ.
ಇನ್ನು ಮುಂಬರುವ ಸಂಸತ್ತಿನ ಅಧಿವೇಶನದಲ್ಲಿ ಈ ಮೂರು ಕಾನೂನುಗಳನ್ನ ಹಿಂದಕ್ಕೆ ತೆಗೆದುಕೊಳ್ಳುವುದು ನಮ್ಮ ಆದ್ಯತೆಯಾಗಿದೆ’ ಎಂದು ತಿಳಿಸಿದರು.
ಇನ್ನು ಇದೇ ವೇಳೆ ‘ಉಚಿತ ಪಡಿತರ ಒದಗಿಸುವ ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ಯನ್ನ ಮಾರ್ಚ್ 2022 ರವರೆಗೆ ವಿಸ್ತರಿಸಲು ಸಂಪುಟ ನಿರ್ಧರಿಸಿದೆ’ ಎಂದು ತಿಳಿಸಿದ್ದಾರೆ.
ಅಂದ್ಹಾಗೆ, ಕೊರೊನಾ ಬಿಕ್ಕಟ್ಟಿನ ಸಮಯದಲ್ಲಿ 2020 ರ ಮಾರ್ಚ್ʼನಲ್ಲಿ ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ ಅನ್ನು ಘೋಷಿಸಿದ್ರು. ಇನ್ನು ಈ ಯೋಜನೆಯನ್ನು ಆರಂಭದಲ್ಲಿ ಏಪ್ರಿಲ್-ಜೂನ್ 2020ರ ಅವಧಿಗೆ ಪ್ರಾರಂಭಿಸಲಾಯಿತು. ನಂತರ ನವೆಂಬರ್ 30 ರವರೆಗೆ ವಿಸ್ತರಿಸಲಾಯಿತು. ಈಗ ಸರ್ಕಾರ ಮತ್ತೊಮ್ಮೆ 2022ರ ಮಾರ್ಚ್ ವರೆಗೆ ಉಚಿತ ಪಡಿತರ ಒದಗಿಸಲು ‘ಪಿಎಂ ಗರೀಬ್ ಕಲ್ಯಾಣ್ ಅನ್ನ ಯೋಜನೆ’ ವಿಸ್ತರಿಸಿದೆ.